Homeಕರ್ನಾಟಕಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಹೇಳಿದ್ದಾರೆ

- Advertisement -
- Advertisement -

ರಾಜ್ಯ ಸರ್ಕಾರವು ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಯ ಮೂಲಕ ಕನ್ನಡ ನುಡಿಯನ್ನು ಹಿಂದಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ), ರಾಜ್ಯ ಸರ್ಕಾರದ ಈ ಧೋರಣೆಯನ್ನು ವಿರೋಧಿಸಿ ಜನವರಿ 16ರ ಭಾನುವಾರದಂದು ಬೆಳಿಗ್ಗೆ 11 ಗಂಟೆಯಿಂದ ಇಡೀ ದಿನ ಟ್ವಿಟರ್ ಅಭಿಯಾನ ನಡೆಸುವುದಾಗಿ ಹೇಳಿದೆ. ಈ ಮೂಲಕ ಬಹುದೊಡ್ಡ ಹೋರಾಟವನ್ನು ಆರಂಭಿಸಲಿದ್ದೇವೆ ಎಂದು ಕರವೇ ತಿಳಿಸಿದೆ.

ಟ್ವಿಟರ್‌ ಅಭಿಯಾನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, “ರಾಜ್ಯದಲ್ಲಿ ಕನ್ನಡಿಗರ ತೆರಿಗೆ ಹಣದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ಅಗತ್ಯವಿರಲಿಲ್ಲ. ಕನ್ನಡಿಗರ ಮೇಲೆ ಪರನುಡಿಯನ್ನು ಹೇರುವ ಇಂಥ ಯತ್ನವನ್ನು ಕರ್ನಾಟಕ ರಕ್ಷಣಾ ವೇದಿಕೆ ಸಹಿಸುವುದಿಲ್ಲ. ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಶಿವಾಜಿ ಪ್ರತಿಮೆ ಅಪಮಾನ ಹೆಸರಿನಲ್ಲಿ ಕನ್ನಡಪರ ಕಾರ್ಯಕರ್ತ ಮೇಲೆ ಅತಿರೇಕದ ಕ್ರಮ: ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ

“ಮೊದಲ ಹಂತದಲ್ಲಿ ಸಂಸ್ಕೃತ ವಿವಿ ಸ್ಥಾಪನೆ ಹಿನ್ನೆಲೆಯ ಹುನ್ನಾರಗಳನ್ನು ಬಯಲಿಗೆಳೆದು ಜನಜಾಗೃತಿ ನಡೆಸಲಾಗುವುದು. ಮುಂದೆ ಹಂತಹಂತವಾಗಿ ಇಡೀ ರಾಜ್ಯದ ಎಲ್ಲೆಡೆ ಬೀದಿಹೋರಾಟಗಳನ್ನು ಸಂಘಟಿಸಲಾಗುವುದು. ಸರ್ಕಾರ ಸಂಸ್ಕೃತ ವಿವಿ ರದ್ದುಗೊಳಿಸದಿದ್ದರೆ ಅನಿವಾರ್ಯವಾಗಿ ತೀವ್ರ ಸ್ವರೂಪದ ಹೋರಾಟ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

“ಮಾಗಡಿ ಸಮೀಪ ನೂರು ಎಕರೆ ಜಾಗವನ್ನು ಸಂಸ್ಕೃತ ವಿವಿಗಾಗಿ ನೀಡಲಾಗಿದೆ. 359 ಕೋಟಿ ರುಪಾಯಿಗಳನ್ನು ಈಗಾಗಲೇ ನೀಡಲಾಗಿದೆ. ಇನ್ನೂ ಸಾವಿರಾರು ಕೋಟಿ ರುಪಾಯಿ ನಮ್ಮ ಹಣವನ್ನು ಕೊಡುವ ಸಾಧ್ಯತೆ ಇದೆ. ಸರ್ಕಾರ ಈ ಎಲ್ಲ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ; ಕರವೇ ಎಚ್ಚರಿಕೆ

“ಹಂಪಿಯಲ್ಲಿನ ಕನ್ನಡ ವಿವಿಯ ಸಿಬ್ಬಂದಿಗೆ ಹಣಕೊಡಲೂ ಸಹ ಇದೇ ಸರ್ಕಾರ ಹಣವಿಲ್ಲವೆಂಬ ಸಬೂಬು ನೀಡುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆ ಅಭಿಯಾನ, ಹೋರಾಟ ನಡೆಸಿ ಅನುದಾನ ಕೊಡಿಸಬೇಕಾಯಿತು. ಕನ್ನಡ ವಿವಿಗೆ ಇಲ್ಲದ ಹಣ ಸಂಸ್ಕೃತ ವಿವಿಗೆ ಎಲ್ಲಿಂದ ಬಂತು? ಸರ್ಕಾರ ಇದಕ್ಕೆ ಉತ್ತರ ನೀಡಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

“ಸಂಸ್ಕೃತ ಅಧ್ಯಾಪಕರು, ಸಂಸ್ಕೃತಕ್ಕೆ ಸಂಬಂಧಪಟ್ಟ ಸಂಸ್ಥೆಗಳು ನ್ಯಾಯಲಯಕ್ಕೆ ಹೋಗಿ ಪದವಿ ಹಂತದಲ್ಲಿ ಕನ್ನಡ ಕಲಿಕೆಗೆ ಅಡ್ಡಿಯಾಗಿವೆ. ಇವರೆಲ್ಲ ಯಾರು, ಈ ಸಂಚುಕೂಟದ ಹುನ್ನಾರಗಳೇನು, ಇವರ ಹಿಂದೆ ಯಾರಿದ್ದಾರೆ ಎಂಬುದು ನಮಗೆ ಸ್ಪಷ್ಟವಾಗಿ ತಿಳಿದಿದೆ.

ಕನ್ನಡದ ಶತ್ರುಗಳೆಲ್ಲ ನಮ್ಮ ಶತ್ರುಗಳು. ಕನ್ನಡವನ್ನು ಕತ್ತುಹಿಸುಕುವ ಯಾವುದೇ ಶಕ್ತಿಗಳನ್ನು ನಾವು ಸಹಿಸುವುದಿಲ್ಲ ಇಂಥವರಿಗೆ ಕಳೆದ ಇಪ್ಪತ್ತಮೂರು ವರ್ಷಗಳಲ್ಲಿ ಹಲವು ರೀತಿಯಲ್ಲಿ ಪಾಠ ಕಲಿಸಿದ್ದೇವೆ. ಕನ್ನಡ ನಾಡಿನಲ್ಲಿದ್ದುಕೊಂಡು ಕನ್ನಡಕ್ಕೆ ದ್ರೋಹ ಎಸಗುವವರು ಮೈಮೇಲೆ ಪ್ರಜ್ಞೆ ಇಟ್ಟುಕೊಂಡಿರಲಿ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ನಾರಾಯಣ ಗೌಡರ ಕ್ರಮ ಸ್ವಾಗತಾರ್ಹ ಮತ್ತು ಪ್ರಸ್ತುತ ದಿನಗಳಲ್ಲಿ ನಮ್ಮ ಕನ್ನಡ ನಾಡಿನ ಇತಿಹಾಸ ಸಂಸ್ಕೃತಿ ಪರಂಪರೆ ರಾಜಕೀಯ ಜ್ಞಾನ ವಿಜ್ಞಾನ ತಂತ್ರಜ್ಞಾನ ಕೃಷಿ ವಿಶ್ವವಿದ್ಯಾಲಯಗಳ ಮೇಲೆ, ರೈತರ ಬದುಕು ಕಥೆಗಳ ಮೇಲೆ, ಸರಕಾರಿ ನೌಕರರ ಮೇಲೆ, ಸರಕಾರಿ ಸಂಸ್ಥೆಗಳ ಮೇಲೆ ಎಲ್ಲಿಲ್ಲದ ಇಲ್ಲ ಸಲ್ಲದ ಕಾರಣಗಳನ್ನು ಹೇಳಿ ಕನ್ನಡ ನಾಡಿನ ಬಹುಪಾಲು ವಿವಿಧ ಸಮುದಾಯಗಳ ಸಂಸ್ಕೃತಿ ಮೇಲೆ ಬಹುದೊಡ್ಡ ಪೆಟ್ಟು ಬೀಳುತ್ತಿದೆ. ಇದನ್ನು ತಡೆಯಬೇಕು ಎಂದರೆ ಇದೆ ಸರಿಯಾದ ಮಾರ್ಗ.

  2. ನಾರಯಣಗೌಡರೇ ಇದು ಅಗತ್ಯವಿರದ ನಿಮ್ಮ‌ವಿರೋಧ ಇಡಿ ಜಗತ್ತೆ ಸಂಸ್ಕ್ರತ ಭಾಷೆಯ ಶ್ರೀಮಂತತೆ ಮೆಚ್ಚಿದೆ.ಅ ಭಾಷೆಯನ್ನು ಸುಮ್ಮಸುಮ್ನೆ ಬ್ರಿಟಿಷ್‌ ರ ,ಮುಸಲ್ಮಾನ ರ ತಾಳಕ್ಕೆ ಕುಣಿದು ಅಮುಲ್ಯ ಸಂಪತ್ತು ಕಳೆದುಕೊಂಡ್ಡಿದೇವೆ ಈ ವಿಶ್ಬವಿದ್ಯಾಲಯಕ್ಕೆ ನಮ್ಮ ರಾಜ್ಯದಲ್ಲಿ ಅಗುವದಕ್ಕೆ ಸಂತೋಷಪಡಿ,ಅರೆಬರೆ ತಿಳಿದು ವಿರೋಧಿಸಬೇಡಿ.ಇದು ಇತ್ತಿಚೇಗೆ ಅ ಭಾಷೆಯ ಅಪಾರತೆ ಅರಿವಿಗೆ ಬಂದ ಹುಟ್ಡು ಕನ್ನಾಡಾಭಿಮಾನಿಯ ಅಗ್ರಜ

  3. ಕಪಿಲ, ಪತಂಜಲ, ಗೌತಮ ಜಿನನುತ
    ಭಾರತ ಜನನಿಯ ತನುಜಾತೆ
    ಜಯ ಹೇ ಕರ್ನಾಟಕ ಮಾತೆ.

  4. ಗಲ್ಲಿ ಗಲ್ಲಿಗಳಲ್ಲಿ ನಾಯಿಕೊಡೆಗಳಂತೆ ತಲೆಯೆತ್ತುತ್ತಿರುವ ಇಂಗ್ಲಿಷ್ ಮೀಡಿಯಂ ಶಾಲೆಗಳ ವಿರುದ್ಧ ಹೋರಾಡೋಣ. ತಮಿಳು, ತೆಲುಗು, ಮರಾಠಿ, ಮಲೆಯಾಳಂ ಗಳೂ ಕನ್ನಡಕ್ಕೆ ದೊಡ್ಡ ಬೆದರಿಕೆಯಾಗಿದೆ.
    ಅವುಗಳ ವಿರುದ್ಧ ಹೋರಾಡೋಣ ನಾರಾಯಣ ಗೌಡರೇ…

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...