Homeಮುಖಪುಟಪಶ್ಚಿಮ ಬಂಗಾಳ: ಹಳಿತಪ್ಪಿದ ರೈಲು, ಐವರ ದುರ್ಮರಣ

ಪಶ್ಚಿಮ ಬಂಗಾಳ: ಹಳಿತಪ್ಪಿದ ರೈಲು, ಐವರ ದುರ್ಮರಣ

- Advertisement -
- Advertisement -

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಮೇನಗುರಿ ಪಟ್ಟಣದ ಬಳಿ ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ರೈಲಿನ 12 ಬೋಗಿಗಳು ಹಳಿತಪ್ಪಿವೆ.

ಅಪಘಾತದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಶುಕ್ರವಾರ ಬೆಳಿಗ್ಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಲಾಗಿದ್ದಾರೆ.

ಈಶಾನ್ಯ ಫ್ರಾಂಟಿಯರ್ ರೈಲ್ವೇಯ ಅಲಿಪುರ್ದುವಾರ್ ವಿಭಾಗದ ವ್ಯಾಪ್ತಿಯಲ್ಲಿ ಸಂಜೆ 5 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ಎನ್‌ಎಫ್‌ಆರ್ ವಕ್ತಾರರು ಗುವಾಹಟಿಯಲ್ಲಿ ತಿಳಿಸಿದ್ದಾರೆ.

ಸಮೀಪದ ಗ್ರಾಮಗಳ ನೂರಾರು ಜನರು ಸ್ಥಳದಲ್ಲಿ ಜಮಾಯಿಸಿ ಕುಸಿದ ಬೋಗಿಗಳಲ್ಲಿ ಸಿಲುಕಿದ್ದ ಪ್ರಯಾಣಿಕರಿಗೆ ಸಹಾಯ ಹಸ್ತ ಚಾಚಿದರು. ಕೆಲವು ಬೋಗಿಗಳು ರೈಲಿನ ಉಳಿದ ಭಾಗದಿಂದ ಬೇರ್ಪಟ್ಟಿದ್ದರೆ, ಕೆಲವು ಚಕ್ರಗಳು ಕಳಚಿ ಬಿದ್ದಿವೆ.

ಸ್ಥಳೀಯರು, ಇತರ ಪ್ರಯಾಣಿಕರು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಲ್ಪೈಗುರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ಮೂರು NDRF ತಂಡಗಳು ಅಪಘಾತ ಸ್ಥಳಕ್ಕೆ ತಲುಪಿವೆ. ಅಪಘಾತದ ಕುರಿತು ಉನ್ನತ ಮಟ್ಟದ ರೈಲ್ವೆ ಸುರಕ್ಷತಾ ತನಿಖೆಗೆ ಆದೇಶಿಸಲಾಗಿದೆ. ರೈಲ್ವೆಯ ಉನ್ನತ ಅಧಿಕಾರಿಗಳು ದೆಹಲಿಯಿಂದ ಅಪಘಾತದ ಸ್ಥಳಕ್ಕೆ ತೆರಳಿದ್ದಾರೆ.

“ಸಮಯ ಸುಮಾರು 5 ಗಂಟೆಯಾಗಿತ್ತು. ನಾನು ನನ್ನ ಹೆಂಡತಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದೆ. ಇದ್ದಕ್ಕಿದ್ದಂತೆ ನನಗೆ ದೊಡ್ಡ ಶಬ್ದ ಕೇಳಿಸಿತು. ಭಾರೀ ಜರ್ಕ್ ಉಂಟಾಯಿತು. ನಾನು ನನ್ನ ಬರ್ತ್‌ನಿಂದ ಬಿದ್ದೆ. ಮರಳಿ ಬಂದಾಗ ಪ್ರಜ್ಞೆ ಬಂದಾಗ ನನ್ನನ್ನು ಆಂಬ್ಯುಲೆನ್ಸ್ ಒಳಗೆ ಕರೆದೊಯ್ಯಲಾಗಿತ್ತು” ಎಂದು ಬದುಕುಳಿದ ಸಂಜಯ್ ಎಂಬವರು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

“ನನ್ನ ತಾಯಿ ಮತ್ತು ನಾನು ಚಹಾ ಸೇವಿಸುತ್ತಿದ್ದಾಗ, ಇದ್ದಕ್ಕಿದ್ದಂತೆ ಒಂದು ಶಬ್ದ ಬಂದಿತು. ನಂತರ ತೀವ್ರ ಆಘಾತಕ್ಕೊಳಗಾದೆವು. ಮೇಲಿನ ಬರ್ತ್‌ಗಳಲ್ಲಿ ಇರಿಸಲಾಗಿದ್ದ ಸಾಮಾನುಗಳು ಉರಳಲಾರಂಭಿಸಿದವು. ನಂತರ ಸ್ಥಳೀಯರು ನನ್ನನ್ನು ರಕ್ಷಿಸಿದರು, ಆದರೆ ನಾನು ಇನ್ನೂ ನನ್ನ ತಾಯಿಯನ್ನು ಪತ್ತೆ ಮಾಡಿಲ್ಲ. ಅವರಿಗೆ ಏನಾಯಿತು ಎಂದು ತಿಳಿದಿಲ್ಲ” ಎಂದು ಮತ್ತೊಬ್ಬ ಗಾಯಾಳು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ನಾವು ಅಪಘಾತದ ಸ್ಥಳದಿಂದ ಮೂರು ದೇಹಗಳನ್ನು ವಶಪಡಿಸಿಕೊಂಡಿದ್ದೇವೆ. ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ” ಎಂದು ಜಲಪೈಗುರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಗೋಡರಾ ಬಸು ಹೇಳಿದ್ದಾರೆ. ಅಪಘಾತದಲ್ಲಿ ಕನಿಷ್ಠ 45 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ತೀವ್ರವಾಗಿ ಗಾಯಗೊಂಡವರಿಗೆ ₹ 1 ಲಕ್ಷ ಮತ್ತು ಅಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ ₹ 25,000 ಪರಿಹಾರ ನೀಡಲಾಗುವುದು ಎಂದು ತಿಳಿಸಲಾಗಿದೆ.

ಸುದ್ದಿ ಅಪ್‌ಡೇಟ್‌‌: ಸಾವಿನ ಸಂಖ್ಯೆ ಏಳಕ್ಕೆ ಏರಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಅಪಘಾತಕ್ಕೆ ಸಂಬಂಧಿಸಿದ ಚಿತ್ರಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿರಿ: ಸಾರ್ವಜನಿಕ ಉದ್ದಿಮೆಗಳನ್ನು ಮುಚ್ಚಿ ವೊಡಾಫೋನ್‌‌ ಷೇರು ಖರೀದಿಸುವಲ್ಲಿ ಅರ್ಥವಿದೆಯೇ?: ಬಿಜೆಪಿಗೆ ಖರ್ಗೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...