Homeಮುಖಪುಟಸೈನಾ ನೆಹ್ವಾಲ್‌ ಅವರಲ್ಲಿ ನಟ ಸಿದ್ಧಾರ್ಥ ಕ್ಷಮೆಯಾಚನೆ

ಸೈನಾ ನೆಹ್ವಾಲ್‌ ಅವರಲ್ಲಿ ನಟ ಸಿದ್ಧಾರ್ಥ ಕ್ಷಮೆಯಾಚನೆ

- Advertisement -
- Advertisement -

ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರಲ್ಲಿ ನಟ ಸಿದ್ಧಾರ್ಥ್ ಅವರು ಕ್ಷಮೆಯಾಚಿಸಿದ್ದಾರೆ. ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗ ಪತ್ರ ಬರೆದಿರುವ ಸಿದ್ಧಾರ್ಥ ಅವರು, ಸೈನಾ ಅವರಲ್ಲಿ ಕ್ಷಮೆಯಾಚಿಸಿದ್ದು “ನೀವು ನಮ್ಮ ಚಾಂಪಿಯನ್‌” ಎಂದು ಕರೆದಿದ್ದಾರೆ.

ಪಂಜಾಬ್ ನಲ್ಲಿ ಪ್ರಧಾನಿ ಮೋದಿ ಭದ್ರತೆ ಲೋಪ ಕುರಿತಂತೆ ಟ್ವೀಟ್ ನಲ್ಲಿ ಖಂಡನೆ ವ್ಯಕ್ತಪಡಿಸಿದ್ದ ಸೈನಾ, “ಪ್ರಧಾನಿಯ ಭದ್ರತೆಗೆ ಧಕ್ಕೆಯುಂಟಾದರೆ, ಆ ದೇಶವು ತನ್ನನ್ನು ತಾನು ಸುರಕ್ಷಿತ ಎಂದು ಕರೆಯಲು ಸಾಧ್ಯವಿಲ್ಲ. ಪಂಜಾಬ್‌ನಲ್ಲಿ ನಡೆದ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದರು.

ಸೈನಾ ನೆಹ್ವಾಲ್ ಅವರ ಈ ಟ್ವೀಟ್‌ಗೆ ನಟ ಸಿದ್ಧಾರ್ಥ್ ಅಲ್ಲಗಳೆದು ಟ್ವೀಟ್ ಮಾಡಿದ್ದರು. “ಶೇಮ್ ಆನ್ ಯು ರಿಹಾನ್ನಾ” ಎಂದು ಬರೆದಿದ್ದರು (ರಿಹನ್ನಾ ಅಂತಾರಾಷ್ಟ್ರೀಯ ಪಾಪ್ ತಾರೆ, ರೈತ ಹೋರಾಟಕ್ಕೆ ಬೆಂಬಲ ನೀಡಿದವರು). ಇದಾದ ಬಳಿಕ ಈ ವಿಚಾರವಾಗಿ ವಿವಾದ ಉಂಟಾಗಿತ್ತು. ನಟ ಸಿದ್ಧಾರ್ಥ್ ಅವರ ಈ ಟ್ವೀಟ್‌ಗೆ ಜನರು ಆಕ್ಷೇಪ ವ್ಯಕ್ತಪಡಿಸಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು.

ಈಗ ಸಿದ್ಧಾರ್ಥ ಅವರು ಬಹಿರಂಗ ಪತ್ರ ಬರೆದಿದ್ದಾರೆ. “ಡಿಯರ್​ ಸೈನಾ… ಕೆಲವೇ ದಿನಗಳ ಹಿಂದೆ ನಿಮ್ಮ ಟ್ವೀಟ್​ಗೆ ಪ್ರತಿಯಾಗಿ ನಾನು ಕೆಟ್ಟ ಜೋಕ್​ ಮಾಡಿದ್ದಕ್ಕಾಗಿ ಕ್ಷಮೆ ಕೇಳುತ್ತೇನೆ. ನಿಮ್ಮ ಹಲವು ವಿಚಾರಗಳನ್ನು ನಾನು ವಿರೋಧಿಸಬಹುದು. ಆದರೆ ನನ್ನ ವಿರೋಧ ಮತ್ತು ಸಿಟ್ಟು ಕೂಡ ನಾನು ಬಳಸಿದ ಪದಗಳು ಹಾಗೂ ಧಾಟಿಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಒಂದು ಜೋಕ್​ ಅನ್ನು ವಿವರಿಸಬೇಕಾದ ಸಂದರ್ಭ ಬರುತ್ತದೆ ಎಂದಾದರೆ ಅದು ಒಳ್ಳೆಯ ಜೋಕ್​ ಅಲ್ಲ. ಅದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ” ಎಂದು ಸಿದ್ದಾರ್ಥ್​ ಟ್ವೀಟ್​ ಮಾಡಿದ್ದಾರೆ.

“ಆದಾಗ್ಯೂ, ನನ್ನ ಪದದ ಆಟ ಮತ್ತು ಹಾಸ್ಯವು ಯಾವುದೇ ದುರುದ್ದೇಶಪೂರಿತ ಉದ್ದೇಶವನ್ನು ಹೊಂದಿಲ್ಲ. ನಾನು ನಿಷ್ಠಾವಂತ ಸ್ತ್ರೀವಾದಿ ಮಿತ್ರನಾಗಿದ್ದೇನೆ. ನನ್ನ ಟ್ವೀಟ್‌ನಲ್ಲಿ ಯಾವುದೇ ಲಿಂಗವನ್ನು ಸೂಚಿಸಲಾಗಿಲ್ಲ. ಖಂಡಿತವಾಗಿಯೂ ನಿಮ್ಮ ಮೇಲೆ ದಾಳಿ ಮಾಡುವ ಉದ್ದೇಶವಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ… ನೀವು ನನ್ನ ಪತ್ರವನ್ನು ಸ್ವೀಕರಿಸುತ್ತೀರಿ ಎಂದು ನಾನು ಭಾವಿಸುತ್ತೇನೆ. ನೀವು ಯಾವಾಗಲೂ ನನ್ನ ಚಾಂಪಿಯನ್ ಆಗಿರುತ್ತೀರಿ…” ಎಂದು ಸಿದ್ಧಾರ್ಥ ಬರೆದಿದ್ದಾರೆ.


ಇದನ್ನೂ ಓದಿರಿ: ಓಶೋ ಕಂಡಂತೆ ವಿವೇಕಾನಂದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...