Homeಕೊರೊನಾಕೊರೊನಾ ಚಿಕಿತ್ಸೆ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಸಚಿವಾಲಯ

ಕೊರೊನಾ ಚಿಕಿತ್ಸೆ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಸಚಿವಾಲಯ

- Advertisement -
- Advertisement -

ಕೊರೊನಾ ಸೋಂಕಿನಿಂದ ಬಳಲುತ್ತಿರುವ ರೋಗಿಗಳಿಗೆ ನೀಡುವ ಔಷಧ ಮತ್ತು ಚಿಕಿತ್ಸೆ ಬಗ್ಗೆ ಪರಿಷ್ಕೃತ ಕ್ಲಿನಿಕಲ್ ಮಾರ್ಗಸೂಚಿ ಬಿಡುಗಡೆ ಮಾಡಿರುವ ಆರೋಗ್ಯ ಸಚಿವಾಲಯ, ವೈದ್ಯರು ಚಿಕಿತ್ಸೆಗಾಗಿ ಸ್ಟಿರಾಯ್ಡ್‌ಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಹೇಳಿದೆ.

ಕೊರೊನಾ ಎರಡನೇ ಅಲೆಯ ಸಮಯದಲ್ಲಿ ಸ್ಟಿರಾಯ್ಡ್‌ಗಳ ಅತಿಯಾದ ಬಳಕೆಗೆ ಕೊರೊನಾ ಟಾಸ್ಕ್‌ ಫೋರ್ಸ್ ಮುಖ್ಯಸ್ಥರು ವಿಷಾದ ವ್ಯಕ್ತಪಡಿಸಿದ್ದರು. ಇದರ ಬೆನ್ನಲೆಯಲ್ಲೇ ಪರಿಷ್ಕೃತ ಮಾರ್ಗಸೂಚಿಗಳು ಬಂದಿವೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ AIIMS, ICMR- ಕೋವಿಡ್ ರಾಷ್ಟ್ರೀಯ ಟಾಸ್ಕ್‌ ಫೋರ್ಸ್ ಮತ್ತು ಜಾಯಿಂಟ್ ಮಾನಿಟರಿಂಗ್ ಗ್ರೂಪ್ (DGHS) ಈ ಪರಿಷ್ಕೃತ ಕ್ಲಿನಿಕಲ್ ಮಾರ್ಗಸೂಚಿಗಳನ್ನು ನೀಡಿವೆ.

ಸ್ಟಿರಾಯ್ಡ್‌ಗಳಂತಹ ಔಷಧಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಅಥವಾ ಅಗತ್ಯಕ್ಕಿಂತ ಹೆಚ್ಚು ಕಾಲ ಬಳಸಿದಾಗ ಆಕ್ರಮಣಕಾರಿ ಮ್ಯೂಕಾರ್ಮೈಕೋಸಿಸ್ ಅಥವಾ ‘ಕಪ್ಪು ಶಿಲೀಂಧ್ರ’ ದಂತಹ ಸೆಕೆಂಡರಿ ಸೋಂಕಿನ ಅಪಾಯ ಉಂಟಾಗಬಹುದು ಎಂದು ಪರಿಷ್ಕೃತ ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ 3 ಮಕ್ಕಳ ಸಾವು ಪ್ರಕರಣ: ಇಬ್ಬರು ಅಮಾನತು

ಎರಡು-ಮೂರು ವಾರಗಳಿಗಿಂತ ಹೆಚ್ಚು ಕಾಲ ಕೆಮ್ಮು ಮುಂದುವರಿದರೆ ಕಡ್ಡಾಯವಾಗಿ ಕ್ಷಯರೋಗ ಮತ್ತು ಇತರ ಪರೀಕ್ಷೆಗಳಿಗೆ ರೋಗಿಯನ್ನು ಒಳಪಡಿಸಬೇಕು ಎಂದು ಮಾರ್ಗಸೂಚಿಗಳು ಹೇಳುತ್ತವೆ.

ಪರಿಷ್ಕೃತ ಮಾರ್ಗದರ್ಶನದ ಪ್ರಕಾರ, ಉಸಿರಾಟದ ತೊಂದರೆ ಅಥವಾ ಹೈಪೋಕ್ಸಿಯಾ ಇಲ್ಲದ ರೋಗಲಕ್ಷಣಗಳನ್ನು ಸೌಮ್ಯ ಕಾಯಿಲೆ ಎಂದು ವರ್ಗೀಕರಿಸಲಾಗಿದೆ. ಇವರಿಗೆ ಮನೆಯಲ್ಲಿ ಪ್ರತ್ಯೇಕವಾಗಿರಿಸಲು ಮತ್ತು ಅಲ್ಲಿಯೇ ಆರೈಕೆ ಮಾಡಲು ಸಲಹೆ ಮಾಡಲಾಗಿದೆ. ಕೋವಿಡ್‌ನ ಸೌಮ್ಯ ಲಕ್ಷಣಗಳಿಂದ ಬಳಲುತ್ತಿರುವವರು ಉಸಿರಾಟದ ತೊಂದರೆ, ತೀವ್ರತರವಾದ ಜ್ವರ ಅಥವಾ ಐದು ದಿನಗಳಿಗಿಂತ ಹೆಚ್ಚು ಕಾಲ ತೀವ್ರವಾದ ಕೆಮ್ಮನ್ನು ಹೊಂದಿದ್ದರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು.

90 ರಿಂದ 93% ಏರಿಳಿತದ ಆಮ್ಲಜನಕದ ಸ್ಯಾಚುರೇಷನರ್‌ ಇದ್ದು, ಉಸಿರಾಟದ ತೊಂದರೆ ಇರುವವರನ್ನು ಮಧ್ಯಮ ಪ್ರಕರಣಗಳಾಗಿ ಪರಿಗಣಿಸಲಾಗುತ್ತದೆ. ಅಂತಹ ರೋಗಿಗಳಿಗೆ ಆಮ್ಲಜನಕ ಬೆಂಬಲವನ್ನು ನೀಡಬೇಕು.

ಇನ್ನು ಶೇಕಡಾ 90 ಕ್ಕಿಂತ ಕಡಿಮೆ ಆಮ್ಲಜನಕದ ಸ್ಯಾಚುರೇಷನರ್‌ ಇರುವವರನ್ನು ತೀವ್ರ ಕಾಯಿಲೆ ಎಂದು ಪರಿಗಣಿಸಿ,ಅವರನ್ನು ಐಸಿಯುಗೆ ಸೇರಿಸಬೇಕು ಎಂದು ಪರಿಷ್ಕೃತ ಮಾಗಸೂಚಿಗಳು ತಿಳಿಸಿವೆ.

ಕಳೆದ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೀತಿ ಆಯೋಗದ ಸದಸ್ಯ, (ಆರೋಗ್ಯ) ಮತ್ತು ಕೋವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥರಾದ ಡಾ ವಿ.ಕೆ ಪಾಲ್, ಸ್ಟೀರಾಯ್ಡ್‌ಗಳಂತಹ ಔಷಧಗಳ ಅತಿಯಾದ ಬಳಕೆ ಮತ್ತು ದುರುಪಯೋಗದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕದಿಂದ ಮಾರಾಟದಲ್ಲಿ ದಾಖಲೆ ಬರೆದ ಡೋಲೊ-650

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...