Homeಮುಖಪುಟ‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

ನಿಮ್ಮ ಶೋಕಾಸ್‌ ನೋಟಿಸ್‌ ಸಂಪೂರ್ಣ ತದ್ವಿರುದ್ಧವಾಗಿದೆ ಎಂದು ಸುಪ್ರೀಂ ಒಕ್ಕೂಟ ಸರ್ಕಾರದ ಕಿವಿ ಹಿಂಡಿದೆ

- Advertisement -
- Advertisement -

ಪಂಜಾಬ್‌ನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯ ಭದ್ರತಾ ಲೋಪಗಳ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಈ ಮಧ್ಯೆ, ಘಟನೆಯ ಬಗ್ಗೆ ತನಿಖೆ ನಡೆಸಲು ರಚಿಸಿದ್ದ ಸಮಿತಿಗಳನ್ನು ತಡೆಹಿಡಿಯುವಂತೆ ಒಕ್ಕೂಟ ಮತ್ತು ಪಂಜಾಬ್ ಸರ್ಕಾರಗಳೆರಡಕ್ಕೂ ಕೇಳಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಪ್ರಕರಣದ ಬಗ್ಗೆ ಲಾಯರ್ಸ್ ವಾಯ್ಸ್ ಎಂಬ ಸಂಸ್ಥೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ಆರೋಪ: 100 ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಎಫ್‌ಐಆರ್

ಶುಕ್ರವಾರದಂದು ಸರ್ವೋಚ್ಚ ನ್ಯಾಯಾಲಯವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಪ್ರಧಾನಮಂತ್ರಿಯ ಪಂಜಾಬ್ ಭೇಟಿಯಲ್ಲಿ “ಬೃಹತ್ ಭದ್ರತಾ ಲೋಪ” ಉಂಟಾದಾಗ ಮಾಡಿದ ವ್ಯವಸ್ಥೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು “ಭದ್ರಪಡಿಸಿ ಮತ್ತು ಸಂರಕ್ಷಿಸಲು” ನಿರ್ದೇಶಿಸಿತ್ತು.

ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು ಪ್ರತ್ಯೇಕವಾಗಿ ರಚಿಸಿರುವ ತನಿಖಾ ಸಮಿತಿಗಳನ್ನು ತಡೆದಿಟ್ಟು, ಜನವರಿ 10 ರವರೆಗೆ ಈ ವಿಷಯವನ್ನು ನ್ಯಾಯಾಲಯವು ಮತ್ತೆ ಕೈಗೆತ್ತಿಕೊಳ್ಳುವವರೆಗೆ ತಮ್ಮ ವಿಚಾರಣೆಯನ್ನು ಮುಂದುವರಿಸಬಾರದು ಎಂದು ಅದು ಹೇಳಿದೆ. ಆದರೆ ನ್ಯಾಯಪೀಠವು ಇದನ್ನು ಆದೇಶದ ಭಾಗವಾಗಿ ನಿರ್ದೇಶಿಸದೆ, ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸುವಂತೆ ವಕೀಲರನ್ನು ಕೇಳಿಕೊಂಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ವಿವರವಾದ ಆದೇಶಗಳನ್ನು ನೀಡಲಿದೆ.

ಸಿಜೆಐ ಎನ್‌ವಿ ರಮಣ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಒಕ್ಕೂಟ ಸರ್ಕಾರವನ್ನು ಸುಪ್ರೀಂಕೊರ್ಟ್ ತರಾಟೆಗೂ ತೆಗೆದುಕೊಂಡಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

ಒಕ್ಕೂಟ ಸರ್ಕಾರದ ಪರವಾಗಿ ಹಾಜರಾದ ಸಾಲಿಟರ್‌ ಜನರಲ್‌ ತುಷಾರ್ ಮೆಹ್ತಾ, “ಪಂಜಾಬ್ ಪೊಲೀಸರಿಂದ ಯಾವುದೇ ಗುಪ್ತಚರ ಮಾಹಿತಿ ಇರಲಿಲ್ಲ. ಈ ಮಾಹಿತಿ ನೀಡುವುದು ಅವರ ಜವಾಬ್ದಾರಿಯಾಗಿದೆ. ಮಾರ್ಗದಲ್ಲಿ ಪ್ರತಿಭಟನಾಕಾರರ ಗುಂಪು ಗುಂಪು ಸೇರಿದೆ ಎಂದು ಬೆಂಗಾವಲು ಪಡೆಗೆ ಯಾವುದೇ ಸೂಚನೆ ನೀಡಿಲ್ಲ, ಸಂಪೂರ್ಣ ಗುಪ್ತಚರ ವೈಫಲ್ಯ ಕಂಡುಬಂದಿದೆ. ಪಂಜಾಬ್ ಪೊಲೀಸ್ ಡಿಜಿ ಅವರು ಪ್ರಧಾನಿ ಬೆಂಗಾವಲು ಪಡೆಗೆ ಸ್ಪಷ್ಟ ಸಂವಹನವನ್ನು ನೀಡಬೇಕಿತ್ತು.

ಇದು ಎಸ್‌ಪಿಜಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಇದಕ್ಕೆಲ್ಲಾ ಪೊಲೀಸ್ ಅಧಿಕಾರಿಗಳೇ ಹೊಣೆ. ಆದರೆ ರಾಜ್ಯ ಸರ್ಕಾರ ಅವರನ್ನು ರಕ್ಷಿಸುತ್ತಿದೆ ಎಂಬುದು ತುಂಬಾ ಗಂಭೀರ ವಿಚಾರವಾಗಿದೆ. ಕೇಂದ್ರ ಸಮಿತಿ ರಚಿಸಬೇಕಿತ್ತು” ಎಂದು ಹೇಳಿದ್ದಾರೆ.

ತುಷಾರ್ ಮೆಹ್ತಾ ಅವರಿಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಹಿಮಾ ಕೊಹ್ಲಿ, “ನೀವು ಈಗಾಗಲೇ ಶೋಕಾಸ್ ನೋಟಿಸ್‌ಗಳಲ್ಲಿ ಎಲ್ಲವನ್ನೂ ಊಹಿಸಿದರೆ ನ್ಯಾಯಾಲಯಕ್ಕೆ ಬರುವುದರಲ್ಲಿ ಏನು ಪ್ರಯೋಜನ?” ಎಂದು ಕೇಳಿದ್ದಾರೆ.

ಇದನ್ನೂ ಓದಿ:ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

“ನಿಮ್ಮ ಶೋಕಾಸ್‌ ನೋಟಿಸ್ ಸಂಪೂರ್ಣವಾಗಿ ಸ್ವಯಂ ವ್ಯತಿರಿಕ್ತವಾಗಿದೆ. ನೀವು ಎಸ್‌ಪಿಜಿ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ವಿಚಾರಣೆ ಮಾಡಲು ಸಮಿತಿಯನ್ನು ರಚಿಸುತ್ತೀರಿ. ಇದರ ನಂತರ ನೀವು ರಾಜ್ಯದ ಮುಖ್ಯ ಕಾರ್ಯದರ್ಶಿ(ಸಿಎಸ್‌) ಮತ್ತು ಪೊಲೀಸ್ ಮಹಾನಿರ್ದೇಶಕ(ಡಿಜಿ)ರನ್ನು ತಪ್ಪಿತಸ್ಥರೆಂದು ಪರಿಗಣಿಸುತ್ತೀರಿ. ಅವರನ್ನು ಅಪರಾಧಿ ಎಂದು ಪರಿಗಣಿಸಿದವರು ಯಾರು? ಅವರನ್ನು ಯಾರು ಪ್ರಶ್ನಿಸಿದ್ದಾರೆ?” ಎಂದು ಪೀಠದ ಮತ್ತೊಬ್ಬ ನ್ಯಾಯಮೂರ್ತಿ ಸೂರ್ಯ ಕಾಂತ್ ಕೇಳಿದ್ದಾರೆ.

“ಡಿಜಿ ಮತ್ತು ಸಿಎಸ್ ನಮ್ಮ ಮುಂದೆ ಬಂದಿದ್ದಾರೆ. ಲೋಪಕ್ಕೆ ಯಾರು ಹೊಣೆ ಎಂದು ನಾವು ತಿಳಿದುಕೊಳ್ಳುತ್ತೇವೆ. ರಾಜ್ಯ ಸರ್ಕಾರ ಮತ್ತು ಅರ್ಜಿದಾರರು ನ್ಯಾಯಯುತ ವಿಚಾರಣೆಯನ್ನು ಬಯಸುತ್ತಾರೆ. ನೀವು ಕೂಡಾ ನ್ಯಾಯಯುತ ವಿಚಾರಣೆಯನ್ನು ವಿರೋಧಿಸಲು ಸಾಧ್ಯವಿಲ್ಲ. ಹಾಗಾದರೆ ನಿಮ್ಮಿಂದ ಈ ಆಡಳಿತಾತ್ಮಕ ಮತ್ತು ಸತ್ಯಶೋಧನೆಯ ವಿಚಾರಣೆ ಏಕೆ?” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಕೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಸಿದ ತುಷಾರ್ ಮೆಹ್ತಾ, “ಶೋಕಾಸ್ ನೋಟಿಸ್‌ಗಳ ಅಡಿಪಾಯವು ಬ್ಲೂಬುಕ್ ಆಗಿದ್ದು, ಭದ್ರತೆಯ ಜವಾಬ್ದಾರಿ ಪೊಲೀಸ್ ಅಧಿಕಾರಿಗಳದ್ದಾಗಿದೆ ಎಂದು ಹೇಳುತ್ತದೆ. ರಸ್ತೆ ದಿಗ್ಬಂಧನದ ಬಗ್ಗೆ ಯಾವುದೇ ಪೂರ್ವ ಎಚ್ಚರಿಕೆ ಇರಲಿಲ್ಲ… ಡಿಜಿ ನಿಯಮಗಳನ್ನು ಅನುಸರಿಸಬೇಕಿತ್ತು. ನಿಯಮಗಳ ಬಗ್ಗೆ ಯಾವುದೇ ವಿವಾದವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ಇದಕ್ಕೆ ಮತ್ತೇ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸೂರ್ಯ ಕಾಂತ್, “ಭದ್ರತಾ ಉಲ್ಲಂಘನೆಯಾಗಿದೆ ಮತ್ತು ಅದು ಗಂಭೀರ ವಿಷಯವಾಗಿದೆ. ಆದರೆ ಯಾರು ಹೊಣೆಗಾರರಾಗಿದ್ದರು ಎಂದು ಉಳಿದ ಸತ್ಯಾಂಶಗಳ ಬಗ್ಗೆ ಪರಿಶೀಲಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ನೀವು ನಮ್ಮ ಆದೇಶಕ್ಕಿಂಲೂ ಮುಂಚೆ ನೋಟಿಸ್ ನೀಡಿದ್ದೀರಿ, ಇದರ ನಂತರ ನಾವು ನಮ್ಮ ಆದೇಶವನ್ನು ನೀಡಿದ್ದೇವೆ. ನೀವು ಅವರನ್ನು 24 ಗಂಟೆಗಳಲ್ಲಿ ಉತ್ತರಿಸಲು ಕೇಳುತ್ತಿರುವುದು ಸ್ವಲ್ಪ ಕಠಿಣವಾಗಿರಬಹುದು..” ಎಂದು ನ್ಯಾಯಮೂರ್ತಿ ಕೋಹ್ಲಿ ಅವರು ಹೇಳಿದ್ದಾರೆ.

“ನೀವು ರಾಜ್ಯದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಯಸಿದರೆ ಈ ನ್ಯಾಯಾಲಯಕ್ಕೆ ಮಾಡಲು ಏನು ಕೆಲಸವಿದೆ?”ಎಂದು ಮುಖ್ಯ ನ್ಯಾಮೂರ್ತಿ ಎನ್‌ವಿ ರಮಣ ಅವರು ಒಕ್ಕೂಟ ಸರ್ಕಾರವನ್ನು ಕೇಳಿದ್ದಾರೆ.

ಇದನ್ನೂ ಓದಿ:ಪಂಜಾಬ್‌ ಭಇದದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...