Homeಕರ್ನಾಟಕಓಮಿಕ್ರಾನ್ ಆತಂಕ: ರಾಜ್ಯದಲ್ಲಿ ಡಿ.28 ರಿಂದ 10 ದಿನ ನೈಟ್ ಕರ್ಫ್ಯೂ

ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ಡಿ.28 ರಿಂದ 10 ದಿನ ನೈಟ್ ಕರ್ಫ್ಯೂ

- Advertisement -
- Advertisement -

ದೇಶದಲ್ಲಿ ಓಮಿಕ್ರಾನ್ ರೂಪಾಂತರಿ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯದಲ್ಲಿಯೂ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು, 10 ದಿನಗಳ ನೈಟ್ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಡಿಸೆಂಬರ್ 28 ರಿಂದ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ 10 ದಿನಗಳವರೆಗೆ ನೈಟ್ ಕರ್ಫ್ಯೂ ವಿಧಿಸಲು ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೊಸ ವರ್ಷದ ಆಚರಣೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಸಭೆ ನಡೆಸಿ ನಿರ್ಧರಿಸಲಾಗುವುದು ಎಂದು ಶನಿವಾರ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇಂದು ತಜ್ಞರ ಸಮಿತಿಯ ಜೊತೆ ಚರ್ಚೆ ನಡೆಸಿ ತೀರ್ಮಾನ ತಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಸರ್ಕಾರದಿಂದ ನಿರ್ಬಂಧ

“ಈಗಿರುವ ನಿಯಮಗಳಲ್ಲಿ ಬದಲಾವಣೆ ಮಾಡುವ ಮುನ್ನ ನಾಳೆ (ಭಾನುವಾರ) ಬೆಂಗಳೂರಿನಲ್ಲಿ ತಜ್ಞರ ಸಮಿತಿ ಸದಸ್ಯರು ಮತ್ತು ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ. ಕಳೆದ ಕೆಲವು ದಿನಗಳಲ್ಲಿ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳು ನೈಟ್‌ ಕರ್ಫ್ಯೂ ಜಾರಿಗೊಳಿಸುತ್ತಿರುವ ಬಗ್ಗೆ ನನಗೆ ಮಾಹಿತಿಯಿದೆ” ಎಂದು ಮುಖ್ಯಮಂತ್ರಿ ಶನಿವಾರ ಹೇಳಿದ್ದರು.

ಇನ್ನು ಹೊಸ ವರ್ಷದ ಸಂಭ್ರಮಾಚರಣೆ ಆರಂಭವಾಗಲಿರುವ ಡಿಸೆಂಬರ್ 30 ರಿಂದ ಜನವರಿ 2ರ ವರೆಗೆ ರಾಜ್ಯದಾದ್ಯಂತ ನಿರ್ಬಂಧ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಡಿಜೆ, ಬಹಿರಂಗ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಬಾರ್, ರೆಸ್ಟೋರೆಂಟ್ ಮತ್ತಿತರ ಸ್ಥಳಗಳಲ್ಲಿ 50 % ಮಂದಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ತಿಳಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಇಂದಿನ ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್‌, ಕಂದಾಯ ಸಚಿವ ಆರ..ಅಶೋಕ್, ಗೃಹ ಸಚಿವ ಅರಗ ಜ್ಞಾನೇಂದ್ರ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.


ಇದನ್ನೂ ಓದಿ: ‘ನೀವು ಬಿಜೆಪಿ ಏಜೆಂಟಾ?’- ಕನ್ಹಯ್ಯ ಪ್ರಶ್ನೆಗಳಿಗೆ ಪತ್ರಕರ್ತ ತಬ್ಬಿಬ್ಬು; ಕ್ಷಮೆಯಾಚಿಸಿದ ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...