Homeಮುಖಪುಟಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

- Advertisement -
- Advertisement -

ಹರಿದ್ವಾರದಲ್ಲಿ ನಡೆದ ಮೂರು ದಿನಗಳ ’ಧರ್ಮ ಸಂಸದ್‌’ ಧಾರ್ಮಿಕ ಸಭೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೋಶಕ್ಕೆ ಒಳಗಾಗಿದ್ದು, ಮುಸ್ಲಿಮರ ವಿರುದ್ಧ ಬಹಿರಂಗ ಹಿಂಸಾಚಾರಕ್ಕೆ ಕರೆ ನೀಡಿರುವುದನ್ನು ಖಂಡಿಸಿದ್ದಾರೆ. ದೇಶದ ನಾಯಕರು ಈ ಬಗ್ಗೆ ಮೌನ ವಹಿಸಿರುವುದನ್ನು ನೆಟ್ಟಿಗರು ಸೇರಿದಂತೆ ಅಂತರ ರಾಷ್ಟ್ರೀಯ ಮಾಧ್ಯಮಗಳು ಪ್ರಶ್ನಿಸಿ, ಆತಂಕ ವ್ಯಕ್ತಪಡಿಸಿವೆ.

ಡಿಸೆಂಬರ್ 17 ಮತ್ತು 19 ರ ನಡುವೆ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿರುವ ಹಲವು ಬಲಪಂಥೀಯ ನಾಯಕರು ಬಹಿರಂಗವಾಗಿಯೇ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಈ ಭಾಷಣದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

“ನಮ್ಮಲ್ಲಿ 100 ಜನರು 20 ಲಕ್ಷ ಜನರನ್ನು (ಮುಸ್ಲಿಮರು) ಕೊಲ್ಲಲು ಸಿದ್ಧರಿದ್ದರೆ, ನಾವು ಗೆದ್ದು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಹಿಂದೂ ಮಹಾಸಭಾದ ನಾಯಕಿ ಪೂಜಾ ಶಕುನ್ ಪಾಂಡೆ ಹೇಳಿದ್ದಾರೆ. ದೇಶದ ಮುಸ್ಲಿಮರನ್ನು ಉಲ್ಲೇಖಿಸಿ “ಕೊಲ್ಲಲು ಮತ್ತು ಜೈಲಿಗೆ ಹೋಗಲು ಸಿದ್ಧರಾಗಿರಿ” ಎಂದು ಬಲಪಂಥೀಯ ಹಿಂದೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: ಮುಸ್ಲಿಮರ ವಿರುದ್ಧ ದ್ವೇ‍ಷ ಭಾಷಣ: ಕಾನೂನು ಬಾಹಿರ ಎಂದ ಉತ್ತರಾಖಂಡ ಪೊಲೀಸರು

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಕ್ಷದೊಂದಿಗೆ ನಿಕಟ ಸಂಬಂಧ ಹೊಂದಿರುವ ಪ್ರಭಾವಿ ಧಾರ್ಮಿಕ ಮುಖಂಡರು ಮತ್ತು ಪಕ್ಷದ ಕೆಲವು ಸದಸ್ಯರು ಈ ಸಮ್ಮೆಳನದಲ್ಲಿ ಭಾಗವಹಿಸಿದ್ದರು.

ಈ ಘಟನೆಯ ವೀಡಿಯೊಗಳು ಈ ವಾರ ದೇಶದ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ. ಆದರೂ, ಪ್ರಧಾನಿ ಮೋದಿಯವರು ಮೌನವಾಗಿದ್ದಾರೆ. ಇದು ತಮ್ಮ ಕಟ್ಟಾ ಬೆಂಬಲಿಗರ ರಕ್ಷಣೆಗೆ ವಹಿಸಿರುವ ಮೌನ ಸಂಕೇತವೆಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

“ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಹಾಸ್ಯನಟರನ್ನು ಸುಲಭವಾಗಿ ಜೈಲಿಗಟ್ಟುವ ಪೊಲೀಸರು, ಸಾಕ್ಷ್ಯಾಧಾರಗಳ ಕೊರತೆಯ ಆರೋಪದ ಮೇಲೆ ಇವರುಗಳ ಕ್ರಮ ಕೈಗೊಳ್ಳುವಲ್ಲಿ ನಿಧಾನಗತಿ ಅನುಸರಿಸುತ್ತಿದ್ದಾರೆ. ಜೊತೆಗೆ ಪ್ರತಿಪಕ್ಷದ ರಾಜಕೀಯ ಗುಂಪುಗಳು ಸಹ ತಮ್ಮ ಪ್ರತಿಕ್ರಿಯೆ ನೀಡುವಲ್ಲಿ ವಹಿಸಿರುವ ಸಂಯಮ ಎಲ್ಲವೂ 2014 ರಲ್ಲಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಬಲಪಂಥೀಯ ಹಿಂದೂ ರಾಷ್ಟ್ರೀಯತೆಯು ದೇಶವನ್ನು ಯಾವ ಮಟ್ಟದಲ್ಲಿ ಹಿಡಿದಿದೆ ಎಂಬುದರ ಸೂಚನೆಯಾಗಿದೆ” ಎಂದು ದಿ ನ್ಯೂಯಾರ್ಕ್ ಟೈಮ್ಸ್ ಹೇಳಿದ.

“ಭಾರತದ ಸೆಕ್ಯುಲರಿಸಂ ಅನ್ನು ಸಂರಕ್ಷಿಸುವ ಅಗತ್ಯವನ್ನು ಪ್ರಸ್ತಾಪಿಸುವ ಬೆರಳೆಣಿಕೆಯಷ್ಟು ರಾಜಕೀಯ ನಾಯಕರು ಮಾತ್ರ ಉಳಿದಿದ್ದಾರೆ” ಎಂದು ನವದೆಹಲಿ ಬಳಿಯ ಅಶೋಕ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನದ ಪ್ರಾಧ್ಯಾಪಕ ಗಿಲ್ಲೆಸ್ ವೆರ್ನಿಯರ್ಸ್ ಹೇಳಿದ್ದಾರೆ.

ಈ ವಿಡಿಯೋಗಳು, ವರದಿಗಳು ವೈರಲ್ ಆಗುತ್ತಿದ್ದಂತೆ ಆರ್‌ಟಿಐ ಕಾರ್ಯಕರ್ತ ಮತ್ತು ತೃಣಮೂಲ ನಾಯಕ ಸಾಕೇತ್ ಗೋಖಲೆ ಧಾರ್ಮಿಕ ಸಭೆಯ ವಿರುದ್ಧ ಜವಳಾಪುರ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ದೂರು ಸಲ್ಲಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.

ವಿವಾದಿತ ಉಗ್ರ ಹಿಂದುತ್ವ ನಾಯಕ ಯತಿ ನರಸಿಂಗಾನಂದ ಧಾರ್ಮಿಕ ಸಭೆಯನ್ನು ಆಯೋಜಿಸಿದ್ದರು. ಸಮಾವೇಶದಲ್ಲಿ ಹಿಂದೂ ರಕ್ಷಣಾ ಸೇನೆಯ ಅಧ್ಯಕ್ಷ ಸ್ವಾಮಿ ಪ್ರಬೋಧಾನಂದ ಗಿರಿ, ಸ್ವಾಮಿ ಆನಂದಸ್ವರೂಪ್, ಸಾಧ್ವಿ ಅನ್ನಪೂರ್ಣ ಮಾತನಾಡಿದ್ದರು. ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸಮಾವೇಶದ ಕೊನೆಯ ದಿನದಂದು ಭಾಗವಹಿಸಿದ್ದರು ಆದರೆ ‘ದ್ವೇಷ ಭಾಷಣ’ದಿಂದ ದೂರವಿದ್ದರು ಎಂದು ವರದಿಯಾಗಿದೆ.

“ಮುನಾವರ್ ಫರೂಕಿ ಅವರು ಮಾಡದ ಜೋಕ್‌ಗಳ ಆರೋಪಕ್ಕಾಗಿ ನಿರಂತರವಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ, ಆದರೆ ಹರಿದ್ವಾರದಲ್ಲಿ ಮುಸ್ಲಿಮರ ವಿರುದ್ಧ ನರಮೇಧಕ್ಕೆ ಬಹಿರಂಗವಾಗಿ ಕರೆ ನೀಡಿದ ಧರ್ಮ ಸಂಸದ್ ಸದಸ್ಯರ ವಿರುದ್ಧ ಯಾವುದೇ ಕ್ರಮವಿಲ್ಲ… ಭಾರತ ಇನ್ನೂ ಪ್ರಜಾಪ್ರಭುತ್ವವಾಗಿದೆಯೇ?!” ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಡಾ.ಶಾಮಾ ಮೊಹಮ್ಮದ್ ಟ್ವೀಟ್ ಮಾಡಿದ್ದಾರೆ.

ಧರ್ಮ ಸಂಸದ್ ಸದಸ್ಯರ ಮಾತುಗಳನ್ನು ಕಾನೂನು ಬಾಹಿರ ಎಂದಿರುವ ಉತ್ತರಖಂಡ ಪೊಲೀಸರು ಧಾರ್ಮಿಕ ದ್ವೇಷ ಬಿತ್ತುವ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

“ಹರಿದ್ವಾರ್ ಧರ್ಮ ಸಂಸದ್‌ನಲ್ಲಿ ಏನು ನಡೆದಿದೆಯೋ ಅದು ತಪ್ಪು. ಸಂಬಂಧಪಟ್ಟವರು ಮತ್ತು ಹೊಣೆಗಾರರ ವಿರುದ್ಧ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ” ಎಂದು ಉತ್ತರಾಖಂಡ ಸರ್ಕಾರದ ವಕ್ತಾರ ಸುಬೋಧ್ ಉನಿಯಾಲ್ ಹೇಳಿದ್ದಾರೆ.


ಇದನ್ನೂ ಓದಿ: ‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದ್ವೇಷದ ಬಾಶಣ ಮಾಡಿರುವವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...