Homeಚಳವಳಿಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ನಟಿಗೆ ತೋವಿನೋ ಥಾಮಸ್, ಮಂಜು ವಾರಿಯರ್, ಪೃಥ್ವಿರಾಜ್ ಸುಕುಮಾರನ್, ಚಿನ್ಮಯಿ, ಗೀತು ಮೋಹನ್ ದಾಸ್, ಪಾರ್ವತಿ ತಿರುವೋತ್, ಸ್ವರ ಭಾಸ್ಕರ್‌, ಜೋಯಾ ಅಖ್ತರ್ ಸೇರಿ ಹಲವರು ಬೆಂಬಲ ವ್ಯಕ್ತಪಡಿದ್ದಾರೆ.

- Advertisement -
- Advertisement -

ತಮ್ಮ ಮೇಲೆ ಕಳೆದ ಐದು ವರ್ಷಗಳ ಹಿಂದೆ ನಡೆದ ಲೈಂಗಿಕ ದೌರ್ಜನ್ಯವನ್ನು ನೆನಪಿಸಿಕೊಂಡಿರುವ ಬಹುಭಾಷಾ ನಟಿ ಭಾವನಾ ಮೆನನ್, ತಾವು ತಪ್ಪು ಮಾಡದಿದ್ದರೂ ಘಟನೆಯ ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ ಎಂದು ಕರಾಳ ಘಟನೆಯ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

2017 ರಲ್ಲಿ ದೇಶದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿ ನಟಿ ಭಾವನಾ ಮೆನನ್ ಅವರ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಇನ್ನು ನಡೆಯುತ್ತಿದೆ. ಈ ಕೃತ್ಯದಲ್ಲಿ ಮಲಯಾಳಂ ನಟ ದಿಲೀಪ್‌‌‌‌‌‌‌‌‌ ಪ್ರಮುಖ ಆರೋಪಿಯಾಗಿದ್ದಾರೆ. ಘಟನೆಗೆ ಐದು ವರ್ಷವಾದ ಹಿನ್ನೆಲೆ ಈ ವರ್ಷಗಳಲ್ಲಿ ತಾವು ಅನುಭವಿಸಿದ ತಳಮಳ, ಅವಮಾನ, ನೋವನ್ನು ನಟಿ ತಮ್ಮ Instagram ಪೋಸ್ಟ್‌ನಲ್ಲಿ ಬರೆದಿದ್ದಾರೆ.

“ಇದು ಸುಲಭದ ಪ್ರಯಾಣವಲ್ಲ, ಸಂತ್ರಸ್ತೆಯಿಂದ ಹಿಡಿದು ಗಟ್ಟಿಯಾಗಿ ನಿಲ್ಲುವ ಪ್ರಯಾಣ ಅಷ್ಟು ಸುಲಭವವಲ್ಲ. ಈ ಐದು ವರ್ಷಗಳಿಂದ, ನನ್ನ ಮೇಲೆ ನಡೆದ ಹಲ್ಲೆಯಿಂದಾಗಿ ದೇಶದಲ್ಲಿ ನನ್ನ ಹೆಸರು ಮತ್ತು ನನ್ನ ಗುರುತನ್ನು ಹತ್ತಿಕ್ಕಲಾಗಿದೆ” ಎಂದು ಭಾವನಾ ಬರೆದಿದ್ದಾರೆ.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

’ನಾನು ತಪ್ಪು ಮಾಡದಿದ್ದರೂ ಕೂಡ ನನ್ನನ್ನು ಮೌನವಾಗಿಸುವ, ಅವಮಾನಿಸುವ, ಎಲ್ಲರಿಂದ ಪ್ರತ್ಯೇಕಿಸುವ ಹಲವು ಪ್ರಯತ್ನಗಳು ನಡೆದಿವೆ. ಆದರೆ, ನನ್ನ ಧ್ವನಿಯನ್ನು ಜೀವಂತವಾಗಿಡುವಲ್ಲಿ ಹಲವರು ನನ್ನ ಜೊತೆಗೆ ನಿಂತಿದ್ದಾರೆ. ಈಗ ನನ್ನ ಬಗ್ಗೆ ಪರವಾಗಿ ಮಾತನಾಡುವ ಅನೇಕ ಧ್ವನಿಗಳಿವೆ. ನ್ಯಾಯದ ಹೋರಾಟದಲ್ಲಿ ನಾನು ಒಂಟಿಯಲ್ಲ’ ಎಂದಿದ್ದಾರೆ.

’ನ್ಯಾಯವು ಗೆಲ್ಲಲು, ತಪ್ಪಿತಸ್ಥರಿಗೆ ಶಿಕ್ಷೆಯಾಗಲು, ಬೇರೆ ಯಾರು ಮತ್ತೆ ಇಂತಹ ಸ್ಥಿತಿಗೆ ಒಳಗಾಗದಂತೆ ನೋಡಿಕೊಳ್ಳಲು ನಾನು ನನ್ನ ಪ್ರಯಾಣವನ್ನು (ಹೋರಾಟವನ್ನು) ಮುಂದುವರೆಸುತ್ತೇನೆ. ಇಂತಹ ಸ್ಥಿತಿಯಲ್ಲಿ ನನ್ನ ಜೊತೆಗೆ ನಿಂತ ನಿಮಗೆ ನಿಮ್ಮ ಪ್ರೀತಿಗೆ ಹೃದಯಪೂರ್ವಕ ಧನ್ಯವಾದಗಳು” ಎಂದಿದ್ದಾರೆ.

ನಟಿ ಭಾವನಾ ಮೆನನ್ ಪೋಸ್ಟ್‌ ಸಾಮಾಜಿಕ ಮಾಧ್ಯಮದಲ್ಲಿ ಹಲವು ನಟ ನಟಿಯರು ಶೇರ್‌ ಮಾಡಿಕೊಂಡು ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

ಕಲಾವಿದರಾದ ತೋವಿನೋ ಥಾಮಸ್, ಮಂಜು ವಾರಿಯರ್, ಪೃಥ್ವಿರಾಜ್ ಸುಕುಮಾರನ್, ಚಿನ್ಮಯಿ, ಗೀತು ಮೋಹನ್ ದಾಸ್, ಪಾರ್ವತಿ ತಿರುವೋತ್, ಅನ್ನಾ ಬೆನ್ ಮುಂತಾದ ಅನೇಕ ಸೆಲೆಬ್ರಿಟಿಗಳು ಭಾವನಾ ಧೈರ್ಯವನ್ನು ತೋರಿಸಿದ್ದಕ್ಕಾಗಿ ಮತ್ತು ಈ ವಿಷಯದ ಬಗ್ಗೆ ಮಾತನಾಡಿದ್ದಕ್ಕಾಗಿ ಶ್ಲಾಘಿಸಿದರು. ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಭಾವನಾ ಅವರ ಪೋಸ್ಟ್‌ಗಳನ್ನು ಶೇರ್‌ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಟಿ ಪಾರ್ವತಿ ತಿರುವೋತ್ ಅವರನ್ನು ನಿರಂತರ ಹಿಂಬಾಲಿಸಿ ಕಿರುಕುಳ ನೀಡಿದ ವ್ಯಕ್ತಿ ಬಂಧನ

ಬಾಲಿವುಡ್ ಚಿತ್ರರಂಗ ಕೂಡ ಭಾವನಾಗೆ ಬೆಂಬಲ ನೀಡಿದೆ. ನಿರ್ಮಾಪಕಿ ಮತ್ತು ಲೇಖಕಿ ಜೋಯಾ ಅಖ್ತರ್ ಕೂಡ ಭಾವನಾ ಅವರ ಪೋಸ್ಟ್ ಅನ್ನು ತಮ್ಮ Instagram ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮೋರ್‌ ಪವರ್‌ ಟು ಯು ಎಂದು ಬರೆದಿದ್ದಾರೆ. ನಟಿಯರಾದ ರಿಚಾ ಚಡ್ಡಾ ಮತ್ತು ಸ್ವರಾ ಭಾಸ್ಕರ್ ಅವರು ಭಾವನಾ ಅವರ ಪೋಸ್ಟ್ ಅನ್ನು ರಿಟ್ವೀಟ್ ಮಾಡಿ ತಮ್ಮ ಬೆಂಬಲ ನೀಡಿದ್ದಾರೆ.

ಘಟನೆಯ ಹಿನ್ನೆಲೆ:

ಫೆಬ್ರವರಿ 17, 2017 ರಂದು ತ್ರಿಶೂರ್‌ನಿಂದ ಚಲನಚಿತ್ರವೊಂದರ ಶೂಟಿಂಗ್‌ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ನಟಿ ಭಾವನಾ ಅವರನ್ನು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಪಹರಿಸಲಾಗಿತ್ತು. ಒಂದು ಗ್ಯಾಂಗ್ ಆಕೆಯನ್ನು ಬಲವಂತವಾಗಿ ಕಾರನ್ನು ಹತ್ತಿಸಿ ಎರಡು ಗಂಟೆಗಳ ಕಾಲ ವಾಹನದೊಳಗೆ ಕಿರುಕುಳ ನೀಡಿತ್ತು. ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಪ್ರಮುಖ ಆರೋಪಿ ಎಂದು ಆರೋಪಿಸಲಾಗಿತ್ತು. ನಟಿ ನೀಡಿದ್ದ ದೂರಿನ ಮೇಲೆ ಎಫ್‌ಐಆರ್‌ ದಾಖಲಾಗಿತ್ತು.

Actress assault: As Dileep approaches SC, Kerala govt must clarify this  question - The Week
ನಟ ದಿಲೀಪ್

ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕಿರುವ ಆರೋಪದಲ್ಲಿ ನಟ ದಿಲೀಪ್ ಮತ್ತು ಇತರ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ತನಿಖಾಧಿಕಾರಿ ನೀಡಿದ ದೂರಿನ ಮೇರೆಗೆ ಅಪರಾಧ ವಿಭಾಗದ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೊಸ ಎಫ್‌ಐಆರ್‌ನಲ್ಲಿ ನಟ ದಿಲೀಪ್, ಸೋದರ ಮಾವ ಟಿಎನ್ ಸೂರಜ್, ದಿಲೀಪ್ ಅವರ ಸಹೋದರ ಅನೂಪ್, ಒಬ್ಬ ವಿಐಪಿ ಮತ್ತು ಇತರ ಇಬ್ಬರು ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಹೊಸ ತನಿಖಾ ತಂಡವನ್ನು ರಚಿಸಿದೆ.

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಟ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದಿಲೀಪ್ ಜೊತೆಗೆ ಅವರ ಕಿರಿಯ ಸಹೋದರ ಪಿ. ಶಿವಕುಮಾರ್ ಮತ್ತು ಸೋದರ ಮಾವ ಟಿಎನ್ ಸೂರಜ್ ಸಹ ಅದೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಬಹುಭಾಷಾ ನಟಿ ಭಾವನ ಕನ್ನಡದಲ್ಲಿ ಜಾಕಿ, ಟಗರು, ವಿಷ್ಣುವರ್ಧನ, ಭಜರಂಗಿ-2, ಯಾರೇ ಕೂಗಾಡಲಿ, ಟೋಪಿವಾಲಾ, ಬಚ್ಚನ್, ಮುಕುಂದ ಮುರಾರಿ, ಚೌಕ, 99 ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು, ಎಚ್ಚೆತ್ತ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...