Homeಕರ್ನಾಟಕಬೆಂಗಳೂರು: ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳ ವಿರೋಧಿಸಿ ಎಐಡಿವೈಓ ಪ್ರತಿಭಟನೆ

ಬೆಂಗಳೂರು: ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳ ವಿರೋಧಿಸಿ ಎಐಡಿವೈಓ ಪ್ರತಿಭಟನೆ

- Advertisement -
- Advertisement -

ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳ ವಿರೋಧಿಸಿ ಎಐಡಿವೈಓ ರಾಜ್ಯ ಸಮಿತಿಯಿಂದ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ಮಾತನಾಡಿದ ಎಐಡಿವೈಓ ರಾಜ್ಯಾಧ್ಯಕ್ಷ ಕಾ. ಶರಣಪ್ಪ ಉದ್ಬಾಳ್. “ಕೋವಿಡ್ ಪರಿಸ್ಥಿತಿಯಲ್ಲಿ, ಸಾಮಾನ್ಯ ಜನರ ಆರ್ಥಿಕ ಸ್ಥಿತಿಯು ತೀವ್ರ ಸಂಕಷ್ಟದಲ್ಲಿದೆ. ಆದರೆ ತಮ್ಮ ಲಾಭದಾಹಕ್ಕಾಗಿ ಖಾಸಗಿ ಟಿಲಿಕಾಂ ಕಂಪನಿಗಳು ಮೊಬೈಲ್ ರಿಚಾರ್ಜ್ ದರ ಹಾಗೂ ಡಾಟಾ ಪ್ಲಾನ್ ದರಗಳನ್ನು ಒಂದು ವರ್ಷದಲ್ಲಿ ಪ್ರತಿಶತ 100ರಷ್ಟು ಹೆಚ್ಚಿಸಿವೆ. ಫೋನ್ ಮತ್ತು ಇಂಟರ್ನೆಟ್ ಮೇಲಿನ ಅವಲಂಬನೆಯು ಅಸಾಧಾರಣವಾಗಿ ಹೆಚ್ಚಾಗಿದೆ.  ವಿದ್ಯಾರ್ಥಿಗಳು, ಯುವಕರು ಮತ್ತು ಸಾರ್ವಜನಿಕರು ತಮ್ಮ ಜೀವನ ಮತ್ತು ಜೀವನೋಪಾಯಕ್ಕಾಗಿ ಮೊಬೈಲ್ ಬಳಕೆಯನ್ನು ಅಗಾಧವಾಗಿ ಅವಲಂಬಿಸಿದ್ದಾರೆ. ಆನ್‌ಲೈನ್ ತರಗತಿಗಳು, ಆನ್‌ಲೈನ್ ಅಪ್ಲಿಕೇಶನ್‌ಗಳು, ಆನ್‌ಲೈನ್ ವಹಿವಾಟುಗಳು ದಿನೇ ದಿನೇ ಹೆಚ್ಚಾಗುತ್ತಿವೆ” ಎಂದಿದ್ದಾರೆ.

“ಮೊಬೈಲ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಈ ಪರಿಸ್ಥಿತಿಯಲ್ಲಿ, ಏರ್‌ಟೆಲ್, ಜಿಯೋ, ವೊಡಾಫೋನ್ ಐಡಿಯಾದಂತಹ ಮೊಬೈಲ್ ಕಂಪನಿಗಳು ನೆಟ್ ಪ್ಯಾಕ್ ಮತ್ತು ರೀಚಾರ್ಜ್ ದರಗಳನ್ನು ಶೇಕಡಾ 20 ರಿಂದ 25% ವರೆಗೆ ಹೆಚ್ಚಿಸಿವೆ. ಇದು ಸಂಪೂರ್ಣವಾಗಿ ಜನವಿರೋಧಿಯಾಗಿದೆ.  ಈ ಸಂದರ್ಭದಲ್ಲಿ ಸೇವಾ ಪೂರೈಕೆದಾರರು ಮತ್ತು ಗ್ರಾಹಕರ ನಡುವೆ ತೀರ್ಪುಗಾರರ ಪಾತ್ರವನ್ನು ವಹಿಸಬೇಕಾದ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವು ಸಂಪೂರ್ಣವಾಗಿ ಮೌನವಾಗಿರುವುದನ್ನು ನೋಡಿ ಆಘಾತವಾಗಿದೆ. ಈ ಕೂಡಲೇ ಟ್ರಾಯ್ ಮಧ್ಯ ಪ್ರವೇಶಿಸಿ ಖಾಸಗಿ ಟೆಲಿಕಾಂ ಕಂಪನಿಗಳ ಈ ಹಗಲು ದರೋಡೆಯನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.  

ಇದನ್ನೂ ಓದಿ: ಉಡುಪಿ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕದಂತೆ ನಿರ್ಬಂಧ; ವಿದ್ಯಾರ್ಥಿನಿಯರ ಪ್ರತಿಭಟನೆ

ಎಐಡಿವೈಓ ರಾಜ್ಯ ಉಪಾಧ್ಯಕ್ಷ ಕಾ. ವಿನಯ್ ಸಾರಥಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, “ಸಾರ್ವಜನಿಕ ಉದ್ಯಮವಾಗಿದ್ದ ಬಿಎಸ್ಎನ್ಎಲ್ ದುರ್ಬಲಗೊಂಡ ನಂತರ, ಖಾಸಗಿ ಮೊಬೈಲ್ ಆಪರೇಟರ್ ಕಂಪನಿಗಳು ದೇಶದಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಸೇವಾ ಮಾರುಕಟ್ಟೆಯ ಗಣನೀಯ ಭಾಗದ ಮೇಲೆ ತಮ್ಮ ಬಿಗಿಹಿಡಿತ ಸಾಧಿಸಿವೆ. ಆದ್ದರಿಂದ  ಈ ಖಾಸಗಿ ಮೊಬೈಲ್ ಕಂಪನಿಗಳು ಭಾರೀ ಲಾಭ ಗಳಿಸಲು ತಮ್ಮ ಮೂಗಿನ ನೇರಕ್ಕೆ ದರಗಳನ್ನು ನಿಗದಿಮಾಡಿ, ಮೊಬೈಲ್ ಬಳಕೆದಾರರು ಅನಿವಾರ್ಯವಾಗಿ ಅಧಿಕ ಹಣ ಪಾವತಿಸುವಂತೆ ಮಾಡಿವೆ. ಖಾಸಗಿ ಮೊಬೈಲ್ ಕಂಪನಿಗಳ ಈ ಕ್ರಮವನ್ನು ನಾವು ವಿರೋಧಿಸುತ್ತೇವೆ. ಹಾಗೂ ಸಾಮಾನ್ಯ ಜನರ ಪರವಾಗಿ ದರಗಳ ಹೆಚ್ಚಳವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತೇವೆ” ಎಂದರು.

ಪ್ರತಿಭಟನೆ ಬಳಿಕ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI)ದ ಕಚೇರಿಗೆ ಭೇಟಿ ನೀಡಿ ಹಕ್ಕೊತ್ತಾಯ ಪತ್ರ ಸಲ್ಲಿಸಲಾಗಿದೆ.

ಹಕ್ಕೊತ್ತಾಯಗಳು

೧. ಅಸಮಂಜಸವಾದ ಪ್ರಿಪೇಯ್ಡ್ ರಿಚಾರ್ಜ್ ದರ ಹೆಚ್ಚಳವನ್ನು ತಕ್ಷಣವೇ ಹಿಂಪಡೆಯಿರಿ.

೨ ಖಾಸಗಿ ಟೆಲಿಕಾಂ ಕಂಪನಿಗಳಲ್ಲಿ ಸಕ್ರಿಯ ಪಾತ್ರ ವಹಿಸಲು ಮತ್ತು ಮೊಬೈಲ್ ಬಳಕೆದಾರರ ಹಿತಾಸಕ್ತಿಗಳನ್ನು ರಕ್ಷಿಸಲುTRAI ಮೂಕ ಪ್ರೇಕ್ಷಕರಾಗಿ ಉಳಿಯದೇ ತಕ್ಷಣವೇ ಕ್ರಮ ಕೈಗೊಳ್ಳಬೇಕು.

3. ಬಿಎಸ್ಎನ್ಎಲ್ ಪುನಶ್ಚೇತನಗೊಳಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ.

4. ಅತ್ಯಗತ್ಯ ಸೇವೆಯಾಗಿರುವ ಟೆಲಿಕಾಂ ವಲಯದ ಖಾಸಗೀಕರಣವನ್ನು ತಕ್ಷಣವೇ ನಿಲ್ಲಿಸಬೇಕು.


ಇದನ್ನೂ ಓದಿ: ವಿದಾಯ 2021: ಕಳೆದ ವರ್ಷ ನಮ್ಮನ್ನಗಲಿದ ಚಿತ್ರರಂಗದ ತಾರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...