Homeಅಂತರಾಷ್ಟ್ರೀಯದಕ್ಷಿಣ ಆಫ್ರಿಕಾದ ವರ್ಣಭೇದ ನೀತಿ ವಿರೋಧಿ ಹೋರಾಟಗಾರ ಆರ್ಚ್ ಬಿಷಪ್ ಡೆಸ್ಮಂಡ್ ಟುಟು ನಿಧನ

ದಕ್ಷಿಣ ಆಫ್ರಿಕಾದ ವರ್ಣಭೇದ ನೀತಿ ವಿರೋಧಿ ಹೋರಾಟಗಾರ ಆರ್ಚ್ ಬಿಷಪ್ ಡೆಸ್ಮಂಡ್ ಟುಟು ನಿಧನ

- Advertisement -
- Advertisement -

ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿ ಕೊನೆಗೊಳಿಸಲು ಹೋರಾಡಿದ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಮಾನವ ಹಕ್ಕುಗಳ ಹೋರಾಟಗಾರ ಆರ್ಚ್‌ಬಿಷಪ್ ಎಮೆರಿಟಸ್ ಡೆಸ್ಮಂಡ್ ಎಂಪಿಲೊ ಟುಟು (90) ಇಂದು ಕೊನೆಯುಸಿರೆಳೆದಿದ್ದಾರೆ.

ಸಮಾನತೆ ಮತ್ತು ಜನಾಂಗೀಯ ನ್ಯಾಯಕ್ಕಾಗಿ ಹೋರಾಟಗಾರರಾಗಿದ್ದ ಟುಟು ಅವರು ಕೇಪ್ ಟೌನ್‌ನಲ್ಲಿ ನಿಧನರಾದರು ಎಂದು ಅಧ್ಯಕ್ಷರ ಕಚೇರಿ ತಿಳಿಸಿದೆ.

ಪ್ರಖ್ಯಾತ ಹೋರಾಟಗಾರ ನೆಲ್ಸನ್ ಮಂಡೇಲಾ ಅವರು ಜೈಲಿನಲ್ಲಿದ್ದ ದೀರ್ಘ ವರ್ಷಗಳಲ್ಲಿ, ಆರ್ಚ್‌ಬಿಷಪ್ ಟುಟು ಅವರು ಅಂದಿನ ಆಡಳಿತದ ವಿರುದ್ಧ ದನಿ ಎತ್ತಿದವರು ಮತ್ತು ಮಾನವ ಹಕ್ಕುಗಳ ಅವರ ನಿರಂತರ ಪ್ರಯತ್ನಗಳಿಗಾಗಿ 1984 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಗೆದ್ದರು.

1994 ರಲ್ಲಿ ವರ್ಣಭೇದ ನೀತಿಯು ಔಪಚಾರಿಕವಾಗಿ ಅಂತ್ಯಕವಾದ ನಂತರವೂ ಟುಟು ಅವರು ಮಾನವ ಹಕ್ಕುಗಳ ಹೋರಾಟವನ್ನು ನಿಲ್ಲಿಸಲಿಲ್ಲ. ಸತ್ಯ ಮತ್ತು ಸಮನ್ವಯ ಆಯೋಗದ ಅಧ್ಯಕ್ಷರಾಗಿದ್ದುಕೊಂಡು ಹಿಂದಿನ ಜನಾಂಗೀಯ ದೌರ್ಜನ್ಯಗಳ ಇತಿಹಾಸವನ್ನು ತನಿಖೆ ಮಾಡಲು, ಅಗತ್ಯವಿರುವಲ್ಲಿ ನ್ಯಾಯವನ್ನು ಅನ್ವಯಿಸಲು ಮತ್ತು ಇಡೀ ಜನಸಂಖ್ಯೆಯು ಉಜ್ವಲ ಭವಿಷ್ಯಕ್ಕೆ ಹೆಜ್ಜೆ ಹಾಕಲು ಹೋರಾಡಿದ್ದರು.

ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ರಾಜಕಾರಣಿಗಳ ವಿರುದ್ಧ ವಿಮರ್ಶಾತ್ಮಕವಾಗಿ ಮಾತನಾಡುವುದನ್ನು ಮುಂದುವರೆಸಿದರು. ಅವರು HIV/AIDS, ಬಡತನ, ವರ್ಣಭೇದ ನೀತಿ, ಹೋಮೋಫೋಬಿಯಾ ಮತ್ತು ಟ್ರಾನ್ಸ್‌ಫೋಬಿಯಾ ಸೇರಿದಂತೆ ವಿವಿಧ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಮಾನವ ಹಕ್ಕುಗಳಿಗಾಗಿನ ಅವರ ಹೋರಾಟ ದಕ್ಷಿಣ ಆಫ್ರಿಕಾಕ್ಕೆ ಸೀಮಿತವಾಗಿರಲಿಲ್ಲ. 2015 ರಲ್ಲಿ ಅವರು ರಚಿಸಿದ ಪೀಸ್ ಫೌಂಡೇಶನ್ ಮೂಲಕ ಶಾಂತಿಯುತ ಜಗತ್ತಿಗಾಗಿ ಶ್ರಮಿಸುತ್ತಿದ್ದರು. ಪ್ರತಿಯೊಬ್ಬ ಮಾನವರಿಗೂ ಘನತೆಯಿದೆ ಎಂದು ಎತ್ತಿ ಹಿಡಿದಿದ್ದರು.

ಅಧ್ಯಕ್ಷ ಸಿರಿಲ್ ರಾಮಾಫೋಸಾ ಅವರು ಟುಟು ನಿಧನದ ಕುರಿತು ಎಲ್ಲಾ ದಕ್ಷಿಣ ಆಫ್ರಿಕಾದ ಪರವಾಗಿ ಸಂತಾಪ ವ್ಯಕ್ತಪಡಿಸಿದ್ದು, ಡೆಸ್ಮಂಡ್ ಟುಟು ಅಪ್ರತಿಮ ಆಧ್ಯಾತ್ಮಿಕ ನಾಯಕ ಮತ್ತು ಜಾಗತಿಕ ಮಾನವ ಹಕ್ಕುಗಳ ಪ್ರಚಾರಕ ಎಂದು ಕರೆದಿದ್ದಾರೆ.


ಇದನ್ನೂ ಓದಿ: ಹರಿಯಾಣ: ದುಷ್ಕರ್ಮಿಗಳಿಂದ ಯೇಸು ಕ್ರಿಸ್ತನ ಪ್ರತಿಮೆ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...