ಉತ್ತರ ಪ್ರದೇಶ ಚುನಾವಣೆಯನ್ನು ಮಹಿಳಾ ಕೇಂದ್ರಿತವನ್ನಾಗಿ ನಡೆಸಲು ನಿರ್ಧರಿಸಿರುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಇಂದು ಲಕ್ನೋದಲ್ಲಿ “ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ” ಎಂಬ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಝಾನ್ಸಿಯಲ್ಲಿ ಕಾಂಗ್ರೆಸ್ ಏರ್ಪಡಿಸಿದ್ದ ಮಹಿಳಾ ಮ್ಯಾರಥಾನ್ ಸ್ಪರ್ಧೆಗೆ ಸಾವಿರಾರು ಜನರು ಭಾಗವಹಿಸಿದ್ದಾರೆ. ಒಮ್ರಿಕಾನ್ ಭೀತಿಯ ಕಾರಣಕ್ಕೆ ಜಿಲ್ಲಾಡಳಿತ ಮ್ಯಾರಥಾನ್‌ಗೆ ಅನುಮತಿ ನಿರಾಕರಿಸಿದ್ದರ ನಡುವೆಯೂ ಸಾವಿರಾರು ಹುಡುಗಿಯರು ಭಾಗವಹಿಸಿದ್ದಾರೆ. ಇದರ ಫೋಟೊ ಮತ್ತು ವಿಡಿಯೋಗಳನ್ನು ಕಾಂಗ್ರೆಸ್ ಪಕ್ಷದ ಟ್ವಿಟರ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.
ಈ ಸ್ಪರ್ಧೆಯಲ್ಲಿ ಮೊದಲ ಮೂರು ಸ್ಥಾನ ಗಳಿಸಿದವರಿಗೆ ಸ್ಕೂಟಿ ಬಹುಮಾನ ನೀಡಲಾಗುವುದು, 4ರಿಂದ 25ನೇ ಸ್ಥಾನ ಗಳಿಸಿದವರಿಗೆ ಸ್ಮಾರ್ಟ್‌ಪೋನ್ ಮತ್ತು 26 ರಿಂದ 100 ನೇ ಸ್ಥಾನ ಗಳಿಸಿದವರಿಗೆ ಫಿಟ್ನೆಸ್ ಬ್ಯಾಂಡ್ ಮತ್ತು 1000 ದವರೆಗೆ ಸ್ಥಾನ ಗಳಿಸಿದವರಿಗೆ ಪದಕಗಳನ್ನು ಬಹುಮಾನವನ್ನಾಗಿ ನೀಡಲಾಗುವುದು ಎಂದು ಪಕ್ಷವು ತಿಳಿಸಿದೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ 40% ದಷ್ಟು ಟಿಕೆಟ್ ನೀಡುವುದಾಗಿ ಘೋಷಿಸಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿದರೆ 12 ನೇ ತರಗತಿ ಉತ್ತೀರ್ಣರಾದ ಹುಡುಗಿಯರಿಗೆ ಸ್ಮಾರ್ಟ್‌ಫೋನ್ ಮತ್ತು ಎಲ್ಲಾ ಪದವೀಧರ ಯುವತಿಯರಿಗೆ ಎಲೆಕ್ಟ್ರಾನಿಕ್ ಸ್ಕೂಟಿ ನೀಡುತ್ತೇವೆ ಎಂದು ಭರವಸೆ ನೀಡಿದೆ.
ಕಾಂಗ್ರೆಸ್ ಪಕ್ಷವು ಉತ್ತರ ಪ್ರದೇಶದಲ್ಲಿನ ಲಿಂಗ ಸಮಾನತೆಯ ಕುರಿತು ತನ್ನ ಪ್ರಚಾರವನ್ನು ಕೇಂದ್ರೀಕರಿಸಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ನಿಯಂತ್ರಿಸಬೇಕೆಂದು ಆಗ್ರಹಿಸುತ್ತಿದೆ. ಕಳೆದ ವರ್ಷದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶಾದ್ಯಂತ ಆಕ್ರೋಶ ಹುಟ್ಟು ಹಾಕಿದ್ದನ್ನು ನಾವಿಲ್ಲಿ ಗಮನಿಸಬಹುದು.
ಇದನ್ನೂ ಓದಿ: ಯುಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೆ ಪದವಿ ವಿದ್ಯಾರ್ಥಿನಿಯರಿಗೆ ‘ಸ್ಕೂಟಿ’: ಪ್ರಿಯಾಂಕ ಗಾಂಧಿ ಮತ್ತೊಂದು ಘೋಷಣೆ



First such Women movement in India
It definitely provides a Philip to Women empowerment in India and ultimately leads to 33% reservation to Women in Parliament
Great achievement
First such Women movement in India
It definitely provides a Philip to Women empowerment in India and ultimately leads to 33% reservation to Women in Parliament
Great achievement
Good
First such Women movement in India