Homeಮುಖಪುಟರಾಜ್ಯ ಬಿಜೆಪಿಯದ್ದು 40 ಪರ್ಸೆಂಟ್ ಕಮಿಷನ್‌ ಸರ್ಕಾರ: ಖರ್ಗೆ

ರಾಜ್ಯ ಬಿಜೆಪಿಯದ್ದು 40 ಪರ್ಸೆಂಟ್ ಕಮಿಷನ್‌ ಸರ್ಕಾರ: ಖರ್ಗೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಪ್ರತಿಕ್ರಿಯೆ ನೀಡಿದ್ದು, “ಮೋದಿ ಜೀ, ಕರ್ನಾಟಕದ ಬಿಜೆಪಿ ಸರ್ಕಾರವನ್ನು ಶೇ. 40 ಕಮಿಷನ್ ಸರ್ಕಾರ ಎಂದು ಕರೆಯಲಾಗುತ್ತದೆ. ಎಂಬುದನ್ನು ನಾನು ನಿಮಗೆ ನೆನಪಿಸುತ್ತೇನೆ” ಎಂದಿದ್ದಾರೆ.

ರಾಜ್ಯ ಚುನಾವಣಾ ಪ್ರಚಾರ ಆರಂಭವಾಗುತ್ತಿದ್ದಂತೆ ಪ್ರಧಾನಿ ಮೋದಿ ಮತ್ತೆ ‘ಡಬಲ್ ಇಂಜಿನ್’ ಜುಮ್ಲಾ ಹೆಸರಿನಲ್ಲಿ ಮತ ಕೇಳಲು ಆರಂಭಿಸಿದ್ದಾರೆ. ಮೋದಿ ಜೀ, ಕರ್ನಾಟಕದ ಬಿಜೆಪಿ ಸರ್ಕಾರವನ್ನು ಶೇ. 40 ಕಮಿಷನ್ ಸರ್ಕಾರ ಎಂದು ಕರೆಯಲಾಗುತ್ತದೆ. ಎಂಬುದನ್ನು ನಾನು ನಿಮಗೆ ನೆನಪಿಸುತ್ತೇನೆ” ಎಂದು ಖರ್ಗೆ ತಿಳಿಸಿದ್ದಾರೆ.

“ಪ್ರತಿ ಇಂಜಿನ್‌ಗೆ ಎಷ್ಟು ಕಮಿಷನ್‌ ನೀಡಲಾಗುತ್ತದೆ ಎಂಬುದನ್ನು ದಯವಿಟ್ಟು ಮತದಾರರಿಗೆ ತಿಳಿಸಿ” ಎಂದು ಕೇಳಿದ್ದಾರೆ.

ಸೋಮವಾರ ಹಿಮಾಚಲ ಪ್ರದೇಶದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, ‘ಡಬ್ಬಲ್ ಇಂಜಿನ್‌’ ಸರ್ಕಾರದ ಬಗ್ಗೆ ಹೇಳಿದ್ದರು. “ಕಳೆದ ನಾಲ್ಕು ವರ್ಷಗಳಲ್ಲಿ ಗುಡ್ಡಗಾಡು ರಾಜ್ಯದ ಜನರು ವಿವಿಧ ಕಲ್ಯಾಣ ಯೋಜನೆಗಳಿಂದ ಸಾಕಷ್ಟು ಪ್ರಯೋಜನ ಪಡೆದಿದ್ದಾರೆ” ಎಂದಿದ್ದರು.

ಕೇಂದ್ರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿದೆ. ಹಿಮಾಚಲ ಪ್ರದೇಶ ಸರ್ಕಾರವು ಹಿಮ್‌ಕೇರ್ ಎಂಬ ಇದೇ ರೀತಿಯ ಯೋಜನೆಯನ್ನು ಪ್ರಾರಂಭಿಸಿದೆ. ಈ ಎರಡು ಯೋಜನೆಗಳ ಅಡಿಯಲ್ಲಿ ರಾಜ್ಯದ ಒಟ್ಟು 1.25 ಲಕ್ಷ ನಿವಾಸಿಗಳು ಉಚಿತ ಚಿಕಿತ್ಸೆಯನ್ನು ಪಡೆದರು ಎಂದು ತಿಳಿಸಿದ್ದರು. ಅಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿ ಚಾಲನೆ ನೀಡಿದ್ದರು.


ಇದನ್ನೂ ಓದಿರಿ: ಜೇನು ಕುರುಬರ ಕಲೆಯನ್ನು ಝೀ ವಾಹಿನಿಯಲ್ಲಿ ಪ್ರದರ್ಶಿಸೋಣ: ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...