Homeಮುಖಪುಟಅತ್ಯಾಚಾರ, ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆ ನೀಡಿದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅಪರಾಧಿ

ಅತ್ಯಾಚಾರ, ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆ ನೀಡಿದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅಪರಾಧಿ

- Advertisement -
- Advertisement -

ಅಪ್ರಾಪ್ತೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ಮೇಲೆ ಅಪರಾಧಿ ಚಪ್ಪಲಿ ಎಸೆದಿರುವ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆ ಮಾಡಿದ ಪ್ರಕರಣದಲ್ಲಿ ಸೂರತ್‌ನ ನ್ಯಾಯಾಲಯವು ಬುಧವಾರ 27 ವರ್ಷದ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ವಿಶೇಷ ಪೋಕ್ಸೊ ನ್ಯಾಯಾಧೀಶರಾದ ಪಿಎಸ್ ಕಲಾ ಅವರು ಶಿಕ್ಷೆಯನ್ನು ಘೋಷಿಸಿದ ನಂತರ, ಅಪರಾಧಿ ಸುಜಿತ್ ಸಾಕೇತ್ ಕೋಪಗೊಂಡು ನ್ಯಾಯಾಧೀಶರ ಕಡೆಗೆ ಚಪ್ಪಲಿಯನ್ನು ಎಸೆದಿದ್ದಾರೆ. ಪಾದರಕ್ಷೆಗಳು ಗುರಿ ತಪ್ಪಿ ನ್ಯಾಯಾಲಯದ ಸಾಕ್ಷಿ ಪೆಟ್ಟಿಗೆಯ ಬಳಿ ಬಿದ್ದವು.

ಇದನ್ನೂ ಓದಿ: ಮಧ್ಯಪ್ರದೇಶ: 4 ವರ್ಷಗಳಲ್ಲಿ sc/st ದೌರ್ಜನ್ಯ ತಡೆ ಕಾಯ್ದೆಯಡಿ 33,000 ಕ್ಕೂ ಹೆಚ್ಚು ಪ್ರಕರಣ ದಾಖಲು

ಪ್ರಾಸಿಕ್ಯೂಷನ್ ಪ್ರಕಾರ, ಅಪರಾಧಿ ಮಧ್ಯಪ್ರದೇಶದ ನಿವಾಸಿಯಾಗಿದ್ದು, ಏಪ್ರಿಲ್ 30 ರಂದು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಕೊಲೆ ಮಾಡಿದ್ದಾನೆ. ಮೃತ ಸಂತ್ರಸ್ತೆ ವಲಸೆ ಕಾರ್ಮಿಕರ ಮಗಳು.

ಐದು ವರ್ಷದ ಬಾಲಕಿ ಒಬ್ಬಳೇ ಇದ್ದುದನ್ನು ಕಂಡು ಆರೋಪಿ ಚಾಕೊಲೇಟ್ ಕೊಡಿಸುವ ನೆಪದಲ್ಲಿ ಆಕೆಯನ್ನು ಅಪಹರಿಸಿ, ಬಾಲಕಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು, ಅಲ್ಲಿ ಅಪರಾಧ ಎಸಗಿ ಕತ್ತು ಹಿಸುಕಿದ್ದಾನೆ ಎಂದು ಪ್ರಾಸಿಕ್ಯೂಷನ್ ಹೇಳಿದೆ.

ಪ್ರಾಸಿಕ್ಯೂಷನ್ ಪರಿಶೀಲಿಸಿದ 26 ಸಾಕ್ಷಿಗಳ ಹೇಳಿಕೆಗಳನ್ನು ನ್ಯಾಯಾಲಯ ಪರಿಗಣಿಸಿದೆ. ಆದೇಶವನ್ನು ಘೋಷಿಸುವ ಮೊದಲು ನ್ಯಾಯಾಲಯವು 53 ದಾಖಲೆಗಳ ಸಾಕ್ಷ್ಯಗಳನ್ನು ಪರಿಗಣಿಸಿದೆ.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...