Homeಕರ್ನಾಟಕಬಂದ್‌ನಿಂದ ಕನ್ನಡಿಗರಿಗೇ ಕಷ್ಟ; ಕಾನೂನಾತ್ಮಕವಾಗಿ ಎಂಇಎಸ್ ನಿಷೇಧಿಸಿ- ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ

ಬಂದ್‌ನಿಂದ ಕನ್ನಡಿಗರಿಗೇ ಕಷ್ಟ; ಕಾನೂನಾತ್ಮಕವಾಗಿ ಎಂಇಎಸ್ ನಿಷೇಧಿಸಿ- ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ

- Advertisement -
- Advertisement -

ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸಿದ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಡಿಸೆಂಬರ್‌ 31 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಆದರೆ ಬಂದ್‌ಗೆ ಹಲವು ವಲಯಗಳಿಂದ ಅಸಮಾಧಾನ ವ್ಯಕ್ತವಾಗಿದೆ. ಬಂದ್‌ ಮಾಡಿದರೇ ತೊಂದರೆ, ನಷ್ಟ ಅನುಭವಿಸುವುದು ನಾವೇ ಎನ್ನುವ ಹೇಳಿಕೆಗಳು ಬರುತ್ತಿದೆ.

ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ, ಕರ್ನಾಟಕ ಬಂದ್‌ನಿಂದ ಕನ್ನಡಿಗರಿಗೇ ಕಷ್ಟ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಜರುಗಿಸಿ ಸಂಘಟನೆಯನ್ನು ನಿಷೇಧ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ  ಹೆಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಹೆಚ್‌.ಡಿ.ಕುಮಾರಸ್ವಾಮಿ, “ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಮಾಡುವುದಕ್ಕೆ ಕರೆ ನೀಡಲಾಗಿದೆ. ಬಂದ್ ಮಾಡುವುದರಿಂದ ಏನು ಪ್ರಯೋಜನ..? ಅನುಕೂಲ ಯಾರಿಗೆ..? ಅನನುಕೂಲ ಯಾರಿಗೆ..? ಅನ್ನೋದು ಮುಖ್ಯ. ಈ  ಬಂದ್ ಕರೆಯಿಂದ ಮಹಾರಾಷ್ಟ್ರಕ್ಕೆ ತೊಂದರೆ ಇಲ್ಲ. ರಾಜ್ಯದ ಜನರಿಗೆ ತೊಂದರೆ ಆಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

’ಎಂಇಎಸ್ ಸೇರಿದಂತೆ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ರಾಜ್ಯ ಸರಕಾರ ಮುಲಾಜಿಲ್ಲದೆ ಮುಂದಾಗಬೇಕು. ಕಾನೂನು ವ್ಯಾಪ್ತಿಯಲ್ಲಿ ಕ್ರಮಕ್ಕೆ ಸರ್ಕಾರ ಮೀನಾಮೇಷ ಇಲ್ಲದೇ ಮುಂದಾಗಬೇಕು. ಕಠಿಣ ಕ್ರಮ ತೆಗೆದುಕೊಳ್ಳುವುದು ಸರ್ಕಾರದ ಜವಾಬ್ದಾರಿ. ಬಂದ್ ಘೋಷಣೆಯಿಂದ ನಮ್ಮ ಜನರಿಗೆ ತೊಂದರೆ ಆಗುತ್ತದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ, ಕೂಲಿ ಕೆಲಸದವರಿಗೆ ಆಗುವ ಕಷ್ಟದ ಬಗ್ಗೆ ಚಿಂತಿಸಬೇಕು. ಬಂದ್‌ಗೆ ಕರೆ ನೀಡಿದವರು ಕೂಡ ಈ ಬಗ್ಗೆ ಯೋಚಿಸಬೇಕು’ ಎಂದು ಮಾಜಿ ಸಿಎಂ ಹೇಳಿದ್ದಾರೆ.

’ಕರ್ನಾಟಕ ಬಂದ್‌ನಿಂದ ಕನ್ನಡಿಗರಿಗೆ ಬಹಳ ಅನಾನುಕೂಲವೇ ಆಗುತ್ತದೆ. ಹೋರಾಟಗಾರರು ಸರ್ಕಾರದ ಮೇಲೆ ಒತ್ತಡ ಹೇರಬೇಕು. ಕನ್ನಡ ದ್ರೋಹಿಗಳನ್ನು ಹತ್ತಿಕ್ಕಲು ಏನು ಬೇಕೋ ಆ ಕ್ರಮ ಕೈಗೊಳ್ಳಲು ಒತ್ತಡ ಹೇರಬೇಕು’ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

“ಎಂಇಎಸ್ ಸಂಘಟನೆಯನ್ನು ಕಾನೂನಾತ್ಮಕವಾಗಿ ನಿಷೇಧ ಮಾಡಬೇಕು. ಸರಿಯಾದ ತೀರ್ಮಾನ ಮಾಡಬೇಕು. ಕೋರ್ಟ್‌ಗೆ ಹೋಗಿ ತಡೆ ತರುವಂತೆ ನಿಷೇಧ ಹೇರಬಾರದು. ಸರ್ಕಾರ ಈ ಬಗ್ಗೆ ಯೋಚಿಸಿ ತೀರ್ಮಾನ ತೆಗೆದುಕೊಳ್ಳಲಿ” ಎಂದಿದ್ದಾರೆ.

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ಬೆಳಗಾವಿಯಲ್ಲಿ ನಡೆಸಿರುವ ಪುಂಡಾಟಿಕೆ ವಿರೋಧಿಸಿರುವ ವಿವಿಧ ಕನ್ನಡ ಪರ ಸಂಘಟನೆಗಳು, ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿಸೆಂಬರ್‌ 31 ರಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿ, ಕರೆ ನೀಡಿವೆ.


ಇದನ್ನೂ ಓದಿ: ಎಂಇಎಸ್‌ ನಿಷೇಧಕ್ಕೆ ಒತ್ತಡ: ಡಿಸೆಂಬರ್‌ 31ಕ್ಕೆ ಸಂಪೂರ್ಣ ಕರ್ನಾಟಕ ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...