Homeಅಂತರಾಷ್ಟ್ರೀಯಅಫ್ಘಾನ್‌ಗೆ ರಾಜಕೀಯ ಪೂರ್ವಾಗ್ರಹಗಳನ್ನು ಬಿಟ್ಟು ಸಹಾಯ ಮಾಡಿ: ತಾಲಿಬಾನ್ ಮನವಿ

ಅಫ್ಘಾನ್‌ಗೆ ರಾಜಕೀಯ ಪೂರ್ವಾಗ್ರಹಗಳನ್ನು ಬಿಟ್ಟು ಸಹಾಯ ಮಾಡಿ: ತಾಲಿಬಾನ್ ಮನವಿ

- Advertisement -
- Advertisement -

ಇತ್ತೀಚಿಗೆ ಬಿದ್ದ ಹಿಮ ಮತ್ತು ಉಂಟಾದ ಭೀಕರ ಪ್ರವಾಹ ಅಫ್ಘಾನ್‌ ಜನರನ್ನು ದುಸ್ಥಿತಿಗೆ ತಳ್ಳಿದೆ. ಇಂತಹ ಸಮಯದಲ್ಲಿ “ರಾಜಕೀಯ ಪೂರ್ವಾಗ್ರಹ”ವಿಲ್ಲದೆ ತುರ್ತು ಮಾನವೀಯ ನೆರವು ನೀಡಬೇಕು ಎಂದು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನ್ ವಿಶ್ವದ ಇತರ ರಾಷ್ಟ್ರಗಳಿಗೆ ಮನವಿ ಮಾಡಿದೆ.

ಆಗಸ್ಟ್ ಮಧ್ಯದಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡು ಹೊಸ ಸರ್ಕಾರ ರಚಿಸಿದೆ. ಅಂದಿನಿಂದ ದೇಶದಲ್ಲಿ ಹಣದುಬ್ಬರ, ಆಹಾರದ ಕೊರತೆ ಮತ್ತು ನಿರುದ್ಯೋಗ ಹೆಚ್ಚಾಗಿ ದೇಶವು ಆರ್ಥಿಕ ಅವ್ಯವಸ್ಥೆಯಲ್ಲಿ ಮುಳುಗಿದೆ.

ವೀಡಿಯೊ ಒಂದರಲ್ಲಿ ಮನವಿ ಮಾಡಿರುವ, ಉಪಪ್ರಧಾನಿ ಅಬ್ದುಲ್ ಘನಿ ಬರಾದಾರ್, “ಇದೀಗ ವಿವಿಧ ಸ್ಥಳಗಳಲ್ಲಿ, ಜನರಿಗೆ ಊಟ, ವಸತಿ, ಬೆಚ್ಚಗಿನ ಬಟ್ಟೆ ಮತ್ತು ಹಣ ಕೂಡ ಇಲ್ಲ. ಜಗತ್ತು ಯಾವುದೇ ರಾಜಕೀಯ ಪಕ್ಷಪಾತವಿಲ್ಲದೆ, ಪೂರ್ವಾಗ್ರಹಗಳಿಲ್ಲದೇ ಆಫ್ಘನ್ ಜನರನ್ನು ಬೆಂಬಲಿಸಬೇಕು. ಇತರೆ ದೇಶಗಳು ತಮ್ಮ ಮಾನವೀಯ ಜವಾಬ್ದಾರಿಗಳನ್ನು ನಿರ್ವಹಿಸಬೇಕು” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನ: ಪುರುಷನ ಬೆಂಗಾವಲು ಇಲ್ಲದೆ ಮಹಿಳೆ ದೂರ ಪ್ರಯಾಣಿಸುವಂತಿಲ್ಲ- ತಾಲಿಬಾನ್

ಇತ್ತೀಚಿನ ದಿನಗಳಲ್ಲಿ ಮಧ್ಯ ಮತ್ತು ಉತ್ತರ ಅಫ್ಘಾನಿಸ್ತಾನದ ಬಹುತೇಕ ಭಾಗಗಳಲ್ಲಿ ಹಿಮ ಆವರಿಸಿದೆ, ಇತ್ತ ದಕ್ಷಿಣದ ಭಾಗಗಳಲ್ಲಿ ಪ್ರವಾಹವು ಪರಿಣಾಮ ಬೀರಿದೆ. ಅನೇಕ ಜನ ಬಿಸಿ ಊಟವನ್ನು ಪಡೆಯಲು ಕೂಡ ಹೆಣಗಾಡುತ್ತಿದ್ದಾರೆ. ಸರಿಯಾದ ವಿದ್ಯುತ್ ಸಂಪರ್ಕ ಕೂಡ ಸಾಧ್ಯವಾಗುತ್ತಿಲ್ಲ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

“ಅಫ್ಘಾನಿಸ್ತಾನವು ಗಂಭೀರ ಪರಿಸ್ಥಿತಿಯಲ್ಲಿದೆ. ಜಗತ್ತು ನಮ್ಮ ಬಡ ಜನರನ್ನು ಮರೆಯಬಾರದು ಎಂದು ನಾವು ಅಂತರರಾಷ್ಟ್ರೀಯ ಸಮುದಾಯ, ಎನ್‌ಜಿಒಗಳು ಮತ್ತು ಎಲ್ಲಾ ದೇಶಗಳಿಗೆ ಕರೆ ನೀಡುತ್ತೇವೆ” ಎಂದು ಉಪ ಪ್ರಧಾನಿ ಅಬ್ದುಲ್ ಘನಿ ಬರಾದರ್ ಮನವಿ ಮಾಡಿದ್ದಾರೆ.

“ಒಂದು ಕಡೆ, ದಬ್ಬಾಳಿಕೆಯ ನಿರ್ಬಂಧಗಳಿವೆ ಮತ್ತು ಇನ್ನೊಂದು ಬದಿಯಲ್ಲಿ ನಾಗರಿಕರಿಗೆ ಉದ್ಯೋಗಾವಕಾಶಗಳನ್ನು ನೀಡಲು ಅಫ್ಘಾನಿಸ್ತಾನದಲ್ಲಿ ಕಳೆದ 20 ವರ್ಷಗಳಿಂದ ಯಾವುದೇ ಮೂಲಸೌಕರ್ಯಗಳಿಲ್ಲ” ಎಂದು ಹೇಳಿದ್ದಾರೆ.

ಇನ್ನು, ಜನವರಿ 7 ರಂದು ಭಾರತವು 2 ಟನ್‌ ಅಗತ್ಯ ವೈದ್ಯಕೀಯ ಸಾಮಗ್ರಿಯನ್ನು ತಾಲಿಬಾನ್‌ ಆಡಳಿತದ ದೇಶಕ್ಕೆ ರವಾನಿಸಿದೆ. ಕಾಬೂಲ್‌ನ ಇಂದಿರಾಗಾಂಧಿ ಆಸ್ಪತ್ರೆಗೆ ಸಾಮಗ್ರಿಗಳನ್ನು ಹಸ್ತಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ತಿಳಿಸಿದೆ.


ಇದನ್ನೂ ಓದಿ: ನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಕೇಳಲು ನೀವ್ಯಾರು?: ಬಜರಂಗದಳ ಸದಸ್ಯರಿಗೆ ಮಹಿಳೆಯ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...