ಮುಂದಿನ ತಿಂಗಳು ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಪಂಜಾಬ್ ಆಪ್ ಮುಖ್ಯಸ್ಥ ಸಂಸದ ಭಗವಂತ್ ಮಾನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಪಂಜಾಬ್‌ನ ಜನರು ತಮ್ಮ ಆದ್ಯತೆಯ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಸೂಚಿಸಲು ಆಮ್ ಆದ್ಮಿ ಪಕ್ಷವು ಟೆಲಿವೋಟಿಂಗ್ ಡ್ರೈವ್ ನಡೆಸಿತ್ತು. ಇದರಲ್ಲಿ ಸುಮಾರು 22 ಲಕ್ಷ ಮಂದಿ ಭಾಗವಹಿಸಿದ್ದು, ಸಂಸದ ಭಗವಂತ್ ಮಾನ್ ಶೇಕಡಾ 93 ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದ್ದಾರೆ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಶೇಕಡಾ 3 ರಷ್ಟು ಮತಗಳು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೆಸರಿಸಿದ್ದಾರೆ. ಮತ್ತೆ ಕೆಲವರು ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಆಯ್ಕೆ ಮಾಡಿದ್ದಾರೆ ಈ ಮತಗಳನ್ನು ಅದರಿಂಧುರಗೊಳಿಸಲಾಯಿತು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕೇಜ್ರಿವಾಲ್ ಪಂಜಾಬ್‌ನಲ್ಲಿ ಸುಳ್ಳುಗಳ ಮಾರಾಟ ಮಾಡುತ್ತಿದ್ದಾರೆ: ನವಜೋತ್ ಸಿಧು
“ಎಎಪಿ ಪಂಜಾಬ್ ಚುನಾವಣೆಯಲ್ಲಿ ಗೆಲ್ಲುವುದು ಸ್ಪಷ್ಟವಾಗಿದೆ. ಒಂದು ರೀತಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾದ ವ್ಯಕ್ತಿ ಪಂಜಾಬ್‌ನ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ” ಎಂದು ಅರವಿಂದ್ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
2017 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ, ಆಮ್ ಆದ್ಮಿ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಚುನಾವಣೆಗೆ ಇಳಿದಿತ್ತು ಆದರೆ ಸರ್ಕಾರ ರಚಿಸಲು ವಿಫಲವಾಗಿತ್ತು. ಆದರೆ, 20 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಪ್ರಮುಖ ಪ್ರತಿಪಕ್ಷವಾಯಿತು.
ಇತ್ತ ಕಾಂಗ್ರೆಸ್, ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಿದೆ ಎಂಬ ವದಂತಿಗಳು ಹರಿದಾಡುತ್ತಿವೆ.
ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


