Homeಮುಖಪುಟಕಳೆದ ವರ್ಷವೇ ‘ದೀದಿ’ ಉದ್ಘಾಟಿಸಿದ್ದ ಆಸ್ಪತ್ರೆಯನ್ನು ಮತ್ತೆ ಉದ್ಘಾಟಿಸಿದ ‘ಮೋದಿ’: ಆರೋಪ

ಕಳೆದ ವರ್ಷವೇ ‘ದೀದಿ’ ಉದ್ಘಾಟಿಸಿದ್ದ ಆಸ್ಪತ್ರೆಯನ್ನು ಮತ್ತೆ ಉದ್ಘಾಟಿಸಿದ ‘ಮೋದಿ’: ಆರೋಪ

- Advertisement -
- Advertisement -

“ಕಳೆದ ವರ್ಷವೇ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (ಸಿಎನ್‌ಸಿಐ) ಎರಡನೇ ಕ್ಯಾಂಪಸ್ ಉದ್ಘಾಟಿಸಿದ್ದೆ. ಪ್ರಧಾನಿ ನರೇಂದ್ರ ಮೋದಿಯವರು ಅದನ್ನು ಮತ್ತೆ ಶುಕ್ರವಾರ ದೇಶಕ್ಕೆ ಸಮರ್ಪಿಸಿದ್ದಾರೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

“ಪ್ರಧಾನಿಯವರು ಈ ಯೋಜನೆಯನ್ನು ವರ್ಚ್ಯೂವಲ್‌ ಕಾರ್ಯಕ್ರಮದ ಮೂಲಕ ಉದ್ಘಾಟಿಸಿದ್ದಾರೆ. ಸಾಂಕ್ರಾಮಿಕದ ಸಮಯದಲ್ಲಿ ಕೋವಿಡ್ ಕೇಂದ್ರದ ಅಗತ್ಯವಿದ್ದಾಗ ನಾವು ಅದನ್ನು ಈಗಾಗಲೇ ಉದ್ಘಾಟಿಸಿದ್ದೇವೆ ಎಂದು ನಾನು ಪ್ರಧಾನಿಗೆ ತಿಳಿಸಲು ಬಯಸುತ್ತೇನೆ. ಇದು ನಮಗೆ ಸಾಕಷ್ಟು ಸಹಾಯ ಮಾಡಿದೆ. ಈ ಸಂಸ್ಥೆಯು ರಾಜ್ಯ ಸರ್ಕಾರದೊಂದಿಗೆ ಸಂಬಂಧ ಹೊಂದಿದೆ” ಎಂದು ಅವರು ಹೇಳಿದ್ದಾರೆ.

ಪ್ರಧಾನ ಮಂತ್ರಿಯವರ ವರ್ಚ್ಯೂಯಲ್‌‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ರಾಜ್ಯವು 71 ಕೋಟಿ ರೂಪಾಯಿಗಳ ವೆಚ್ಚವನ್ನು ಭರಿಸುತ್ತದೆ. ಯೋಜನೆಗೆ ರಾಜ್ಯವು ಶೇ 25 ರಷ್ಟು ಹಣವನ್ನು ನೀಡುತ್ತಿದೆ ಎಂದು ತಿಳಿದಾಗ ಪ್ರಧಾನಿಯವರು ಸಂತೋಷಪಡುತ್ತಾರೆ. ಎರಡನೇ ಕ್ಯಾಂಪಸ್‌ಗಾಗಿ ನಾವು 11 ಎಕರೆ ಭೂಮಿಯನ್ನು ಸಿಎನ್‌ಸಿಐಗೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಕ್ಯಾಂಪಸ್ ಅನ್ನು ಉದ್ಘಾಟಿಸಿ ಅದನ್ನು ದೇಶದ ಜನರಿಗೆ ಅರ್ಪಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಮಮತಾ ಬ್ಯಾನರ್ಜಿಯವರು ಧನ್ಯವಾದ ಸಮರ್ಪಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಎರಡು ಬಾರಿ ಆಹ್ವಾನಿಸಿದ ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಿ ಮಮತಾ ಬ್ಯಾನರ್ಜಿ ತಿಳಿಸಿದರು.

ವಿವಿಧ ಇಲಾಖೆಗಳಲ್ಲಿ ಹಿರಿಯ ಸಲಹೆಗಾರರನ್ನು ತೊಡಗಿಸಿಕೊಳ್ಳುವ ತನ್ನ ಸರ್ಕಾರದ ನಿರ್ಧಾರವನ್ನು ಉಲ್ಲೇಖಿಸಿದ ಬ್ಯಾನರ್ಜಿ, ಈ ಕ್ರಮದ ಹಿಂದಿನ ಕಾರಣವನ್ನು ರಾಜ್ಯಪಾಲ ಜಗದೀಪ್ ಧಂಖರ್ ಪ್ರಶ್ನಿಸುತ್ತಿದ್ದಾರೆ ಎಂದು ಪ್ರಧಾನಿಯವರಲ್ಲಿ ದೂರಿದರು.

“ನೀವು (ಮೋದಿ) ನಮಗೆ ಹೊರಗಿನಿಂದ ಜನರನ್ನು ನೇಮಿಸಲು ಸಲಹೆಗಳನ್ನು ನೀಡಿದ್ದೀರಿ. ನಾವು ಅದನ್ನು ಅನುಸರಿಸಿದ್ದೇವೆ. ಆದರೆ ಈ ನಿರ್ಧಾರ ಏಕೆ ತೆಗೆದುಕೊಂಡಿದ್ದೀರಿ ಎಂದು ರಾಜ್ಯಪಾಲರು ನನ್ನನ್ನು ಪ್ರಶ್ನಿಸಿದ್ದಾರೆ. ನಾವು ಪ್ರಧಾನಿಯವರ ಸಲಹೆಯನ್ನು ಅನುಸರಿಸಿದ್ದೇವೆ ಎಂಬ ಸುಳಿವು ಇಲ್ಲ. ರಾಜಕೀಯ ದೃಷ್ಟಿಕೋನ ಏನೇ ಇರಲಿ, ಆದರೆ ನಾವು ಕೇಂದ್ರದ ಮಾರ್ಗಸೂಚಿಗಳನ್ನು ಅನುಸರಿಸುತ್ತೇವೆ. ನಾವು ಅದನ್ನು 99ರಷ್ಟು ಪ್ರತಿಶತ ಅನುಸರಿಸಲು ಪ್ರಯತ್ನಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ವೈದ್ಯಕೀಯ ಸೀಟುಗಳ ಕೋಟಾವನ್ನು ಹೆಚ್ಚಿಸುವಂತೆ ಬ್ಯಾನರ್ಜಿಯವರು ಪ್ರಧಾನಿಯವರಲ್ಲಿ ಮನವಿ ಮಾಡಿದರು. “ವೈದ್ಯರ ಕೊರತೆಯಿದೆ. ಜನಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ಸೀಟುಗಳ ಕೋಟಾವನ್ನು ಹೆಚ್ಚಿಸಬೇಕು. 75 ವೈದ್ಯರು ಕೋವಿಡ್‌ನಿಂದ ಬಳಲುತ್ತಿರುವ ಒಂದು ಆಸ್ಪತ್ರೆಯಿದೆ. ರೋಗಿಗಳ ಚಿಕಿತ್ಸೆಯನ್ನು ಹೇಗೆ ಕೈಗೊಳ್ಳಲಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಕೋವಿಡ್ ನಿಯಂತ್ರಣಾ ಲಸಿಕೆಯನ್ನು ನೀಡುವಲ್ಲಿ ಪಶ್ಚಿಮ ಬಂಗಾಳವು ದೇಶದಲ್ಲಿ ನಂ. 1 ಸ್ಥಾನದಲ್ಲಿದೆ. ರಾಜ್ಯದಲ್ಲಿ ಯಾವುದೇ ರೀತಿಯಲ್ಲಿಯೂ ಲಸಿಕೆ ವ್ಯರ್ಥವಾಗುತ್ತಿಲ್ಲ ಎಂದು ಅವರು ತಿಳಿಸಿದ್ದಾಗಿ ನ್ಯಾಷನಲ್‌ ಹೆರಾಲ್ಡ್‌ ವರದಿ ಮಾಡಿದೆ.

ನಮ್ಮ ದೇಶಕ್ಕೆ ಕೆಟ್ಟ ಹೆಸರು ಬರದಂತೆ ನಾವು (ರಾಜ್ಯ ಸರ್ಕಾರ) ನಮ್ಮ ಕೆಲಸಗಳ ಮೂಲಕ ಖಚಿತಪಡಿಸಿಕೊಂಡಿದ್ದೇವೆ. ಸ್ವಾಸ್ಥ್ಯ ಸತಿ (ಆರೋಗ್ಯ ವಿಮಾ ಯೋಜನೆ) ಥರದ ಹಲವಾರು ಯೋಜನೆಗಳನ್ನು ಪ್ರಾರಂಭಿಸಿದ್ದೇವೆ. ಡಯಾಲಿಸಿಸ್ ಕೇಂದ್ರಗಳನ್ನು ಪ್ರಾರಂಭಿಸಿದ್ದೇವೆ. ಜನರು ಔಷಧಿಗಳ ಮೇಲೆ ಶೇಕಡಾ 40ರಷ್ಟು ರಿಯಾಯಿತಿಗಳನ್ನು ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿರಿ: ಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...