Homeಕರ್ನಾಟಕಪರಿಷತ್‌ನಲ್ಲಿ ಮಂಡನೆಯಾಗದ ಮತಾಂತರ ನಿಷೇಧ ಮಸೂದೆ: ಸರ್ಕಾರದ ಮುಂದಿನ ನಡೆಯೇನು?

ಪರಿಷತ್‌ನಲ್ಲಿ ಮಂಡನೆಯಾಗದ ಮತಾಂತರ ನಿಷೇಧ ಮಸೂದೆ: ಸರ್ಕಾರದ ಮುಂದಿನ ನಡೆಯೇನು?

- Advertisement -
- Advertisement -

ಕರ್ನಾಟಕ ಸರ್ಕಾರದ ಬಹು ಮಹತ್ವಕಾಂಕ್ಷೆಯ ವಿವಾದಿತ ಮತಾಂತರ ನಿಷೇಧ ಮಸೂದೆ (ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣ ವಿಧೇಯಕ, 2021) ಯನ್ನು ಕೊನೆಗೂ ವಿಧಾನ ಪರಿಷತ್‌ನಲ್ಲಿ ಮಂಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅದು ವಿಧಾನ ಸಭೆಯಲ್ಲಿ ಅಂಗೀಕಾರವಾಗಿದ್ದರೂ ಪರಿಷತ್‌ನಲ್ಲಿ ಮಂಡನೆಯಾಗದ ಕಾರಣ ಕಾಯ್ದೆಯಾಗಿ ರೂಪುಗೊಳ್ಳಲು ಸಾಧ್ಯವಿಲ್ಲ. 6 ತಿಂಗಳ ಒಳಗಾಗಿ ಪರಿಷತ್‌ನಲ್ಲಿ ಮಂಡನೆಯಾಗಿ, ಬಹುಮತದಿಂದ ಅಂಗೀಕಾರಗೊಂಡು, ರಾಜ್ಯಪಾಲರ ಸಹಿಯ ನಂತರವಷ್ಟೇ ಕಾಯ್ದೆಯಾಗಲು ಸಾಧ್ಯ. ಹೀಗಿರುವಾಗ ಸರ್ಕಾರ ಸರ್ಕಾರದ ಮುಂದಿನ ನಡೆಯೇನು ಎಂಬ ಪ್ರಶ್ನೆ ಎದ್ದಿದೆ.

ಸರ್ಕಾರವು ಅದನ್ನು ಪರಿಷತ್‌ನಲ್ಲಿ ಮಂಡಿಸದಿರಲು ಮುಖ್ಯ ಕಾರಣ ಬಹುಮತದ ಕೊರತೆ. ಅಲ್ಲದೆ ಪಕ್ಷದಲ್ಲಿನ ಕೆಲವರ ವಿರೋಧ ಸಹ ಸರ್ಕಾರಕ್ಕೆ ತಲೆನೋವಾಗಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಸದಸ್ಯರನ್ನು ನೆಚ್ಚಿಕೊಂಡು ಮಸೂದೆ ಮಂಡಿಸಿದರೆ ಸೋಲಾಗಬಹುದೆಂಬ ಕಾರಣಕ್ಕೆ ಮಂಡನೆ ಮಾಡಿಲ್ಲ. ಬದಲಿಗೆ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿ ಅಧಿವೇಶನ ಅಂತ್ಯಗೊಳಿಸಲಾಗಿದೆ.

ಸದನದ ಕೊನೆ ದಿನ ಉಪಸಭಾಪತಿ ಪ್ರಾಣೇಶ್‌ ಮತ್ತು ಬಿಜೆಪಿ ಸದಸ್ಯರಾದ ರುದ್ರೇಗೌಡರವರು ಬೆಳಗಾವಿಯಿಂದ ಹೊರಟು ದಾವಣಗೆರೆ ತಲುಪಿದ್ದರು. ಅವರು ತುರ್ತಾಗಿ ವಾಪಸ್ ಬೆಳಗಾವಿಯ ಸುವರ್ಣ ಸೌಧಕ್ಕೆ ಬರುವಂತೆ ಸೂಚಿಸಲಾಗಿತ್ತು. ಅವರು ಬರುವಿಕೆಗಾಗಿ ಆಡಳಿತ ಪಕ್ಷ ಕಾಯುತ್ತಿತ್ತು. ಅದೇ ಸಂದರ್ಭದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಅಧಿವೇಶನ ಆರಂಭಿಸುವಂತೆ ಸಭಾಪತಿ ಕೊಠಡಿಗೆ ತೆರಳಿ ಒತ್ತಾಯಿಸುತ್ತಿದ್ದರು. ಆದರೆ ಸಮಯ ಮೀರುತ್ತಿತ್ತು. ಇನ್ನೊಂದೆಡೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್‌ರವರು ಬಹಿರಂಗವಾಗಿಯೇ ಮತಾಂತರ ನಿಷೇಧ ಮಸೂದೆಯನ್ನು ವಿರೋಧಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಬಹುಮತವಿಲ್ಲದಿದ್ದಾಗ ಮಸೂದೆ ಮಂಡಿಸಿ ಅದಕ್ಕೆ ಸೋಲಾಗುವುದರಿಂದ ತಪ್ಪಿಸಿಕೊಳ್ಳಲು ಸರ್ಕಾರ ಹಿಂತೆಗೆದುಕೊಂಡಿದೆ.

ಸುಗ್ರೀವಾಜ್ಞೆ ಮೂಲಕ ಜಾರಿ?

ಮತಾಂತರ ನಿಷೇಧ ಮಸೂದೆಯ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಮತ್ತು ನೂರಾರು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಆದರೆ ಸರ್ಕಾರ ಏನಾದರೂ ಮಾಡಿ ಅದನ್ನು ಜಾರಿಗೊಳಿಸಿಯೇ ಸಿದ್ದ ಎಂದು ಹಠ ಹಿಡಿದಿದೆ. ಮುಂದಿನ ಅಧಿವೇಶನ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆಯಿದೆ. ಅಲ್ಲಿಯವರೆಗೂ ಕಾಯದ ಸರ್ಕಾರ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ರಾಜ್ಯಪಾಲರ ಒಪ್ಪಿಗೆ ಪಡೆದಲ್ಲಿ ಕಾಯ್ದೆಯ ಅಂಶಗಳನ್ನು ಹೀಗಿನಿಂದಲೇ ಜಾರಿಗೊಳಿಸಬಹುದು. ಆದರೆ 6 ತಿಂಗಳೊಳಗೆ ಸದನದಲ್ಲಿ ಮಂಡಿಸಿ ಬಹುಮತದಿಂದ ಅಂಗೀಕರಿಸಬೇಕಾಗುತ್ತದೆ.

ಮುಂದಿನ ಅಧಿವೇಶನದಲ್ಲಿ ಮಂಡನೆ

ಮುಂದಿನ ವಿಧಾನ ಪರಿಷತ್ ಅಧಿವೇಶನದಲ್ಲಿ ಮಂಡಿಸಿ ಹೇಗಾದರೂ ಬಹುಮತವನ್ನು ಒಟ್ಟುಗೂಡಿಸಿ ಮಸೂದೆಯನ್ನು ಪಾಸ್ ಮಾಡುವುದು ಸರ್ಕಾರದ ಎರಡನೇ ಆಯ್ಕೆಯಾಗಿದೆ. ಸದ್ಯ ಬಿಜೆಪಿಗೆ ವಿಧಾನ ಪರಿಷತ್‌ನಲ್ಲಿ ಬಹುಮತಕ್ಕೆ ಸದ್ಯ ಒಬ್ಬ ಸದಸ್ಯರ ಕೊರತೆಯಿದೆ. ಇತ್ತೀಚೆಗೆ ನಡೆದ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿತಯಾಗಿ ಜಯ ಗಳಿಸಿದ್ದಾರೆ. ಅವರನ್ನು ಬಿಜೆಪಿ ತನ್ನೆಡೆಗೆ ಸೆಳೆದುಕೊಳ್ಳುವ ಕಸರತ್ತು ಮಾಡಬಹುದು. ಇಲ್ಲವೇ ಕೆಲ ಜೆಡಿಎಸ್ ಸದಸ್ಯರನ್ನು ಮನವೊಲಿಸುವ ಕೆಲಸ ಮಾಡಬಹುದು.

ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ

ಸದ್ಯಕ್ಕೆ ವಿಧಾನಪರಿಷತ್‌ನಲ್ಲಿ ಮಸೂದೆ ಜಾರಿಯಾಗದಂತೆ ತಡೆಯುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಅದು ಸಹ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ ಸಿಗದಂತೆ ನೋಡಿಕೊಳ್ಳುವ ಕಾರ್ಯತಂತ್ರ ರೂಪಿಸಲಿದೆ. ಪಕ್ಷೇತರ ಶಾಸಕರನ್ನು ತನ್ನೆಡೆಗೆ ಸೆಳೆದುಕೊಳ್ಳುವುದು, ಜೆಡಿಎಸ್ ಮೇಲೆ ಒತ್ತಡ ತರುವುದು ಸೇರಿ ಹಲವು ಮಾರ್ಗಗಳನ್ನು ಅನುಸರಿಸಬಹುದಾಗಿದೆ.

ಜನಾಭಿಪ್ರಾಯ

ಈ ಮಸೂದೆಯನ್ನು ನೂರಾರು ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತಿವೆ. ಅವು ಮತ್ತಷ್ಟು ಜನಾಭಿಪ್ರಾಯ ರೂಪಿಸುವ ಮೂಲಕ ಮಸೂದೆ ಜಾರಿಯಾಗದಂತೆ ಸರ್ಕಾರದ ಮೇಲೆ ಒತ್ತಡ ತರುವ ಸಾಧ್ಯತೆಯು ಇದೆ.


ಇದನ್ನೂ ಓದಿ: ‘ಮತಾಂತರ ನಿಷೇಧ ಮಸೂದೆ’ ವಿಧಾನಸಭೆಯಲ್ಲಿ ಪಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. E vishayadalli yaru yenu tiliyade aakshepane madabardu munde onda dina nam hindu sanskruti dharma vichar achara yalla mare yaguttide nanu obba central job holder.
    Own my experience in tamilnadu kerala and andra Pradesh bhal speed aagi dharma parivartane aagtide aaddarinda stalin,peter,etc tarahad names aagtive addarind nammalliye kelavu sc,st,cast feeling maretu yalla ondagi balon dayavittu sahakarisi

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...