Homeಕರ್ನಾಟಕಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

- Advertisement -
- Advertisement -

ಹಿಜಾಬ್‌ ಧರಿಸಿ ಕಾಲೇಜಿಗೆ ಬರುತ್ತಿರುವ 6 ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಳೆದ 15 ದಿನಗಳಿಂದ ಉಡುಪಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಲಾಗಿದೆ. ಮಾತ್ರವಲ್ಲದೆ, ಡಿಸೆಂಬರ್‌ 31 ರಿಂದ ಹಾಜರಾತಿಯಲ್ಲಿ ಗೈರು ಎಂದು ನಮೂದಿಸಲಾಗುತ್ತಿದೆ.

ಈ ಕುರಿತು ಬಾಲಕಿಯರ ಪೋಷಕರು ಹಾಗೂ ಮುಸ್ಲಿಂ ಸಂಘಟನೆಗಳ ಮುಖಂಡರು, ಪ್ರಿನ್ಸಿಪಲ್‌ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಮಾತನಾಡಿದರೂ ವಿದ್ಯಾರ್ಥಿಗಳಿಗೆ ತರಗತಿಯೊಳಗೆ ಪ್ರವೇಶ ನೀಡಿಲ್ಲ. ಈ ಕುರಿತಂತೆ ಸಿಎಫ್‌ಐ ಹಾಗೂ ಪಿಎಫ್‌ಐ ಸಂಘಟನೆಗಳ ಮುಖ್ಯಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಲೇಜು ಸೂಚಿಸಿರುವ ಸಮವಸ್ತ್ರವನ್ನಷ್ಟೇ ಧರಿಸಿ ಬರುವಂತೆ ಮಾರ್ಗದರ್ಶನ ನೀಡಿದ್ದು, ಹಿಜಾಬ್‌ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ತರಗತಿಯೊಳಗೆ ಪ್ರವೇಶವಿರುವುದಿಲ್ಲವೆಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಕಾಲೇಜು ಆಡಳಿತ ತಿಳಿಸಿದೆ.

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ, ವಾರದ ಹಿಂದೆ ಬಲಪಂಥೀಯ ಕಾರ್ಯಕರ್ತರೊಂದಿಗೆ ವಿದ್ಯಾರ್ಥಿಗಳ ಗುಂಪೊಂದು ಕೇಸರಿ ಶಾಲು ಧರಿಸಿ ಮಂಗಳೂರಿನ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿತ್ತು. ಇದೇ ರೀತಿ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಬಲಗಡಿ ಗ್ರಾಮದ ಸರ್ಕಾರಿ ಕಾಲೇಜಿನಲ್ಲೂ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು, ಹಿಜಾಬ್ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಅಸ್ಸಾಂ: ಬುರ್ಖಾ ಧರಿಸಿಲ್ಲ ಎಂದು ಆಕ್ಷೇಪ: ಜೀನ್ಸ್ ಧರಿಸಿದ್ದ ಯುವತಿಯನ್ನು ಅಂಗಡಿಯಿಂದ ಹೊರದಬ್ಬಿದ ಮಾಲೀಕ

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸುವಂತೆ ನಾವು ಸಹ ಕೇಸರಿ ಶಾಲು ಧರಿಸಿ ತರಗತಿಗೆ ಬರುವುದಾಗಿ ವಿದ್ಯಾರ್ಥಿಗಳು ಸಮಜಾಯಿಷಿ ನೀಡಿದ್ದರು. ಆದರೆ, ನಾವು ಸಮವಸ್ತ್ರದ ಜೊತೆಗೆ ನೀಡಲಾಗುವ ದುಪ್ಪಟ್ಟವನ್ನು ಹಿಜಾಬ್ ರೀತಿಯಲ್ಲಿ ಧರಿಸಿಕೊಂಡು ಬರುತ್ತೇವೆ. ಬೇರೆ ವಸ್ತ್ರಗಳನ್ನು ಬಳಸುತ್ತಿಲ್ಲ. ದುಪ್ಪಟ್ಟವನ್ನು ಕೆಲವರು ಹೆಗಲ ಮೇಲೆ ಧರಿಸಿ ಬರುವಂತೆ, ನಾವು ಅದನ್ನು ತಲೆಮೇಲಿಂದ ಹಾಕಿಕೊಳ್ಳುತ್ತೇವೆ ಅಷ್ಟೇ ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದ್ದಾರೆ.

ವಿವಾದದ ಬಗ್ಗೆ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ಸಾಮಾಜಿಕ ಕಾರ್ಯಕರ್ತರೊಬ್ಬರು, “ವಿದ್ಯಾರ್ಥಿನಿಯರು ತಲೆಗೆ ಶಾಲು ಸುತ್ತಿಕೊಳ್ಳುವುದರ ಬಗ್ಗೆ ಕೇಳುತ್ತಿದ್ದಾರೆ. ಅದು ಅವರ ಧಾರ್ಮಿಕ ಆಚರಣೆ, ಅದರಲ್ಲಿ ತಪ್ಪೇನಿದೆ. ಸಂವಿಧಾನದಲ್ಲಿ ಧಾರ್ಮಿಕ ಆಚರಣೆಯನ್ನು ಮೂಲಭೂತ ಹಕ್ಕಾಗಿ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಈ ಹಿಂದೆ ಯಾವುದೇ ವಿದ್ಯಾರ್ಥಿನಿಯರು ತಲೆಗೆ ಸ್ಕಾರ್ಫ್ ಹಾಕಿ ಬರುತ್ತಿರಲಿಲ್ಲ ಎಂಬ ವಾದವಿದೆ. ಆದರೆ ಅವರು ಧರಿಸುತ್ತಿರಲಿಲ್ಲ ಎಂದರೆ, ಈಗಿರುವ ವಿದ್ಯಾರ್ಥಿನಿಯರು ತಮ್ಮ ಧಾರ್ಮಿಕ ಆಚರಣೆಯ ಹಕ್ಕುಗಳನ್ನು ಕೇಳಬಾರದೇ? ಹೀಗೆಯೆ ಬೇರೆ ವಿದ್ಯಾರ್ಥಿನಿಯರು ಅವರ ಧಾರ್ಮಿಕ ಆಚರಣೆಗಳಾದ ಕೈಗೆ ಬಳೆ ಧರಿಸುವುದು, ಹಣೆಗೆ ಕುಂಕುಮ ಹಚ್ಚುವುದು, ತಲೆಗೆ ಹೂವು ಮುಡಿದುಕೊಳ್ಳುವುದನ್ನು ನಿರಾಕರಿಸಲು ಆಗುತ್ತದೆಯೆ? ಅಥವಾ ಅವರು ಹೊಸದಾಗಿ ಈ ಆಚರಣೆಯನ್ನು ಶುರು ಮಾಡಿದರೆ ತಪ್ಪು ಎನ್ನಲು ಸಾಧ್ಯವೆ?” ಎಂದು ಪ್ರಶ್ನಿಸಿದ್ದಾರೆ.

ಇತ್ತ ಈ ಪರಿಸ್ಥಿತಿ ನಿರ್ವಹಿಸಲು ಚಿಕ್ಕಮಗಳೂರು, ಮಂಗಳೂರು ಕಾಲೇಜು ಪ್ರಾಂಶುಪಾಲರು ಹಿಜಾಬ್ ಹಾಗೂ ಕೇಸರಿ ಶಾಲು ಎರಡನ್ನೂ ಧರಿಸಿ ಕಾಲೇಜಿಗೆ ಬರುವುದನ್ನು ನಿಷೇಧಿಸಿದ್ದು, ಕಾಲೇಜು ಸೂಚಿಸಿರುವ ಸಮವಸ್ತ್ರ ಮಾತ್ರ ಧರಿಸಿ ಬರುವಂತೆ ಸೂಚಿಸಿದ್ದಾರೆ.


ಇದನ್ನೂ ಓದಿ: ಉಡುಪಿ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕದಂತೆ ನಿರ್ಬಂಧ; ವಿದ್ಯಾರ್ಥಿನಿಯರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...