Homeಮುಖಪುಟಹಿಂದೂಯೇತರರಿಗೆ ಗಂಗಾ ಘಾಟ್‌ಗಳು, ದೇವಾಲಯಗಳಿಗೆ ಪ್ರವೇಶವಿಲ್ಲ: ವಾರಣಾಸಿಯಲ್ಲಿ ಪೋಸ್ಟರ್‌ಗಳು

ಹಿಂದೂಯೇತರರಿಗೆ ಗಂಗಾ ಘಾಟ್‌ಗಳು, ದೇವಾಲಯಗಳಿಗೆ ಪ್ರವೇಶವಿಲ್ಲ: ವಾರಣಾಸಿಯಲ್ಲಿ ಪೋಸ್ಟರ್‌ಗಳು

- Advertisement -
- Advertisement -

ಧಾರ್ಮಿಕ ಕ್ಷೇತ್ರ ವಾರಣಾಸಿಯಲ್ಲಿ ಗಂಗಾ ನದಿಯ ಘಾಟ್‌ಗಳು ಮತ್ತು ನದಿಯುದ್ದಕ್ಕೂ ಇರುವ ದೇವಾಲಯಗಳಿಂದ ಹಿಂದೂಯೇತರರು ದೂರವಿರುವಂತೆ, ಪ್ರವೇಶ ನಿಷೇಧಿಸಲಾಗಿದೆ ಎಂದು ಹೇಳುವ ಪೋಸ್ಟರ್‌ಗಳು ವಾರಣಾಸಿಯಲ್ಲಿ ಕಾಣಿಸಿಕೊಂಡಿವೆ.

ಬಲಪಂಥೀಯ ಸಂಘಟನೆಗಳು ನಗರದಲ್ಲಿ ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ ಎಂದು ಶಂಕಿಸಲಾಗಿದ್ದು, ಪೊಲೀಸರು ಅವುಗಳನ್ನು ತೆರವುಗೊಳಿಸುತ್ತಿದ್ದಾರೆ. ಘಟನೆ ಕುರಿತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಹಿಂದೂಯೇತರರಿಗೆ ಪ್ರವೇಶ ನಿಷೇಧಿಸಲಾಗಿದೆ. ಕಾಶಿಯಲ್ಲಿ ಗಂಗಾ ಮಾತೆಯ ಉದ್ದಕ್ಕೂ ಇರುವ ಘಾಟ್‌ಗಳು ಮತ್ತು ದೇವಾಲಯಗಳು ಸನಾತನ ಧರ್ಮ, ಭಾರತೀಯ ಸಂಸ್ಕೃತಿ ಮತ್ತು ನಂಬಿಕೆಯ ಸಂಕೇತಗಳಾಗಿವೆ. ಸನಾತನ ಧರ್ಮದಲ್ಲಿ ಭಕ್ತಿ ಮತ್ತು ನಂಬಿಕೆ ಇರುವವರಿಗೆ ಸ್ವಾಗತ. ಇಲ್ಲದಿದ್ದರೆ, ಇದು ಪಿಕ್ನಿಕ್ ಸ್ಪಾಟ್ ಅಲ್ಲ” ಎಂದು ಹಿಂದಿಯಲ್ಲಿ ಬರೆದ ಪೋಸ್ಟರ್‌ಗಳು ನಗರದುದ್ದಕ್ಕೂ ಕಾಣಿಸಿಕೊಂಡಿವೆ.

ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

Posters In Varanasi Ask Non-Hindus To Stay Away From Ghats

ಪೋಸ್ಟರ್‌ನಲ್ಲಿ “ಇದು ವಿನಂತಿಯಲ್ಲ, ಎಚ್ಚರಿಕೆ” ಎಂದು ಬರೆಯಲಾಗಿದ್ದು, ವಿಶ್ವ ಹಿಂದೂ ಪರಿಷತ್ ಮತ್ತು ಬವಜರಂಗದಳ ಹೆಸರನ್ನು ಸೇರಿಸಲಾಗಿದೆ. ಈ ಪೋಸ್ಟರ್‌ಗಳ ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿಯೂ ಕಾಣಿಸಿಕೊಂಡಿವೆ.

“ಈ ಘಟನೆ ಕುರಿತು ಸ್ಥಳೀಯ ಭೇಲುಪುರ ಪೊಲೀಸ್ ಠಾಣೆಯಿಂದ ತನಿಖೆ ನಡೆಸಲಾಗುತ್ತಿದೆ. ವೀಡಿಯೊಗಳು ಮತ್ತು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಜನರನ್ನು ಗುರುತಿಸಲಾಗುತ್ತಿದೆ. ಇಲ್ಲಿಯವರೆಗೆ, ಪೊಲೀಸರಿಗೆ ಯಾವುದೇ ಲಿಖಿತ ದೂರು ಬಂದಿಲ್ಲ. ಕೆಲವು ಸ್ಥಳೀಯ ಗುಂಪುಗಳು ಅದನ್ನು ಹೈಲೈಟ್ ಮಾಡಿದ ನಂತರ ಪೊಲೀಸರು ಜನರ ಸಹಾಯದಿಂದ ಪೋಸ್ಟರ್‌ಗಳನ್ನು ತೆಗೆದುಹಾಕುತ್ತಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹಿಂದೂಯೇತರರು ಘಾಟ್‌ಗಳ ಶುದ್ಧತೆಯನ್ನು ಉಲ್ಲಂಘಿಸುತ್ತಾರೆ. ಅದಕ್ಕಾಗಿಯೇ ಅವರಿಗೆ ಈ ಎಚ್ಚರಿಕೆ ನೀಡಲಾಗಿದೆ. ಇವರು ಘಾಟ್‌ಗಳಲ್ಲಿ ಮದ್ಯ ಮತ್ತು ಮಾಂಸಾಹಾರ ಸೇವಿಸುತ್ತಾರೆ” ಎಂದು ಬಜರಂಗದಳದ ಕಾಶಿ ಮಹಾನಗರದ ಸಂಯೋಜಕ ನಿಖಿಲ್ ತ್ರಿಪಾಠಿ ರುದ್ರ ಅವರನ್ನು ಪಿಟಿಐ ಉಲ್ಲೇಖಿಸಿದೆ.


ಇದನ್ನೂ ಓದಿ: ಧರ್ಮವನ್ನು ಲಾಭಕ್ಕಾಗಿ ಬಳಸುವ ಬಿಜೆಪಿ-RSS ನಕಲಿ ಹಿಂದೂಗಳು- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...