Homeಕರ್ನಾಟಕಓಮಿಕ್ರಾನ್ ಆತಂಕ: ಅಂತರರಾಜ್ಯ ಗಡಿ ಬಂದ್ ಇಲ್ಲ- ಸಚಿವ ಡಾ.ಅಶ್ವತ್ಥನಾರಾಯಣ

ಓಮಿಕ್ರಾನ್ ಆತಂಕ: ಅಂತರರಾಜ್ಯ ಗಡಿ ಬಂದ್ ಇಲ್ಲ- ಸಚಿವ ಡಾ.ಅಶ್ವತ್ಥನಾರಾಯಣ

- Advertisement -
- Advertisement -

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ವಾರಾಂತ್ಯದ ಕರ್ಫ್ಯೂ ವಿಧಿಸಲು ಮಂಗಳವಾರ ನಿರ್ಧರಿಸಿದೆ. ಜೊತೆಗೆ ಈಗಾಗಲೇ ಜಾರಿಯಲ್ಲಿರುವ ನೈಟ್‌ ಕರ್ಫ್ಯೂ‌ ಅನ್ನು ಜನವರಿ 19 ರವರೆಗೆ ವಿಸ್ತರಿಸಲು ನಿರ್ಧರಿಸಿದೆ. ರಾಜ್ಯಾದ್ಯಂತ ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ. ಈ ನಡುವೆಯೇ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

’ಕೊರೊನಾ ಸೋಂಕು ಮತ್ತು ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ” ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಬೆಳಗಾವಿಯಲ್ಲಿ ಹೇಳಿದ್ದಾರೆ.

`ಅಂತರರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಮಾತ್ರ ನಿಯಂತ್ರಿಸಲಾಗುವುದು. ಉಳಿದಂತೆ ಅಂತರರಾಜ್ಯ ಚಟುವಟಿಕೆ ಮತ್ತು ಓಡಾಟಗಳಿಗೆ ಮುಕ್ತ ಅವಕಾಶ ಮುಂದುವರಿಯಲಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೂಲದ ಯುವಕನ ಬಂಧನ: ಏನಿದು ಬುಲ್ಲಿ ಬಾಯ್ ಪ್ರಕರಣ?

’15 ದಿನಗಳ ಮಟ್ಟಿಗೆ ಸರಕಾರವು ವಾರಾಂತ್ಯದ ಕರ್ಫ್ಯೂ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಂಪೂರ್ಣ ಲಾಕ್ ಡೌನನ್ನು ತಡೆಯುವುದೇ ಇದರ ಹಿಂದಿನ ಸದುದ್ದೇಶವಾಗಿದೆ. ಕಚೇರಿಗಳು ಸೇರಿದಂತೆ ಪಬ್, ಬಾರ್, ಚಿತ್ರಮಂದಿರ ಇತ್ಯಾದಿಗಳಲ್ಲಿ ಸಾಮರ್ಥ್ಯದ ಶೇ.50 ರಷ್ಟು ಮಾತ್ರ ಜನ ಸೇರುವಂತೆ ಸೂಚಿಸಲಾಗಿದೆ’ ಎಂದರು.

’ಮುಖ್ಯವಾಗಿ ಬೆಂಗಳೂರಿನಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರುವ ಚಿಂತನೆ ಈ ಮುಂಜಾಗ್ರತಾ ಕ್ರಮಗಳ ಹಿಂದೆಯಿದೆ. ಹೀಗಾಗಿಯೇ ಅಲ್ಲಿ ಎರಡು ವಾರಗಳ ಮಟ್ಟಿಗೆ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಇದರ ಜತೆಯಲ್ಲೇ 15 ರಿಂದ 18 ವರ್ಷದ ಯುವಜನತೆಗೂ ಲಸಿಕೆ ಹಾಕಲು ಆರಂಭಿಸಲಾಗಿದೆ. ಆದ್ದರಿಂದ ಯಾರೂ ಆತಂಕಕ್ಕೆ ಒಳಪಡಬೇಕಾಗಿಲ್ಲ. ಹತ್ತು ದಿನಗಳ ನಂತರ ಮತ್ತೊಮ್ಮೆ ಸಮಾಲೋಚಿಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದರು.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹಠಾತ್ ಏರಿಕೆಯಾಗಿರುವುದರಿಂದ ಮಂಗಳವಾರ ಸಂಜೆ ಸಭೆ ನಡೆಸಲಾಗಿತ್ತು. ಮಂಗಳವಾರದಂದು 2,479 ಪ್ರಕರಣಗಳು ದಾಖಲಾಗಿದ್ದು, ನಾಲ್ಕು ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಜನವರಿ 1 ರಿಂದ ಬೆಂಗಳೂರಿನಲ್ಲಿ ಪ್ರತಿದಿನ 1,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.


ಇದನ್ನೂ ಓದಿ: ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...