Homeಮುಖಪುಟಬೆಂಗಳೂರು ಮೂಲದ ಯುವಕನ ಬಂಧನ: ಏನಿದು ಬುಲ್ಲಿ ಬಾಯ್ ಪ್ರಕರಣ?

ಬೆಂಗಳೂರು ಮೂಲದ ಯುವಕನ ಬಂಧನ: ಏನಿದು ಬುಲ್ಲಿ ಬಾಯ್ ಪ್ರಕರಣ?

- Advertisement -
- Advertisement -

ವಿಕೃತ ದುಷ್ಕರ್ಮಿಗಳ ಗುಂಪೊಂದು ಬುಲ್ಲಿ ಬಾಯ್ ಮತ್ತು ಸುಲ್ಲಿಡೀಲ್ಸ್ ಎಂಬ ಮೊಬೈಲ್ ಆಪ್‌ಗಳ ಮೂಲಕ ಹೆಣ್ಣು ಮಕ್ಕಳ ಚಿತ್ರಗಳನ್ನು ಪ್ರಕಟಿಸಿ ಆಕ್ಷೇಪಾರ್ಹವಾಗಿ ಬರೆಯುತ್ತಿದ್ದ ಪ್ರಕರಣ ಎರಡು ದಿನಗಳಿಂದ ಸದ್ದು ಮಾಡುತ್ತಿದೆ. 100 ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂಬ ಅಸಭ್ಯ ಟೀಕೆಗಳು ಬುಲ್ಲಿ ಬಾಯ್‌ನಲ್ಲಿ ಪ್ರಕಟಗೊಂಡ ನಂತರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು ಮುಂಬೈ ಪೊಲೀಸರು ಬೆಂಗಳೂರು ಮೂಲದ 21 ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ಯುವಕನನ್ನು ಬಂಧಿಸಿದ್ದಾರೆ.

ಏನಿದು ಬುಲ್ಲಿ ಬಾಯ್?

ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ರಚನೆಗೊಂಡ ಮೊಬೈಲ್ ಅಪ್ ಬುಲ್ಲಿ ಬಾಯ್. ಇದರಲ್ಲಿ ದುಷ್ಕರ್ಮಿಗಳು ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿತ್ತು. ಅಲ್ಲದೆ ಬೇರೆಯವರು ಸಹ ಇದೇ ಮಾಡುವಂತೆ ಪ್ರಚೋದನೆ ನೀಡಲಾಗುತ್ತಿತ್ತು. ಆ ಮೂಲಕ ಟ್ವಿಟರ್‌ನಲ್ಲಿ #BulliBai ಎಂಬ ಹ್ಯಾಷ್ ಟ್ಯಾಗ್‌ ಅನ್ನು ಟ್ರೆಂಡಿಂಗ್ ಮಾಡಲಾಗುತ್ತಿತ್ತು. ಈ ಮುಂಚೆ ಸುಲ್ಲಿ ಡೀಲ್ ಎಂಬ ಆಪ್ ಮೂಲಕ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂಬ ಕಮೆಂಟ್ ಮಾಡುವು ಮೂಲಕ ಅವಮಾನ ಮಾಡಲಾಗುತ್ತಿತ್ತು. ಕೆಲವೊಮ್ಮೆ ಧಾರ್ಮಿಕವಾಗಿ ಹೀಯಾಳಿಸಲು ಇದನ್ನು ಬಳಸಿಕೊಳ್ಳಲಾಗಿತ್ತು. ಅದೇ ರೀತಿ ಬುಲ್ಲಿ ಬಾಯ್ ನಲ್ಲಿಯೂ ಕೂಡ 100 ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂದು ಪ್ರಕಟಿಸಿದಾಗ ಅದರಲ್ಲಿ ಒಬ್ಬ ಖ್ಯಾತ ಮುಸ್ಲಿಂ ಪತ್ರಕರ್ತೆಯ ಫೋಟೊ ಸಹ ಪ್ರಕಟಿಸಲಾಗಿತ್ತು. ಇಂದಿನ ನಿಮ್ಮ ಬುಲ್ಲಿ ಬಾಯ್ ಇವರು ಎಂದು ಮಹಿಳೆಯರ ಫೋಟೊಗಳನ್ನು ಅಪ್‌ಲೋಡ್ ಮಾಡಿ ಅದರ ಕೆಳಗೆ ಹರಾಜಿಗಿಡಲಾಗಿದೆ ಎಂದು ಬರೆದು ವಿಕೃತಿ ಮೆರೆಯಲಾಗುತ್ತಿತ್ತು. ಪತ್ರಕರ್ತರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ದೆಹಲಿ ಪೊಲೀಸರು FIR ದಾಖಲಿಸಿದ ನಂತರ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು “ಭಾರತ ಸರ್ಕಾರವು ದೆಹಲಿ ಮತ್ತು ಮುಂಬೈನಲ್ಲಿ ಪೊಲೀಸ್ ಸಂಸ್ಥೆಗಳೊಂದಿಗೆ ಈ ವಿಷಯದಲ್ಲಿ ಕೆಲಸ ಮಾಡುತ್ತಿದೆ” ಎಂದು ಟ್ವೀಟ್ ಮಾಡಿದ್ದರು. ಟ್ವಿಟರ್‌ನಲ್ಲಿ ಬುಲ್ಲಿ ಬಾಯ್ ಖಾತೆಯನ್ನು ಬ್ಲಾಕ್ ಮಾಡುವುದಲ್ಲದೆ, ಆಪ್ ಅನ್ನು ರದ್ದುಗೊಳಿಸಲಾಗಿತ್ತು. ಶಿವಸೇನಾ ನಾಯಕಿ ಪ್ರಿಯಾಂಕ ಚತುರ್ವೇದಿ ಮುಂಬೈ ಪೊಲೀಸರ ಮೇಲೆ ಈ ಕುರಿತು ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಿದ್ದರು. ಆ ನಂತರ ಬೆಂಗಳೂರಿನ ಯುವಕನ ಬಂಧನವಾಗಿದೆ. ಯುವಕನ ವಯಸ್ಸು ಹೊರತುಪಡಿಸಿ ಉಳಿದ ಯಾವುದೇ ಮಾಹಿತಿಯನ್ನು ಪೊಲೀಸರು ಇದುವರೆಗೆ ನೀಡಿಲ್ಲ.

ಪೊಲೀಸರು ಐಪಿಸಿ ಮತ್ತು ಐಟಿ ಕಾಯ್ದೆಯ ಹಲವು ಸೆಕ್ಷನ್ ಗಳ ಆಧಾರದಲ್ಲಿ ಬುಲ್ಲಿ ಆಪ್ ತಯಾರಕರು, ಅದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡವರು, ಮುಂತಾದವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಬಿಜೆಪಿ ಪ್ರಚೋದನೆಯೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಬುಲ್ಲಿ ಬಾಯ್ ಪ್ರಕರಣದಲ್ಲಿ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿ ಅಸಭ್ಯ ಫೋಟೊಗಳು ಹೊರಬರುತ್ತಿದ್ದಂತೆ ಇದಕ್ಕೆಲ್ಲಾ ಬಿಜೆಪಿ ಪ್ರಚೋದನೆಯೇ ಕಾರಣ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಮುಸ್ಲಿಂ ಮಹಿಳೆಯರ ಮೇಲಿನ ಈ ಅಸಹ್ಯಕರ ಕಿರುಕುಳವನ್ನು ಬಲವಾಗಿ ಖಂಡಿಸುತ್ತೇನೆ. ಇದು ಬಿಜೆಪಿ ನಾಯಕತ್ವವು ಪದೇ ಪದೇ ಅಲ್ಪಸಂಖ್ಯಾತರ ಮೇಲೆ ಅಮಾನವೀಯವಗಿ ವರ್ತಿಸಿದ್ದರ ಪರಿಣಾಮವಾಗಿದೆ. ಇದೇ ರೀತಿಯ ಕಿರುಕುಳಗಳು ಹಿಂದೆ ಕೇಳಿಬಂದಾಗ ಅವುಗಳನ್ನು ನಿರ್ಲಕ್ಷಿಸಿದ್ದು ಏಕೆ? ಈ ಬಾರಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿ: ದೇಶ ವಿಭಜನೆಯ ವಾಸ್ತವ ಸತ್ಯಗಳು: ಭಾಗ-ಒಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...