Homeಮುಖಪುಟತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಿಗೆ 14 ದಿನ ನ್ಯಾಯಾಂಗ ಬಂಧನ

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಿಗೆ 14 ದಿನ ನ್ಯಾಯಾಂಗ ಬಂಧನ

- Advertisement -
- Advertisement -

ಕೋವಿಡ್ -19 ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದ್ದಕ್ಕಾಗಿ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಭಾನುವಾರ ರಾತ್ರಿ ನಡೆದ ಪ್ರತಿಭಟನೆಯಲ್ಲಿ ಬಂಡಿ ಸಂಜಯ್ ಕುಮಾರ್ ಅವರನ್ನು ಬಂಧಿಸಿದ ನಂತರ ಪಕ್ಷದ ಮುಖಂಡರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ.

ಭಾರತೀಯ ಜನತಾ ಪಕ್ಷದ ತೆಲಂಗಾಣ ಘಟಕದ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಅವರನ್ನು ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರತಿಭಟನೆಯ ಸಂದರ್ಭದಲ್ಲಿ ಕೋವಿಡ್ -19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ಭಾನುವಾರ ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಅವರ ಬಂಧನವನ್ನು ವಿರೋಧಿಸಿ ಬಿಜೆಪಿ ಸದಸ್ಯರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ.

ಕುಮಾರ್ ಮತ್ತು ಇತರ ಬಿಜೆಪಿ ಮುಖಂಡರು ಈ ತಿಂಗಳ ಆರಂಭದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದ ಹೊಸ ವಲಯ ವರ್ಗಾವಣೆ ನೀತಿಯನ್ನು ವಿರೋಧಿಸಿ ಕರೀಂನಗರ ಪಟ್ಟಣದ ಪಕ್ಷದ ಕಚೇರಿಯಲ್ಲಿ ಭಾನುವಾರ ರಾತ್ರಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರಿ ನೌಕರರು ಮತ್ತು ಶಿಕ್ಷಕರ ಮೇಲೆ ಪರಿಣಾಮ ಬೀರುವ ನೀತಿ ನಿರಂಕುಶವಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಸುಮಾರು ಎರಡು ಗಂಟೆಗಳ ಪ್ರತಿಭಟನೆಯ ನಂತರ ಪೊಲೀಸರು ಬಾಗಿಲಿನ ಬೀಗವನ್ನು ಒಡೆದು ಕಚೇರಿಗೆ ನುಗ್ಗಿದರು ಎಂದು ದಿ ಹಿಂದೂ ವರದಿ ಮಾಡಿದೆ.

ಪ್ರತಿಭಟನೆ ವೇಳೆ ದೈಹಿಕ ಅಂತರ ಕಾಯ್ದುಕೊಂಡಿರಲಿಲ್ಲ. ಮಾಸ್ಕ್ ಕೂಡ ಧರಿಸಿರಲಿಲ್ಲ. ಹೀಗಾಗಿ ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 51(ಬಿ) ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188ರ ಅಡಿಯಲ್ಲಿ 21 ಮಂದಿಯ ವಿರುದ್ಧ ಎಫ್‌ಐಆರ್‌‌ ದಾಖಲಿಸಲಾಗಿದೆ ಎಂದು ಕರೀಂನಗರ ಪೊಲೀಸ್ ಆಯುಕ್ತ ವಿ.ಸತ್ಯನಾರಾಯಣ ತಿಳಿಸಿದ್ದಾರೆ.

ಕನಿಷ್ಠ 70 ಜನರನ್ನು ಬಂಧಿಸಿ ನಂತರ ಅವರಿಗೆ ನೋಟಿಸ್ ನೀಡಿ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ ಸೋಮವಾರದವರೆಗೆ ಕುಮಾರ್ ಅವರನ್ನು ಮಣಕೊಂಡೂರು ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ. ಬಳಿಕ ಕರೀಂನಗರದಲ್ಲಿರುವ ಪೊಲೀಸ್ ತರಬೇತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು.

ಕುಮಾರ್ ಬಂಧನವನ್ನು ವಿರೋಧಿಸಿ ಹಲವಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದರಿಂದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಉದ್ವಿಗ್ನತೆ ಉಂಟಾಯಿತು. ಘೋಷಣೆಗಳನ್ನು ಕೂಗಿ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ ನಂತರ ಅವರನ್ನು ಬಂಧಿಸಲಾಯಿತು.

ವಿಪತ್ತು ನಿರ್ವಹಣಾ ಕಾಯ್ದೆಯ ಉಲ್ಲಂಘನೆಯಲ್ಲದೆ, ಗಲಭೆ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿದ 16 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದರ ನಡುವೆ ಸೋಮವಾರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಕುಮಾರ್ ಬಂಧನವನ್ನು ಖಂಡಿಸಿದ್ದಾರೆ. ಅವರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗಲೂ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹುಜೂರಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದರಿಂದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಹತಾಶರಾಗಿದ್ದಾರೆ ಎಂದು ನಡ್ಡಾ ಟೀಕಿಸಿದ್ದಾರೆ.


ಇದನ್ನೂ ಓದಿರಿ: ಕೋವಿಡ್‌: ಫ್ರಾನ್ಸ್‌‌ನಲ್ಲಿ ಹೊಸ ತಳಿ ‘ಐಎಚ್‌ಯು’ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...