Homeಕೊರೊನಾಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

- Advertisement -
- Advertisement -

ಆರ್ಥಿಕತೆಯ ಮೇಲೆ ಗಾಢ ಪರಿಣಾಮ ಬೀರುವ ಕಾರಣ ಕೊರೊನಾ ವೈರಸ್ ಸಂಬಂಧಿತ ನಿರ್ಬಂಧಗಳನ್ನು ಎಲ್ಲೆಡೆ ಹೇರಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಬ್ರಿಟನ್‌ನಿಂದ ವಿಮಾನಗಳಲ್ಲಿ ಬರುವ ಜನರಲ್ಲಿ ಹೆಚ್ಚಿನ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗುತ್ತಿವೆ. ಓಮಿಕ್ರಾನ್ ಸೋಂಕು ಅಂತರಾಷ್ಟ್ರೀಯ ವಿಮಾನಗಳ ಮೂಲಕ ಬರುತ್ತಿರುವುದು ಸತ್ಯ. ಓಮಿಕ್ರಾನ್ ಪ್ರಕರಣಗಳು ಹೆಚ್ಚಿರುವ ದೇಶಗಳಿಂದ ವಿಮಾನಗಳ ಮೇಲೆ ನಿರ್ಬಂಧಗಳನ್ನು ಹೇರುವ ಬಗ್ಗೆ ಒಕ್ಕೂಟ ಸರ್ಕಾರ ನಿರ್ಧರಿಸಬೇಕು” ಎಂದು ಹೇಳಿದ್ದಾರೆ.

’ತಮ್ಮ ಸರ್ಕಾರವು ಹೆಚ್ಚುತ್ತಿರುವ ಸಾಂಕ್ರಾಮಿಕ ರೋಗದ ಪರಿಸ್ಥಿತಿಯನ್ನು “ಗಂಭೀರವಾಗಿ” ಪರಿಶೀಲಿಸುತ್ತಿದೆ. ಆರ್ಥಿಕತೆಯನ್ನು ಗಣನೆಗೆ ತೆಗೆದುಕೊಂಡು ನಿರ್ಬಂಧದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಮಮತಾ ಬ್ಯಾನರ್ಜಿ ಸುಳಿವು ನೀಡಿದ್ದಾರೆ. ಕೋಲ್ಕತ್ತಾದಲ್ಲಿ ಕೋವಿಡ್ ಪ್ರಕರಣಗಳು ಏರುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: 12 ಕೋಟಿ ಮೌಲ್ಯದ ಪ್ರಧಾನಿ ಮೋದಿ ಕಾರು: ಟ್ವಿಟರ್‌ನಲ್ಲಿ ’ಬ್ರಾಂಡೆಡ್ ಫಕೀರ್‌’ ಟ್ರೆಂಡ್

“ನಾವು ಜನರ ಸುರಕ್ಷತೆ ಮತ್ತು ಭದ್ರತೆಯನ್ನು ನೋಡಿಕೊಳ್ಳಬೇಕು. ಪ್ರಕರಣಗಳು ಹೆಚ್ಚುತ್ತಿರುವ ಸ್ಥಳಗಳನ್ನು ನಾವು ಗುರಿಯಾಗಿಸಿ ನಾವು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇವೆ. ಎಲ್ಲೆಡೆ ನಿರ್ಬಂಧಗಳನ್ನು ವಿಧಿಸಲು ಸಾಧ್ಯವಿಲ್ಲ. ಏಕೆಂದರೆ ಈ ನಿರ್ಬಂಧಗಳು ಕಳೆದೆರಡು ವರ್ಷಗಳಂತೇಯೇ ಆರ್ಥಿಕತೆಯ ಮೇಲೆ ಪರಿಣಾಮ ಬೀರಬಹುದು” ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬುಧವಾರ ಕೊರೊನಾ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡಿದ್ದು, 1,089 ಹೊಸ ಪ್ರಕರಣಗಳು ದಾಖಲಾಗಿವೆ. ಕೋಲ್ಕತ್ತಾದಲ್ಲಿಯೇ 540 ಹೊಸ ಪ್ರಕರಣಗಳು ವರದಿಯಾಗಿವೆ.

“ಕೋಲ್ಕತ್ತಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಏಕೆಂದರೆ ರೈಲುಗಳು ಮತ್ತು ವಿಮಾನಗಳಲ್ಲಿ ಪ್ರಯಾಣಿಸುವ ಜನರಿಗೆ ಕೋಲ್ಕತ್ತಾ ಸಾರಿಗೆ ಸ್ಥಳವಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ಮತ್ತು ಮಾಸ್ಕ್‌ ಧರಿಸುವಂತೆ ಎಲ್ಲರಿಗೂ ವಿನಂತಿಸುತ್ತೇನೆ” ಎಂದು ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಉಡುಪಿ: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ಎಸಗಿದ ಪೊಲೀಸರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಪಹರಣ ಆರೋಪಕ್ಕೆ ಪುರಾವೆಯಿಲ್ಲ, ರಾಜಕೀಯದ ಷಡ್ಯಂತ್ರದಿಂದ ಬಂಧನ: ಹೆಚ್.ಡಿ ರೇವಣ್ಣ

0
ಲೈಂಗಿಕ ದೌರ್ಜನ್ಯದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಸ್‌ಐಟಿಯಿಂದ ಬಂಧಿತರಾದ ಬಳಿಕ ಮೊದಲ ಬಾರಿಗೆ ಶಾಸಕ ಹೆಚ್‌.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ...