Homeಮುಖಪುಟಯುಪಿ ಬಿಜೆಪಿಗೆ ಮತ್ತೊಂದು ಆಘಾತ: ಮತ್ತೊಬ್ಬ ಒಬಿಸಿ ನಾಯಕ ಮುಖೇಶ್ ವರ್ಮಾ ರಾಜೀನಾಮೆ

ಯುಪಿ ಬಿಜೆಪಿಗೆ ಮತ್ತೊಂದು ಆಘಾತ: ಮತ್ತೊಬ್ಬ ಒಬಿಸಿ ನಾಯಕ ಮುಖೇಶ್ ವರ್ಮಾ ರಾಜೀನಾಮೆ

- Advertisement -
- Advertisement -

ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ರಾಜೀನಾಮೆ ಪರ್ವ ಮುಂದುವರೆಯುತ್ತಲೇ ಇದೆ. ಇಂದು ಪಶ್ಚಿಮ ಉತ್ತರ ಪ್ರದೇಶದ ಫಿರೋಜಾಬಾದ್‌ನ ಬಿಜೆಪಿ ಶಾಸಕ ಮುಖೇಶ್ ವರ್ಮಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಯುಪಿಯಲ್ಲಿ ಕಳೆದ ಮೂರು ದಿನಗಳಲ್ಲಿ ಪಕ್ಷಕ್ಕೆ ರಾಜೀನಾಮೆ ನಿಡಿದ 7 ನೇ ನಾಯಕ ಮುಖೇಶ್ ವರ್ಮಾ. ಹಿಂದುಳಿದ ವರ್ಗಗಳ ಪ್ರಮುಖ ಮುಖಂಡರಾಗಿರುವ ಮುಖೇಶ್ ವರ್ಮಾ ತಮ್ಮ ರಾಜೀನಾಮೆಯನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಳಿಕ ಮೊನ್ನೆಯಷ್ಟೆ ರಾಜೀನಾಮೆ ಸಲ್ಲಿಸಿದ್ದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರ ಮನೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಹಿಂದುಳಿದ ಜಾತಿಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ಪಕ್ಷವನ್ನು ದೂಷಿಸಿರುವ ಬೇರೆ ನಾಯಕರಂತೆಯೇ ಇವರ ರಾಜೀನಾಮೆ ಪತ್ರವು ಇದೆ. ಜೊತೆಗೆ ಸ್ವಾಮಿ ಪ್ರಸಾದ್ ಮೌರ್ಯ ಅವರನ್ನು “ದಮನಿತರ ಧ್ವನಿ” ಮತ್ತು “ನಮ್ಮ ನಾಯಕ” ಎಂದು ಕರೆಯುವ ಮೂಲಕ ಮತ್ತೊಂದು ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಸಚಿವ ಸ್ಥಾನ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾದ ಬಿಜೆಪಿಯ ಸ್ವಾಮಿ ಪ್ರಸಾದ್ ಮೌರ್ಯ

“ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರವು ದಲಿತರು, ಹಿಂದುಳಿದ ಜಾತಿಗಳು ಮತ್ತು ಅಲ್ಪಸಂಖ್ಯಾತರ ಬಗ್ಗೆ ಯಾವುದೇ ಗಮನವನ್ನು ನೀಡಲಿಲ್ಲ ಮತ್ತು ಜನಪ್ರತಿನಿಧಿಗಳಿಗೆ ಅಗೌರವ ತೋರಿದ್ದಾರೆ” ಎಂದು ಮುಖೇಶ್ ವರ್ಮಾ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

“ರಾಜ್ಯ ಸರ್ಕಾರವು ದಲಿತರು, ಹಿಂದುಳಿದ ಜಾತಿಗಳು, ರೈತರು, ನಿರುದ್ಯೋಗಿ ಯುವಕರು ಮತ್ತು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಮೇಲೆ ದಬ್ಬಾಳಿಕೆ ನಡೆಸಿದೆ. ಈ ನೀತಿಗಳಿಂದಾಗಿ ನಾನು ಪಕ್ಷವನ್ನು ತೊರೆಯುತ್ತಿದ್ದೇನೆ. ಸ್ವಾಮಿ ಪ್ರಸಾದ್ ಮೌರ್ಯ ಅವರು ಶೋಷಿತರ ಧ್ವನಿ ಮತ್ತು ನಮ್ಮ ನಾಯಕ. ನಾನು ಅವರೊಂದಿಗೆ ಇದ್ದೇನೆ” ಎಂದಿದ್ದಾರೆ.

“ಸ್ವಾಮಿ ಪ್ರಸಾದ್ ಮೌರ್ಯ ನಮ್ಮ ನಾಯಕರು, ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ನಾವು ಬೆಂಬಲಿಸುತ್ತೇವೆ. ಮುಂದಿನ ದಿನಗಳಲ್ಲಿ ಇನ್ನೂ ಅನೇಕ ನಾಯಕರು ನಮ್ಮೊಂದಿಗೆ ಸೇರಿಕೊಳ್ಳುತ್ತಾರೆ” ಎಂದು ಬಿಜೆಪಿಗೆ ಮತ್ತೊಂದು ಆಘಾತ ನೀಡಿದ್ದಾರೆ.


ಇದನ್ನೂ ಓದಿ: ಬಿಕ್ಕಟ್ಟಿನಲ್ಲಿ ಯುಪಿ ಬಿಜೆಪಿ: ಅಯೋಧ್ಯೆಯಿಂದ ಯೋಗಿ ಆದಿತ್ಯನಾಥ್‌ ಸ್ಪರ್ಧೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...