Homeಕರ್ನಾಟಕಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

ಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

- Advertisement -
- Advertisement -

ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ಇಳಕಲ್‌ನಲ್ಲಿರುವ ಸೇಂಟ್‌ ಪೌಲ್ಸ್‌‌ ಹೈಯರ್‌ ಪ್ರೈಮರಿ ಶಾಲೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯನ್ನು ಮುಚ್ಚಿದ್ದಾರೆ.

‘ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಮತಾಂತರಕ್ಕೆ ಶಾಲೆಯವರು ಯತ್ನಿಸುತ್ತಿದ್ದಾರೆ’ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದ್ದು, “ಕೆಲ ಬಲಪಂಥೀಯ ಸಂಘಟನೆಗಳು ದೂರು ನೀಡಿದ್ದವು” ಎಂದು ಡಿ.30ರಂದು ಬ್ಲಾಕ್ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

‘ನಿಯಮ ಉಲ್ಲಂಘಿಸಿ ಕ್ರಿಸ್‌ಮಸ್‌ ಆಚರಿಸಿದ ಕಾರಣಕ್ಕೆ ಶಾಲೆಯನ್ನು ಅನಿರ್ದಿಷ್ಟಾವಧಿ ಮುಚ್ಚಲಾಗುತ್ತಿದೆ’ ಎಂದು ಹೇಳಲಾಗಿದೆ. ಆದರೆ ಆದೇಶದಲ್ಲಿ ನಿಯಮಗಳು ಯಾವುವೆಂದು ಉಲ್ಲೇಖಿಸಿಲ್ಲ. “ಡಿಸೆಂಬರ್ 25ರಂದು ಕ್ರಿಸ್‌ಮಸ್ ಆಚರಣೆಯ ಸಂದರ್ಭದಲ್ಲಿ ನೀವು ತರಗತಿ ಕೊಠಡಿಗಳಲ್ಲಿ ಮಾಂಸವನ್ನು ಬಡಿಸಿದ್ದೀರಿ. ಇದು ಸಾರ್ವಜನಿಕರಿಗೆ ಮತ್ತು ಇಲಾಖೆಗೆ ಮುಜುಗರಕ್ಕೆ ಕಾರಣವಾಗಿದೆ. ಮುಂದಿನ ಆದೇಶದವರೆಗೆ ನೀವು ಶಾಲೆಯನ್ನು ಮುಚ್ಚಬೇಕು. ಅನುಮತಿ ಪಡೆಯದೇ ಶಾಲೆ ತೆರೆದರೆ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಹಿಂದುತ್ವ ಪರ ಸಂಘಟನೆಗಳ ಸಂಚಾಲಕ ಪ್ರದೀಪ ಅಮರಣ್ಣನವರ್‌, ‘ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಮತಾಂತರಕ್ಕೆ ಯತ್ನಿಸಲಾಗುತ್ತಿದೆ’ ಎಂದು ತಹಶೀಲ್ದಾರ್‌ ಕೆ.ರತ್ನ ಅವರಿಗೆ ದೂರು ನೀಡಿದರು.

“ಶಾಲೆಯ ಮ್ಯಾನೇಜ್‌ಮೆಂಟ್‌ ಕ್ರಿಸ್ಮಸ್ ದಿನದಂದು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಶಾಲೆಗೆ ಆಹ್ವಾನಿಸಿತು. ಮಾಂಸ, ಮದ್ಯ ಮತ್ತು ಬೈಬಲ್‌ನ ಕನ್ನಡ ಅನುವಾದವಾದ ‘ಸತ್ಯ ವೇದ’ ನೀಡಲಾಯಿತು. ಇದು ಆಮಿಷ ಮತ್ತು ಬಲವಂತದ ಮೂಲಕ ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ” ಎಂದು ಹಿಂದುತ್ವ ಮುಖಂಡರು ಆರೋಪಿಸಿದ್ದಾರೆ.

ಪ್ರಾಂಶುಪಾಲರಾದ ಸಿಲ್ವಿಯಾ ಡಿ ಮಾರ್ಕ್, ಶಾಲಾ ಆಡಳಿತ ಸಮಿತಿ ಸದಸ್ಯರಾದ ಜಾಕ್ಸನ್ ಡಿ ಮಾರ್ಕ್ ಮತ್ತು ಉಮೇಶ್ ನಾಯಕ್ ಹರಪನಹಳ್ಳಿ ಅವರನ್ನು ದೂರಿನಲ್ಲಿ ಹೆಸರಿಸಲಾಗಿದೆ.

“ಶಾಲೆ ಪ್ರಾರಂಭವಾದಾಗಿನಿಂದಲೂ ಬಂಜಾರ, ಅಂಬಿಗ ಮತ್ತು ಇತರ ಗುಂಪುಗಳಂತಹ ಬಡ ಮತ್ತು ಹಿಂದುಳಿದ ಸಮುದಾಯಗಳ ಜನರನ್ನು ಮತಾಂತರಿಸಲಾಗುತ್ತಿದೆ. ಅವರು ಹಿಂದೂ ದೇವರುಗಳನ್ನು ಅವಮಾನಿಸುತ್ತಿದ್ದಾರೆ ಮತ್ತು ದುರ್ಬಲ ಗುಂಪುಗಳನ್ನು ಮತಾಂತರ ಮಾಡುತ್ತಿದ್ದಾರೆ. ಅವರು ಮತಾಂತರಗೊಂಡ ನಂತರ ತಮ್ಮ ಮನೆಗಳಿಂದ ಹಿಂದೂ ದೇವರುಗಳ ಪ್ರತಿಮೆಗಳು ಮತ್ತು ಚಿತ್ರಗಳನ್ನು ಎಸೆಯುವಂತೆ ಅವರು ಒತ್ತಾಯಿಸುತ್ತಾರೆ. ಇದು ಕಾನೂನಿಗೆ ವಿರುದ್ಧವಾಗಿದೆ. ಅದಕ್ಕಿಂತ ಹೆಚ್ಚಾಗಿ ಶಾಲೆಯ ಆಡಳಿತ ಮಂಡಳಿಯು ಶಿಕ್ಷಣ ಇಲಾಖೆಯ ಕೆಲವು ಅಧಿಕಾರಿಗಳಿಗೆ ಲಂಚ ನೀಡುವುದರಿಂದ ಶಾಲೆಯ ಪರವಾನಗಿಯನ್ನು ವಾರ್ಷಿಕವಾಗಿ ನವೀಕರಿಸಲಾಗುತ್ತಿದೆ. ಅಧಿಕಾರಿಗಳು ಶಾಲೆಯನ್ನು ಮುಚ್ಚಬೇಕು ಮತ್ತು ಪರವಾನಗಿ ರದ್ದುಗೊಳಿಸಬೇಕು” ಎಂದು ದೂರಿನಲ್ಲಿ ಆಗ್ರಹಿಸಿದ್ದರು.

ದೂರಿನ ಮೇರೆಗೆ ಶಿಕ್ಷಣ ಇಲಾಖೆಯ ಬ್ಲಾಕ್ ಸಂಪನ್ಮೂಲ ಸಮನ್ವಯಾಧಿಕಾರಿ ಐ.ಎಂ.ಅಂಗಡಿ ಶಾಲೆಯಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದಾರೆ. ಬಿಇಒ ವರದಿ ಅನ್ವಯ ಕ್ರಮಕೈಗೊಂಡು ಮುಚ್ಚಲು ಆದೇಶಿಸಿದ್ದಾರೆ.

ಶಾಲಾ ಆಡಳಿತ ಸಮಿತಿ ಸದಸ್ಯರಾದ ಜಾಕ್ಸನ್ ಡಿ ಮಾರ್ಕ್ ಇಳಕಲ್ ಅವರು ಪತ್ರಕರ್ತರೊಂದಿಗೆ ಮಾತನಾಡಿದ್ದು, “ಬಲಪಂಥೀಯ ಗುಂಪುಗಳು ಹೊರಿಸಿರುವ ಆರೋಪಗಳು ಆಧಾರ ರಹಿತವಾಗಿವೆ” ಎಂದು ತಿಳಿಸಿದ್ದಾರೆ.

“ನಾವು ಯಾರನ್ನೂ ಮತಾಂತರ ಮಾಡುತ್ತಿಲ್ಲ. ಮೊದಲನೆಯದಾಗಿ, ಶಾಲೆಯನ್ನು ಕ್ರಿಶ್ಚಿಯನ್ ಮಿಷನರಿಗಳು ನಡೆಸುತ್ತಿಲ್ಲ. ಇಳಕಲ್‌ನ ಕೆಲ ನಿವಾಸಿಗಳು ಇದನ್ನು ನಡೆಸುತ್ತಿದ್ದಾರೆ. ಬಾಡಿಗೆ ಆವರಣದಲ್ಲಿ ಶಾಲೆ ನಡೆಸಲಾಗುತ್ತಿದೆ. ಶಾಲಾ ಸಮಿತಿಯು ಎಲ್ಲಾ ಧರ್ಮಗಳ ಸದಸ್ಯರನ್ನು ಒಳಗೊಂಡಿದೆ. ಶಾಲೆಯಲ್ಲಿ ಎಲ್ಲಾ ಧರ್ಮದ ವಿದ್ಯಾರ್ಥಿಗಳಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿರಿ: ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಾಲೆ ಮುಚ್ಚಿದರೆ ಸಾಲದು, ಮತಾಂತರ ಮಾಡಲು ಯತ್ನಿಸಿದ ಎಲ್ಲರಿಗೂ ಶಿಕ್ಷೇ ಆಗಲಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...