Homeಮುಖಪುಟರೈಲಿನಲ್ಲಿ ಪ್ರಯಾಣಿಕನನ್ನು ಥಳಿಸಿದ ಪೊಲೀಸ್‌!

ರೈಲಿನಲ್ಲಿ ಪ್ರಯಾಣಿಕನನ್ನು ಥಳಿಸಿದ ಪೊಲೀಸ್‌!

- Advertisement -
- Advertisement -

ಕೇರಳದ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ರಾತ್ರಿ ಮಾವೇಲಿ ಎಕ್ಸ್‌ಪ್ರೆಸ್‌ನ ಸ್ಲೀಪರ್ ಕಂಪಾರ್ಟ್‌ಮೆಂಟ್‌ನಲ್ಲಿ ಪ್ರಯಾಣಿಕರೊಬ್ಬರನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿತ ಪೊಲೀಸ್‌ ಅಧಿಕಾರಿಯನ್ನು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಪ್ರಮೋದ್ ಎಂದು ಗುರುತಿಸಲಾಗಿದ್ದು, ಅವರು ಪ್ರಯಾಣಿಕರೊಬ್ಬರಿಗೆ ಕಪಾಳಕ್ಕೆ ಹೊಡೆದು, ಒದ್ದು ಪ್ರಯಾಣಿಕನನ್ನು ಕೆಳಗೆ ಬೀಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರೈಲಿನಲ್ಲಿ ಪೊಲೀಸ್‌‌ ಅಧಿಕಾರಿಯೂ ಪ್ರಯಾಣಿಕನೊಂದಿಗೆ ಟಿಕೆಟ್ ಬಗ್ಗೆ ಪ್ರಶ್ನಿಸುತ್ತಾರೆ. ಈ ವೇಳೆ ಅವರು ಅದನ್ನು ಹುಡುಕುತ್ತಿರುವ ವೇಳೆ ಅಧಿಕಾರಿಯೂ ಅವರಿಗೆ ಕಪಾಳಕ್ಕೆ ಹೊಡೆಯುತ್ತಾರೆ. ಇದರ ನಂತರ ಪ್ರಯಾಣಿಕ ಕೆಳಗೆ ಕುಸಿಯುತ್ತಾರೆ, ಇಷ್ಟಕ್ಕೆ ಬಿಡದ ಅಧಿಕಾರಿ ಅವರನ್ನು ಕಾಲಿನಿಂದಲೂ ಒದೆಯುತ್ತಾರೆ.

ಇದನ್ನೂ ಓದಿ:ಕೊರಗರ ಮೇಲೆ ಪೊಲೀಸ್ ಹಲ್ಲೆ ಪ್ರಕರಣ: ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಏಕೆ ಸುಮ್ಮನಿದ್ದಾರೆ? -ಸಿಪಿಎಂ ಪ್ರಶ್ನೆ

ಸಹ ಪ್ರಯಾಣಿಕರ ಆಕ್ಷೇಪದ ನಡುವೆಯೂ ಅಧಿಕಾರಿಯೂ ಪ್ರಯಾಣಿಕರಿಗೆ ಥಳಿಸುತ್ತಲೇ ಇದ್ದರು. ಆದರೆ ಅಧಿಕಾರಿಯು ಪ್ರಯಾಣಿಕನಿಗೆ ಥಳಿಸುವಂತಹ ತಪ್ಪನ್ನು ಏನೂ ಮಾಡಿಲ್ಲ ಎಂದು ಸಹ ಪ್ರಯಾಣಿಕರು ಹೇಳಿದ್ದಾರೆ ಎಂದು ಮಾಧ್ಯಮಂ ವರದಿ ಮಾಡಿದೆ. ಇದರ ನಂತರ ಅಧಿಕಾರಿಯು ಪ್ರಯಾಣಿಕನನ್ನು ರೈಲಿನಿಂದ ಹೊರಕ್ಕೆ ಕಳುಹಿಸಿದ್ದಾರೆ.

ತನ್ನ ಕೃತ್ಯವನ್ನು ಪೊಲೀಸ್‌‌ ಅಧಿಕಾರಿ ಪ್ರಮೋದ್‌ ಸಮರ್ಥಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ರೀತಿ ವರ್ತಿಸದಿದ್ದರೆ ಇತರ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆಯಾಗುತ್ತದೆ ಎಂದು ಹೇಳಿದ್ದಾರೆ. ಕೇರಳದ ಕಣ್ಣೂರಿನ ಉನ್ನತ ಪೊಲೀಸ್ ಅಧಿಕಾರಿಗಳು ಮತ್ತು ರೈಲ್ವೆ ರಕ್ಷಣಾ ಪಡೆ ಅಧಿಕಾರಿಗಳು ಪ್ರಸ್ತುತ ಘಟನೆಗಳ ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಮಂಗಳೂರು: ಆದಿವಾಸಿ ಕೊರಗ ಜನಾಂಗದ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಪಿಣರಾಯಿ ವಿಜಯನ್ ಗೃಹ ಸಚಿವರಾಗಿದ್ದರೂ, ಪೊಲೀಸ್ ಪಡೆಯನ್ನು ಈಗ ಸಿಪಿಐಎಂ ನಿಯಂತ್ರಿಸುತ್ತಿದೆ ಎಂದು ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಘಟನೆಯ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.

“8 ವರ್ಷದ ಬಾಲಕಿಯೊಂದಿಗೆ ಮಹಿಳಾ ಪೊಲೀಸ್ ಅಧಿಕಾರಿ ಹೇಗೆ ಅನುಚಿತವಾಗಿ ವರ್ತಿಸಿದ್ದಾರೆಂದು ನಾವೆಲ್ಲರೂ ನೋಡುತ್ತಿದ್ದೇವೆ. ಪೊಲೀಸರಿಗೆ ಜನರ ಮೇಲೆ ಹಿಡಿತ ಸಾಧಿಸುವ ಹಕ್ಕಿಲ್ಲ. ಕಾನೂನು ಉಲ್ಲಂಘನೆಯಾದರೆ ಕ್ರಮ ಕೈಗೊಳ್ಳಬಹುದು, ಆದರೆ ಈ ರೀತಿಯಲ್ಲಿ ಒದೆಯುವುದರ ಮೂಲಕ ಅಲ್ಲ” ಎಂದು ಸತೀಶನ್ ಹೇಳಿದ್ದಾರೆ.

ಇದನ್ನೂ ಓದಿ:ಠಾಣೆಗೆ ನುಗ್ಗಿ ಪೊಲೀಸ್‌ ಸಮ್ಮುಖದಲ್ಲೆ AAP ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ BJP ಕಾರ್ಯಕರ್ತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...