Homeಕರ್ನಾಟಕ‘ಮತಾಂತರ ನಿಷೇಧ’ ಮಸೂದೆ ವಾಪಸಾತಿಗೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ಒತ್ತಾಯ

‘ಮತಾಂತರ ನಿಷೇಧ’ ಮಸೂದೆ ವಾಪಸಾತಿಗೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ಒತ್ತಾಯ

ಜನವರಿ 17 ರಿಂದ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಪಕ್ಷವು ಕರೆ ನೀಡಿದೆ

- Advertisement -
- Advertisement -

ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಅಂಗೀಕರಿಸಿರುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ, 2021’ ಮಸೂದೆಯು ಭಾರತೀಯರಿಗೆ ಸಂವಿಧಾನವು ಕೊಡ ಮಾಡುವ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಕಸಿಯುವ ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಪ್ರತಿಪಾದಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆಯುತ್ತಿರುವ ಪಕ್ಷದ 23ನೇ ರಾಜ್ಯ ಸಮ್ಮೇಳನವು ವಿವಾದಿತ ಕಾಯ್ದೆಯನ್ನು ತೀವ್ರವಾಗಿ ಖಂಡಿಸಿದ್ದು, ಕಾಯ್ದೆ ಹಿಂಪಡೆಯಲು ಆಗ್ರಹಿಸಿ ನಿರ್ಣಯ ತೆಗೆದುಕೊಂಡಿದೆ.

ಕರ್ನಾಟಕ ವಿಧಾನ ಸಭೆಯಲ್ಲಿ ತರಾತುರಿಯಲ್ಲಿ ಅಂಗೀಕರಿಸಲ್ಪಟ್ಟ ಈ ಮಸೂದೆಯನ್ನು ವಿಧಾನಪರಿಷತ್ತಿನಲ್ಲಿ ತಿರಸ್ಕಾರಕ್ಕೆ ಒಳಗಾಗಬಹುದೆಂಬ ಆತಂಕದಿಂದ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತರಲು ಹೊರಟಿರುವುದನ್ನು ಸಮ್ಮೇಳನವು ತೀವ್ರವಾಗಿ ವಿರೋಧಿಸಿದೆ. ರಾಜ್ಯಪಾಲರು ಇದಕ್ಕೆ ಅನುಮತಿಯನ್ನು ನೀಡಬಾರದು ಎಂದು ಸಿಪಿಐ(ಎಂ) ಆಗ್ರಹಿಸಿದೆ.

ಇದನ್ನೂ ಓದಿ:ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

“ಭಾರತದ ಸಂವಿಧಾನದ 25 ನೇ ಅನುಚ್ಛೇಧವು ದೇಶದ ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತ್ರಿ ಪಡಿಸುತ್ತದೆ. ಧಾರ್ಮಿಕ ಸ್ವಾತಂತ್ರ್ಯ ಎಂದರೆ ದೇಶದ ಯಾವುದೇ ಪ್ರಜೆಯು ತನಗೆ ಇಷ್ಟ ಬಂದ ಮತಧರ್ಮವನ್ನು ಅನುಸರಿಸಬಹುದು. ಯಾವುದೇ ಧರ್ಮದ ವಿಚಾರಗಳನ್ನು ಪ್ರಚಾರ ಮಾಡಬಹುದು. ಹಾಗೆಯೇ ಯಾವುದೇ ವ್ಯಕ್ತಿಗೆ ಯಾವುದೇ ಮತಧರ್ಮವನ್ನು ಅನುಸರಿಸುವ, ಇಲ್ಲವೆ ಅನುಸರಿಸದೇ ಇರುವ ಸ್ವಾತಂತ್ರ್ಯ ಸಹ ಇರುತ್ತದೆ. ಇದು ಧಾರ್ಮಿಕ ಸ್ವಾತಂತ್ರ್ಯವಾಗಿದ್ದು ಈ ಧಾರ್ಮಿಕ ಹಕ್ಕು ದೇಶದ ಪ್ರತಿಪ್ರಜೆಯ ಮೂಲಭೂತ ಹಕ್ಕಾಗಿದೆ” ಎಂದು ಸಮ್ಮೇಳನದ ನಿರ್ಣಯ ವಿಶ್ಲೇಷಣೆ ಮಾಡಿದೆ‌.

“ರಾಜ್ಯ ಸರ್ಕಾರ ತಂದಿರುವ ಮಸುದೆಯೂ ಜನರ ಸಂವಿಧಾನಬದ್ಧ ಹಕ್ಕನ್ನು ಕಿತ್ತುಕೊಳ್ಳುವ ಒಂದು ದೌರ್ಜನ್ಯಕಾರಿ, ಸರ್ವಾಧಿಕಾರದ ಕ್ರಮವಾಗಿದೆ. ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷಗಳ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನಗಳ ಮೂಲಕ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರ ಆಗುವುದನ್ನು ತಡೆಯುವ ಉದ್ದೇಶದಿಂದ ಈ ಕಾಯ್ದೆಯನ್ನು ತರಲಾಗಿದೆ ಎಂದು ಸರಕಾರ ಹೇಳಿಕೊಂಡಿದೆ. ಆದರೆ ಈಗಾಗಲೇ ಸಂವಿಧಾನದಲ್ಲಿ ಬಲವಂತದ ಮತಾಂತರವನ್ನು ತಡೆಯುವ ಮತ್ತು ಶಿಕ್ಷಿಸುವ ಅವಕಾಶ ಇರುವಾಗ ಮತ್ತೊಂದು ಕಾಯ್ದೆಯನ್ನು ತರುವುದರ ಔಚಿತ್ಯವಾದರೂ ಏನಿದೆ” ಎಂದು ರಾಜ್ಯ ಸಮ್ಮೇಳನವು ಪ್ರಶ್ನಿಸಿದೆ.

ಇದನ್ನೂ ಓದಿ:ಏರ್‌ ಇಂಡಿಯಾ ಮಾರಾಟವು ಟಾಟಾ ಕಂಪೆನಿಗೆ ನೀಡುತ್ತಿರುವ ಗಿಫ್ಟ್‌‌: ಸಿಪಿಐ(ಎಂ) ಆಕ್ರೋಶ

“ಯಾವುದೇ ವ್ಯಕ್ತಿಯು ಮದುವೆಯ ನಂತರ ಮತ್ತು ಮದುವೆಯ ಮುಂಚೆ ಸಹ ಮದುವೆಯ ಕಾರಣಕ್ಕಾಗಿ ಮತಾಂತರ ಆಗುವುದನ್ನು ಸಹ ಈ ಕಾಯ್ದೆಯು ನಿರ್ಬಂಧಿಸುತ್ತದೆ. ಮದುವೆ ಮತ್ತು ಮತಧರ್ಮ ಪಾಲನೆಯು ಯಾವುದೇ ವ್ಯಕ್ತಿಯ ವೈಯುಕ್ತಿಕ ಹಕ್ಕಾಗಿದ್ದು, ಆಳುವ ಸರಕಾರಗಳಿಗೆ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶ ಕೊಡುವುದು ಎಂದರೆ ಸಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೂಲತತ್ವಗಳನ್ನು ಮಣ್ಣುಪಾಲು ಮಾಡುವುದು ಎಂದೇ ಆಗುತ್ತದೆ. ವಯಸ್ಕ ಯುವಕ-ಯುವತಿಯರು ತಮ್ಮ ಆಯ್ಕೆಯಂತೆ ಮದುವೆ ಆಗುವುದನ್ನು ಮತ್ತು ಅಂತರ್ ಧರ್ಮೀಯ ಪ್ರೇಮ ವಿವಾಹಗಳಾಗುವುದನ್ನು ತಡೆಯುವ ದುರುದ್ದೇಶ ಈ ಕಾಯ್ದೆಯಲ್ಲಿ ಅಡಗಿದೆ

ಇದಲ್ಲದೇ ಮತಾಂತರದ ನೆಪದಲ್ಲಿ ಈ ವಿಷಯಕ್ಕೆ ಸಂಬಂಧವಿಲ್ಲದ ವ್ಯಕ್ತಿಗಳು ಸಹ ಮತ್ತೊಬ್ಬರ ಖಾಸಗಿ ವಿಷಯಗಳಲ್ಲಿ ತಲೆಹಾಕಲು ಮತ್ತು ದೂರುಕೊಡಲು ಈ ಕಾಯ್ದೆಯು ಅವಕಾಶ ಮಾಡಿಕೊಡುತ್ತದೆ. ಮತಾಂತರದ ಆರೋಪ ಹೊರಿಸಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ, ಯಾವುದೇ ಅಲ್ಪಸಂಖ್ಯಾತ ಸಂಘ-ಸಂಸ್ಥೆಗಳಿಗೆ ಕಿರುಕುಳ ನೀಡಲು ಮತ್ತು ಸರಕಾರದ ಅನುದಾನವನ್ನು ತಡೆಹಿಡಿಯಲು ಬೇಕಾದಂತೆ ಕಾಯ್ದೆಯಲ್ಲಿ ಅವಕಾಶವನ್ನು ಸೃಷ್ಟಿಸಿಕೊಳ್ಳಲಾಗಿದೆ” ಎಂದು ಸಮ್ಮೇಳನವು ಟೀಕಿಸಿದೆ.

“ಸುಮಾರು ಎರಡು ಸಾವಿರ ವರ್ಷಗಳ ಹಿಂದೆಯೇ ಗೌತಮ ಬುದ್ಧ ಮತ್ತು ಮಹಾವೀರರು ತಾವಿದ್ದ ಮತಧರ್ಮವನ್ನು ತಿರಸ್ಕರಿಸಿ ಹೊಸ ಮೌಲ್ಯಗಳ ಆಧಾರದ ಹೊಸ ಮತಧರ್ಮಗಳನ್ನು ಬೋಧಿಸಿದರು. ಗುರುನಾನಕರು ಸ್ಥಾಪಿಸಿದ ಸಿಖ್ ಧರ್ಮ ಸಹ ಜನರು ತಾವು ಇದ್ದ ಧರ್ಮವನ್ನು ತೊರೆದು ಹೊಸ ಧರ್ಮವನ್ನು ಸೇರಿದ್ದರಿಂದಲೇ ವ್ಯಾಪಕವಾಗಿ ಬೆಳೆದದ್ದು. ಹನ್ನೆರಡನೇ ಶತಮಾನದ ಶರಣರು ನೇರವಾಗಿ ಮತ್ತು ಸ್ಪಷ್ಟವಾಗಿ ಸಂಘಟಿತವಾಗಿ ಮತ್ತು ಸಾಮೂಹಿಕವಾಗಿ ಅಸಮಾನತೆಯ ವೈದಿಕ ಮತಧರ್ಮವನ್ನು ಖಂಡಿಸಿ ಹೊಸ ಧರ್ಮದ ಪ್ರತಿಪಾದಕರಾದರು. ಈಗ ಬಿಜೆಪಿ ತರುತ್ತಿರುವ ಕಾನೂನಿನ ಕಣ್ಣಲ್ಲಿ ಬುದ್ಧ-ಮಹಾವೀರ-ಗುರುನಾನಕರು-ಬಸವಣ್ಣನವರನ್ನು ಮತಾಂತರಿಗಳು ಎಂದು ದೂರುವುದು ಗಂಭೀರವಾದ ಪ್ರಮಾದವಾಗುತ್ತದೆ” ಎಂದು ರಾಜ್ಯ ಸಮ್ಮೇಳನ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ:ತ್ರಿಪುರ: ಹಲವು ಪತ್ರಿಕಾ ಕಚೇರಿಗಳ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ- ಸಿಪಿಎಂ ಕಚೇರಿಗೆ ಬೆಂಕಿ

“ಹುಟ್ಟಿನಿಂದ ಬರುವ ಮತಧರ್ಮವು ಯಾವುದೇ ವ್ಯಕ್ತಿಯ ಸ್ವಂತ ಆಯ್ಕೆಯಲ್ಲ. ವ್ಯಕ್ತಿಗಳು ಬೆಳೆದು ವಯಸ್ಕರರಾದಾಗ ತಮಗೆ ಸರಿಕಂಡ ಮತಧರ್ಮವನ್ನು ಆರಿಸಿಕೊಳ್ಳುವ ಹಕ್ಕು ಅಥವಾ ಯಾವುದೇ ಮತಧರ್ಮವನ್ನು ಅನುಸರಿಸದಿರುವ ಹಕ್ಕು ಯಾವುದೇ ವ್ಯಕ್ತಿಗೆ ಇದ್ದೇ ಇದೆ. ಎಲ್ಲ ಆಧುನಿಕ ಪ್ರಜಾಪ್ರಭುತ್ವ ರಾಷ್ಟ್ರಗಳೂ ಮೂಲಭೂತ ಈ ಮಾನವ ಹಕ್ಕನ್ನು ಮಾನ್ಯ ಮಾಡಿವೆ ಮತ್ತು ಮಾನ್ಯ ಮಾಡಬೇಕಾಗುತ್ತದೆ.

ಅಲ್ಲದೇ ಯಾವುದೇ ಒಂದು ಧರ್ಮದಿಂದ ಜನರು ಮತ್ತೊಂದು ಧರ್ಮಕ್ಕೆ ಬದಲಾಗುತ್ತಾರೆ ಎಂದಾದರೆ ಆ ಧರ್ಮದ ಧಾರ್ಮಿಕ ಮುಖಂಡರು ಮತ್ತು ಧಾರ್ಮಿಕ ಪ್ರತಿಪಾದಕರು ತಮ್ಮ ಮತ ಧರ್ಮದಲ್ಲಿರುವ ದೋಷ, ಸಮಸ್ಯೆಗಳ ಕಡೆಗೆ ಗಮನ ನೀಡಿ ಅವುಗಳನ್ನು ನಿವಾರಿಸಬೇಕು. ಧಾರ್ಮಿಕ ಸುಧಾರಣೆಗಳನ್ನು ತಂದು ಜನರ ವಿಶ್ವಾಸವನ್ನು ಗಳಿಸಿಕೊಳ್ಳಬೇಕೆ ಹೊರತು ಸರ್ವಾಧಿಕಾರಿ ಕಾನೂನುಗಳ ಮೂಲಕ ಅದನ್ನು ತರುವುದು ನ್ಯಾಯವಲ್ಲ. ಈ ಒಟ್ಟು ಹಿನ್ನೆಲೆಯಲ್ಲಿ ಈ ಬಲವಂತದ ಮತಾಂತರ ನಿಷೇಧದ ಹೆಸರಿನ ಈ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2021’ ಕಾಯ್ದೆಯನ್ನು ವಾಪಸ್ ಪಡೆಯಬೇಕು. ರಾಜ್ಯಪಾಲರು ಇದಕ್ಕೆ ಅವಕಾಶವನ್ನು ನೀಡಕೂಡದು” ಎಂದು ಸಿಪಿಐ(ಎಂ) ರಾಜ್ಯ ಸಮ್ಮೇಳನವು ಆಗ್ರಹಿಸಿದೆ.

ಜೊತೆಗೆ, ಬಿಜೆಪಿ-ಸಂಘಪರಿವಾರದ ಹುನ್ನಾರಗಳನ್ನು ವಿರೋಧಿಸಿ ಜನವರಿ 17 ರಿಂದ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಸಿಪಿಐ(ಎಂ) ಕರೆ ನೀಡಿದೆ.

ಇದನ್ನೂ ಓದಿ:ಧರ್ಮ ಆಚರಿಸಿ, ದ್ವೇಷ ಭಾಷಣವನ್ನಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...