Homeಮುಖಪುಟತಂದೆ- ಮಗನ ಮೇಲೆ ಮಿಜೋರಾಂ ಪೊಲೀಸರಿಂದ ಗುಂಡಿನ ದಾಳಿ

ತಂದೆ- ಮಗನ ಮೇಲೆ ಮಿಜೋರಾಂ ಪೊಲೀಸರಿಂದ ಗುಂಡಿನ ದಾಳಿ

- Advertisement -
- Advertisement -

ಅಗರ್ತಲಾ: ಉತ್ತರ ತ್ರಿಪುರಾ ಜಿಲ್ಲೆಯ ಇಬ್ಬರು ನಿವಾಸಿಗಳ ಮೇಲೆ ಮಿಜೋರಾಂ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

40 ವರ್ಷದ ವ್ಯಕ್ತಿಯು ತನ್ನ 14 ವರ್ಷಗಳ ಪುತ್ರನೊಂದಿಗೆ ಕೃಷಿ ಕೆಲಸಕ್ಕೆಂದು ನೆರೆಯ ರಾಜ್ಯಕ್ಕೆ ತೆರಳಿದ್ದಾಗ ಘಟನೆ ನಡೆದಿದೆ.

ರಾಮುಹೈ ರಿಯಾಂಗ್ ಎಂಬವರು ತಮ್ಮ 14 ವರ್ಷದ ಮಗ ರತೀಂದ್ರ ಅವರೊಂದಿಗೆ ಕೃಷಿ ಕೆಲಸಕ್ಕೆಂದು ಕಾಂಚನ್‌ಪುರ ಉಪವಿಭಾಗದ ಇತರ ಸ್ಥಳೀಯರೊಂದಿಗೆ ನೆರೆಯ ರಾಜ್ಯಕ್ಕೆ ಆಗಾಗ್ಗೆ ಭೇಟಿ ನೀಡುತ್ತಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಭಾನುಪಾದ ಚಕ್ರವರ್ತಿ ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಮಿಜೋರಾಂ ಪೊಲೀಸರು ‘ಅಸ್ಪಷ್ಟ ಕಾರಣಗಳಿಗಳಿಂದಾಗಿ ತಂದೆ-ಮಗ ಮೇಲೆ ಗುಂಡು ಹಾರಿಸಿದರು. ಇಬ್ಬರೂ ಗಾಯಗೊಂಡಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಇಬ್ಬರೂ ಮಾದಕ ದ್ರವ್ಯಗಳೊಂದಿಗೆ ರಾಜ್ಯವನ್ನು ಪ್ರವೇಶಿಸಿದ್ದರು ಎಂದು ಮಿಜೋರಾಂ ಪೊಲೀಸರು ಆರೋಪಿಸಿದ್ದಾರೆ.

“ರಾಮುಹೈ ತಪ್ಪಿಸಿಕೊಂಡು ತ್ರಿಪುರಾವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾದರು. ಆದರೆ ಅವರ ಮಗನನ್ನು ಮಿಜೋರಾಂ ಪೊಲೀಸರು ಕಸ್ಟಡಿಗೆ ತೆಗೆದುಕೊಂಡರು” ಎಂದು ಚಕ್ರವರ್ತಿ ವಿವರಿಸಿದ್ದಾರೆ.

“ಹುಡುಗನಿಗೆ ಐಜ್ವಾಲ್ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ” ಎಂದು ಎಸ್ಪಿ ತಿಳಿಸಿದ್ದಾರೆ. ರಾಮುಹೈ ಅವರು ಜಿಲ್ಲೆಯ ಧರ್ಮನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

“ವಂಗ್‌ಮುನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ” ಎಂದು ಎಸ್‌ಪಿ ಹೇಳಿದ್ದಾರೆ.

ಅಂತರರಾಜ್ಯ ಗಡಿಯಲ್ಲಿ ಹೆಚ್ಚುವರಿ ಪಡೆಗಳನ್ನು ಸಜ್ಜುಗೊಳಿಸಲಾಗಿದೆ. ಅಲ್ಲಿ ಪರಿಸ್ಥಿತಿ ಉದ್ವಿಗ್ನವಾದರೂ ಪರಿಸ್ಥಿತಿ ನಿಯಂತ್ರಣದಲ್ಲಿದೆ.


ಇದನ್ನೂ ಓದಿರಿ: ಎಟಿಎಂ ಸೇವಾ ಶುಲ್ಕ ಇಂದಿನಿಂದ ಹೆಚ್ಚಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...