Homeಮುಖಪುಟಬಿಜೆಪಿ ಸೋಲಿಸುವ ಉತ್ಸಾಹ ಹೊಂದಿರುವ ಯಾವುದೇ ಪಕ್ಷದ ಬೆಂಬಲ ಪಡೆಯಲು ಕಾಂಗ್ರೆಸ್ ಸಿದ್ಧ: ಪಿ. ಚಿದಂಬರಂ

ಬಿಜೆಪಿ ಸೋಲಿಸುವ ಉತ್ಸಾಹ ಹೊಂದಿರುವ ಯಾವುದೇ ಪಕ್ಷದ ಬೆಂಬಲ ಪಡೆಯಲು ಕಾಂಗ್ರೆಸ್ ಸಿದ್ಧ: ಪಿ. ಚಿದಂಬರಂ

- Advertisement -
- Advertisement -

’ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಉತ್ಸುಕವಾಗಿರುವ ಯಾವುದೇ ಪಕ್ಷದ ಬೆಂಬಲವನ್ನು ಸ್ವೀಕರಿಸಲು ಕಾಂಗ್ರೆಸ್ ಸಿದ್ಧವಿದೆ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಶನಿವಾರ ಹೇಳಿದ್ದಾರೆ.

 ತೃಣಮೂಲ ಕಾಂಗ್ರೆಸ್ ಪಕ್ಷದ ಗೋವಾ ಉಸ್ತುವಾರಿ ಮಹುವಾ ಮೊಯಿತ್ರಾ ಅವರು ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ಮತ್ತು ಕಾಂಗ್ರೆಸ್‌ನೊಂದಿಗೆ ಚುನಾವಣಾ ಪೂರ್ವ ಮೈತ್ರಿಗೆ ಮುಕ್ತವಾಗಿದೆ ಎಂದು ಸೂಚಿಸಿದ ಬೆನ್ನಲ್ಲೇ ಚಿದಂಬರಂ ಹೇಳಿಕೆ ಹೊರಬಿದ್ದಿದೆ.

“ಮೈತ್ರಿ ಕುರಿತ ಟಿಎಂಸಿ ಹೇಳಿಕೆಯನ್ನು ಇಂದು ಪತ್ರಿಕೆಯಲ್ಲಿ ಓದಿದ್ದೇನೆ, ಅಧಿಕೃತ ಹೇಳಿಕೆಗಾಗಿ ಕಾಯೋಣ. ಕಾಂಗ್ರೆಸ್ ಸ್ವಂತ ಬಲದಿಂದ ಬಿಜೆಪಿಯನ್ನು ಸೋಲಿಸುವ ಸಾಮರ್ಥ್ಯ ಹೊಂದಿದೆ, ಆದರೆ, ಯಾವುದೇ ಪಕ್ಷವು ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಅನ್ನು ಬೆಂಬಲಿಸಲು ಬಯಸಿದರೆ, ನಾನು ಏಕೆ ಬೇಡ ಎನ್ನಲಿ?” ಎಂದು ಮಾಜಿ ಕೇಂದ್ರ ಸಚಿವ ಚಿದಂಬರಂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ 2017 ರ ಚುನಾವಣೆಯಲ್ಲಿ ಗರಿಷ್ಠ 17 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿತ್ತು. ಬಳಿಕೆ ಈ ಐದು ವರ್ಷಗಳಲ್ಲಿ ಪಕ್ಷದ ಬಲ ಕ್ಷೀಣಿಸಿದೆ. ತನ್ನ ಬಹುಪಾಲು ಶಾಸಕರನ್ನು ಕಳೆದುಕೊಂಡಿದೆ. ಅದರಲ್ಲೂ ಬಹುತೇಕರು ಬಿಜೆಪಿಗೆ ಇಬ್ಬರು ಟಿಎಂಸಿಗೆ ಪಕ್ಷಾಂತರವಾಗಿದ್ದಾರೆ. ಈಗ ಕಾಂಗ್ರೆಸ್‌ಗೆ ಸದನದಲ್ಲಿ ಕೇವಲ ಇಬ್ಬರು ಶಾಸಕರು ಮಾತ್ರ ಉಳಿದಿದ್ದಾರೆ.

ಕಾಂಗ್ರೆಸ್ ಈಗಾಗಲೇ ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ)ಯೊಂದಿಗೆ ತನ್ನ ಚುನಾವಣಾ ಪೂರ್ವ ಮೈತ್ರಿಯನ್ನು ಘೋಷಿಸಿದೆ. ಇತ್ತ ಟಿಎಂಸಿ ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) ಜೊತೆ ಮೈತ್ರಿ ಮಾಡಿಕೊಂಡಿದೆ.

“ಬಿಜೆಪಿಯನ್ನು ಸೋಲಿಸಲು ಸಾಧ್ಯವಿರುವ ಎಲ್ಲವನ್ನೂ ಟಿಎಂಸಿ ಮಾಡುತ್ತದೆ” ಎಂದು ಮಹುವಾ ಮೊಯಿತ್ರಾ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‌ಗೆ ಜಿಎಫ್‌ಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಟ್ಯಾಗ್ ಮಾಡಿದ್ದಾರೆ.

2017 ರ ಚುನಾವಣೆಯಲ್ಲಿ 40 ಸದಸ್ಯ ಬಲದ ಸದನದಲ್ಲಿ 17 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಗೋವಾದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 13 ಸ್ಥಾನಗಳನ್ನು ಗಳಿಸಿದ ಬಿಜೆಪಿ ಕೆಲವು ಸ್ವತಂತ್ರರು ಮತ್ತು ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಗಲಿಲ್ಲ.

ಸದ್ಯ ಗೋವಾ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಫೆಬ್ರವರಿ 14 ರಂದು ಚುನಾವಣೆ ಎದುರಿಸಲಿದೆ. ಮಾರ್ಚ್ 10ಕ್ಕೆ ಫಲಿತಾಂಶ ಹೊರ ಬೀಳಲಿದೆ.


ಇದನ್ನೂ ಓದಿ: ’ನಮ್ಮ ಜಿಲ್ಲೆಯನ್ನು ಹಾಳು ಮಾಡಿಬಿಟ್ಟ’: ಸಚಿವ ಮಾಧುಸ್ವಾಮಿ ವಿರುದ್ಧ ಕಿಡಿಕಾರಿದ ಬಿಜೆಪಿ ಸಂಸದ ಜಿ.ಎಸ್. ಬಸವರಾಜ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಕಾಂಗ್ರೇಸ್ ಅನ್ನೋದು ಬಿಜೆಪಿ ಯ ಹೆತ್ತ ತಾಯಿ. ಅವ್ರುಗಳು ಝೇಂಡ ಮಾತ್ರ ಬೇರೆ ಬೇರೆ ಅಜೆಂಡಾ ಒಂದೇ…

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...