Homeಕರ್ನಾಟಕಠಾಣೆಗೆ ನುಗ್ಗಿ ಪೊಲೀಸ್‌ ಸಮ್ಮುಖದಲ್ಲೆ AAP ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ BJP ಕಾರ್ಯಕರ್ತರು!

ಠಾಣೆಗೆ ನುಗ್ಗಿ ಪೊಲೀಸ್‌ ಸಮ್ಮುಖದಲ್ಲೆ AAP ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ BJP ಕಾರ್ಯಕರ್ತರು!

- Advertisement -
- Advertisement -

ಸಮಾಜ ಕಲ್ಯಾಣ ಇಲಾಖೆಯಲ್ಲಿನ ಭ್ರಷ್ಟಾಚಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಆಮ್‌‌ ಆದ್ಮಿ ಪಕ್ಷ(ಎಎಪಿ)ದ ಕಾರ್ಯಕರ್ತರ ಮೇಲೆ ಬೆಂಗಳೂರಿನ ಜೀವನ್‌ ಭೀಮಾ ನಗರದ ಪೊಲೀಸ್‌ ಠಾಣೆಗೆ ನುಗ್ಗಿ ಪೊಲೀಸರ ಸಮ್ಮುಖದಲ್ಲೇ ಸಿ.ವಿ. ರಾಮನ್‌‌‌ ನಗರದ ಬಿಜೆಪಿ ಶಾಸಕ ರಘು ಅವರ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬಳಿ ನಡೆದಿದೆ ಎಂದು ಆರೋಪಿಸಲಾಗಿದೆ.

ಕಾಮಗಾರಿಗಳ ಗುತ್ತಿಗೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಎಎಪಿ ಕಾರ್ಯಕರ್ತರು ನಿನ್ನೆ ಪಕ್ಷದ ವತಿಯಿಂದ ತಿಪ್ಪಸಂದ್ರದ ಮಹಾದ್ವಾರದ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾನಿರತರನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ, ಈ ವೇಳೆ ಠಾಣೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತರು ಗೂಂಡಾಗಿರಿ ಮಾಡಿದ್ದಾರೆ ಎಂದು ಪಕ್ಷದ ಪದಾಧಿಕಾರಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಕೊರೊನಾ ಮೃತದೇಹಗಳು ಪತ್ತೆ ಪ್ರಕರಣ: ಸಚಿವ ಸುರೇಶ್ ಕುಮಾರ್ ವಿರುದ್ಧ ಎಎಪಿ ಆಕ್ರೋಶ

ಬಿಜೆಪಿ ಕಾರ್ಯಕರ್ತರು ಎಎಪಿ ಕಾರ್ಯಕರ್ತರಿಗೆ ಮಾತ್ರವಲ್ಲದೆ ಎಎಪಿ ಮಾಧ್ಯಮದಲ್ಲಿ ಕೆಲಸ ಮಾಡುವರಿಗೆ ಮತ್ತು ನಾಗರೀಕರ ಮೇಲೆ ಕೂಡಾ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ಮಾಧ್ಯಮ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಚರಣ್‌ ಐವರ್ನಾಡ್‌ ಹೇಳಿದ್ದಾರೆ.

“ಬಿಜೆಪಿ ಶಾಸಕ ರಘು ಗೂಂಡಗಳು ಆಪ್‌ನ ಕಾರ್ಯಕರ್ತರು ಸೇರಿ ನಾಗರಿಕರ ಮೇಲೆ, ನನ್ನ ಮೇಲೆ ಪೊಲೀಸ್ ಸಮಕ್ಷಮದಲ್ಲಿ ಹಿಗ್ಗಾಮಗ್ಗ ಹೊಡೆದು ಅವ್ಯಾಚ್ಯವಾಗಿ ಬೆದರಿಕೆ ಹಾಕಿದ್ದಾರೆ. ನನ್ನ ಫೋನ್ ಎಳೆದಾಡಿ ಅದರಲ್ಲಿನ ಡೇಟಾ ಎಲ್ಲಾ ಅಳಿಸಿ ಹಾಕಿದ್ದಾರೆ. ಇದೊಂದು ಸರ್ಕಾರಿ ಕೃಪಾಪೋಷಿತ ಅಪ್ಪಟ ಮಾಬ್ ಲಿಂಚ್‌” ಎಂದು ಚರಣ್‌ ಐವರ್ನಾಡ್‌ ಹೇಳಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ರಸ್ತೆ ಗುಂಡಿಗಳಿಗೆ ಹೂವು, ರಂಗೋಲಿ ಹಾಕಿ ಪ್ರತಿಭಟನೆ ಮಾಡಿದ ಎಎಪಿ

ಈ ಬಗ್ಗೆ ಬುಧವಾರದಂದು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕರಾದ ಎಚ್‌.ಡಿ.ಬಸವರಾಜು, “ತಿಪ್ಪಸಂದ್ರ ಮುಖ್ಯರಸ್ತೆಯ ಮಹಾದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದವರ ಪೈಕಿ ಐವರು ಆಮ್‌ ಆದ್ಮಿ ಪಾರ್ಟಿ ಮುಖಂಡರನ್ನು ಪೊಲೀಸರು ಬಂಧಿಸಿದ್ದರು. ಇದೇ ವೇಳೆ ಜೀವನ್‌ ಭಿಮಾ ಪೊಲೀಸ್‌ ಠಾಣೆಗೆ ಆಗಮಿಸಿದ ಮಾಜಿ ಕಾರ್ಪೊರೇಟರ್ ಚಂದ್ರಪ್ಪ ರೆಡ್ಡಿ, ಶಾಸಕ ರಘು ಆಪ್ತ ಸಹಾಯಕ ಉನ್ನಿಕೃಷ್ಣನ್ ಹಾಗೂ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರುಗಳು ಪೊಲೀಸ್‌ ಸಿಬ್ಬಂದಿಗಳೇ ಹೆದರುವಂತೆ ದಾಂಧಲೆ ಮಾಡಿದ್ದಾರೆ. ಠಾಣೆಯೊಳಗೆ ತೆರಳುತ್ತಿದ್ದ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಘಟನೆ ನಡೆದು ಒಂದು ದಿನವಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ರಘು ಬೆಂಬಲಿಗರ ಗೂಂಡಾಗಿರಿಯು ಪೊಲೀಸ್‌ ಸಿಬ್ಬಂದಿಯ ಫೋನ್‌ಗಳಲ್ಲಿ ರೆಕಾರ್ಡ್‌ ಆಗಿದ್ದು, ಅವುಗಳನ್ನು ಸಾಕ್ಷಿಯಾಗಿ ಬಳಸಿಕೊಂಡು ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, “ಪೊಲೀಸ್‌ ಠಾಣೆಯಲ್ಲಿ ನಡೆದ ದಾಂಧಲೆಗೆ ಶಾಸಕ ರಘುರವರೇ ನೇರ ಹೊಣೆ. ಭ್ರಷ್ಟಾಚಾರವು ಜನರಿಗೆ ತಿಳಿಯುತ್ತದೆ ಎಂದು ಹೆದರಿದ ಅವರು ನಮ್ಮ ಮೇಲೆ ಗೂಂಡಾ ಬೆಂಬಲಿಗರನ್ನು ಛೂ ಬಿಟ್ಟಿದ್ದಾರೆ. ರಾಜ್ಯ ಸರ್ಕಾರ ಹಾಗೂ ಶಾಸಕರ ಪ್ರಭಾವದಿಂದಾಗಿ ಪೊಲೀಸ್‌ ಸಿಬ್ಬಂದಿಯು ಅಸಹಾಯಕತೆಯಿಂದ ಸುಮ್ಮನಿರಬೇಕಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ:ಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...