Homeಚಳವಳಿಲಿಂಗ ತಾರತಮ್ಯ ಹೋಗಲಾಡಿಸುವ ಕ್ರಮ: ಸರ್‌, ಮೇಡಂ ಸಂಬೋಧನೆ ಬಿಟ್ಟ ಕೇರಳದ ಶಾಲೆ

ಲಿಂಗ ತಾರತಮ್ಯ ಹೋಗಲಾಡಿಸುವ ಕ್ರಮ: ಸರ್‌, ಮೇಡಂ ಸಂಬೋಧನೆ ಬಿಟ್ಟ ಕೇರಳದ ಶಾಲೆ

- Advertisement -
- Advertisement -

ಇತ್ತೀಚೆಗೆ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಏಕರೂಪದ ಸಮವಸ್ತ್ರ ಜಾರಿಗೆ ತಂದು ಲಿಂಗ ಸಮಾನತೆ ಸಾರುವತ್ತ ಹೆಜ್ಜೆಯಿಟ್ಟಿದ್ದ ಕೇರಳದಲ್ಲಿ ಲಿಂಗತ್ವ ತಟಸ್ಥ ನೀತಿ ಅನುಸರಿಸಲು ಮತ್ತೊಂದು ಶಾಲೆ ಮುಂದೆ ಬಂದಿದೆ.

“ನಿಮ್ಮ ಶಿಕ್ಷಕರನ್ನು “ಶಿಕ್ಷಕ” ಎಂದು ಕರೆಯಿರಿ. “ಸರ್” ಅಥವಾ “ಮೇಡಂ” ಎಂದು ಅಲ್ಲ” ಎಂದು ಕೇರಳದ ಪಾಲಕ್ಕಾಡ್ ಜಿಲ್ಲೆಯ ಶಾಲೆಯೊಂದು ತನ್ನ ವಿದ್ಯಾರ್ಥಿಗಳಿಗೆ ಸೂಚಿಸಿದೆ. ಈ ಮೂಲಕ ಲಿಂಗತ್ವ ತಟಸ್ಥ ಧೋರಣೆ ಅನುಸರಿಸಲು ಮುಂದಡಿಯಿಟ್ಟಿದೆ.

ಪಾಲಕ್ಕಾಡ್ ಜಿಲ್ಲೆಯ ಓಲಸ್ಸೆರಿ ಗ್ರಾಮದ ಸರ್ಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು ಶಿಕ್ಷಕರನ್ನು ಉದ್ದೇಶಿಸಿ ಲಿಂಗ ತಟಸ್ಥತೆಯನ್ನು ತರತ್ತಿರುವ ರಾಜ್ಯದ ಮೊದಲ ಶಾಲೆಯಾಗಿದೆ. 300 ವಿದ್ಯಾರ್ಥಿಗಳಿರುವ ಶಾಲೆಯಲ್ಲಿ ಒಂಬತ್ತು ಮಹಿಳಾ ಶಿಕ್ಷಕರು ಮತ್ತು ಎಂಟು ಪುರುಷ ಶಿಕ್ಷಕರಿದ್ದಾರೆ.

ಇದನ್ನೂ ಓದಿ: RSS-BJP ರ್‍ಯಾಲಿ: ಕೇರಳ ಸಿಎಂ ಪಿಣರಾಯಿ ವಿರುದ್ಧ ಕೊಲೆ ಬೆದರಿಕೆ ಘೋಷಣೆ

“ನಮ್ಮ ಸಿಬ್ಬಂದಿಯಲ್ಲಿ ಒಬ್ಬರಾದ ಸಜೀವ್ ಕುಮಾರ್.ವಿ, ಪುರುಷ ಶಿಕ್ಷಕರನ್ನು ಸರ್ ಎಂದು ಸಂಬೋಧಿಸುವ ಅಭ್ಯಾಸವನ್ನು ಬಿಡುವ ಬಗ್ಗೆ ಸಲಹೆ ನೀಡಿದರು. ಇವರು ಪಾಲಕ್ಕಾಡ್ ಮೂಲದ ಸಾಮಾಜಿಕ ಕಾರ್ಯಕರ್ತರಾದ ಬೋಬನ್ ಮಟ್ಟುಮಂತ ಅವರು ಸರ್ಕಾರಿ ಅಧಿಕಾರಿಗಳನ್ನು ‘ಸರ್’ ಎಂದು ಸಂಬೋಧಿಸುವ ಅಭ್ಯಾಸವನ್ನು ತೊಡೆದುಹಾಕಲು ಪ್ರಾರಂಭಿಸಿದ ಅಭಿಯಾನದಿಂದ ಅವರು ಸ್ಫೂರ್ತಿ ಪಡೆದಿದ್ದಾರೆ” ಎಂದು ಶಾಲೆಯ ಮುಖ್ಯೋಪಾಧ್ಯಾಯರಾದ ವೇಣುಗೋಪಾಲನ್ ಹೆಚ್ ಹೇಳಿದ್ದಾರೆ.

ಅಲ್ಲದೆ, ಶಾಲೆಯಿಂದ ಅನತಿ ದೂರದಲ್ಲಿರುವ ಪಂಚಾಯಿತಿಯಲ್ಲಿಯೂ ಇದೇ ರೀತಿಯ ಬದಲಾವಣೆಗಳನ್ನು ತರಲಾಗುತ್ತಿದೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ. ಶಾಲೆಯಿಂದ 14 ಕಿ.ಮೀ ದೂರದಲ್ಲಿರುವ ಮತ್ತೂರು ಪಂಚಾಯತ್‌ನಲ್ಲಿ ಕಳೆದ ವರ್ಷ ಜುಲೈನಲ್ಲಿ “ಸರ್” ಮತ್ತು “ಮೇಡಂ” ಎಂದು ಕರೆಯುವ ಪದ್ಧತಿಯನ್ನು ತೆಗೆದುಹಾಕುವ ನಿರ್ಧಾರವನ್ನು ತೆಗೆದುಕೊಂಡಿದೆ. ಪಂಚಾಯಿತಿ ಸಿಬ್ಬಂದಿಯನ್ನು ಅವರ ಹುದ್ದೆಯ ಹೆಸರಿನಿಂದ ಕರೆಯುವಂತೆ ಮಂಡಳಿ ಸಾರ್ವಜನಿಕರಿಗೆ ಸೂಚಿಸಿದೆ.

‘”ಸರ್’ ಮತ್ತು ‘ಮೇಡಂ’ ಪದಗಳು ಲಿಂಗ ಸಮಾನತೆಗೆ ವಿರುದ್ಧವಾಗಿವೆ. ಶಿಕ್ಷಕರನ್ನು ಅವರ ಹೆಸರಿನಿಂದ ಕರೆಯಬೇಕು, ಅವರ ಲಿಂಗದ ಆಧಾರದಿಂದ ಅಲ್ಲ. ಶಿಕ್ಷಕರನ್ನು ಸಂಬೋಧಿಸುವ ಹೊಸ ವಿಧಾನವು ಲಿಂಗ ನ್ಯಾಯದ ಬಗ್ಗೆ ಅರಿವು ಮೂಡಿಸಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ. ‘ಸರ್’ ಎಂಬ ಸಂಬೋಧನೆ ವಸಾಹತುಶಾಹಿ ಕಾಲದ ಕುರುಹಾಗಿದ್ದು, ಅದನ್ನು ತೊಲಗಿಸಬೇಕು’’ ಎಂದು ಮುಖ್ಯೋಪಾಧ್ಯಯರು ತಿಳಿಸಿದ್ದಾರೆ.


ಇದನ್ನೂ ಓದಿ: ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...