Homeಕರ್ನಾಟಕಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

- Advertisement -
- Advertisement -

ಕೇಸರಿ ಧರಿಸಿದ ಯೋಗಿ ಆದಿತ್ಯನಾಥ್ ಅವರು ವ್ಯಾಪಾರ ಶೃಂಗಸಭೆಗಳು, ಅಂತರಾಷ್ಟ್ರೀಯ ಹೂಡಿಕೆಗಳು ಮತ್ತು ಎಂಒಯುಗಳ ಮೂಲಕ ಉತ್ತರ ಪ್ರದೇಶವನ್ನು “ಉತ್ತಮ ಪ್ರದೇಶ” ಎಂದು ಬಿಂಬಿಸಲು ಯತ್ನಿಸುತ್ತಿದ್ದ ಸಮಯವಿತ್ತು. ಅವರು ಉತ್ತರ ಪ್ರದೇಶವನ್ನು ಅತ್ಯಂತ ಫಲವತ್ತಾದ ಮತ್ತು ಆದ್ಯತೆಯ ತಾಣವೆಂದು ಅವರು ಹೇಳುತ್ತಿದ್ದರು.

ಕಾನೂನು ಮತ್ತು ಸುವ್ಯವಸ್ಥೆಗೆ ವಿಚಾರಕ್ಕೆ ಬಂದಾಗ ಆದಿತ್ಯನಾಥ್ ಅವರು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಮಣೆ ಹಾಕುತ್ತಿದ್ದದ್ದು ಬಿಟ್ಟರೆ ಮತ್ತಾವುದೇ ಮಾರ್ಗವನ್ನು ಅನುಸರಿಸಿದ್ದು ಕಂಡುಬಂದಿಲ್ಲ. ಸದಾ “ಡಬಲ್ ಇಂಜಿನ್” ಸರ್ಕಾರದ ಬಗ್ಗೆ ಹೇಳಿಕೊಳ್ಳುತ್ತಾ ಅಧಿಕಾರಶಾಹಿಯನ್ನು ವಶದಲ್ಲಿಟ್ಟುಕೊಂಡು ರಾಜ್ಯಾಧಿಕಾರದ ಪಡಸಾಲೆಗೆ ಕಾಲಿಟ್ಟ ಗೋರಖನಾಥ ಮಠದ ಮುಖ್ಯಸ್ಥರು ನೀರಲ್ಲಿ ಬಾತುಕೋಳಿಯಂತೆ ಸಾಗಲು ಆರಂಭಿಸಿದರಷ್ಟೇ.

ಇಡೀ ರಾಜ್ಯದ ಪ್ರಚಾರ ಯಂತ್ರವನ್ನು ಒಂದು ಉದ್ದೇಶಕ್ಕೆ ಬಳಸಲಾಗುತ್ತಿದೆ: ಪ್ರಾಜೆಕ್ಟ್ ಬ್ರ್ಯಾಂಡ್ ಯೋಗಿ. ಪೋಸ್ಟರ್‌ಗಳು, ಜಾಹೀರಾತು ಫಲಕಗಳು ಮತ್ತು ಹೋರ್ಡಿಂಗ್‌ಗಳು ಕೇವಲ ಒಬ್ಬ ವ್ಯಕ್ತಿಯ ಚಿತ್ರದೊಂದಿಗೆ ಮಿನುಗುತ್ತಿವೆ. ಅವರ ಪ್ರಚಾರವು ಎಷ್ಟು ಅಸೂಯೆ ಹುಟ್ಟಿಸಿತ್ತು ಎಂದರೆ, ಇತರ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಅವರ ಶೈಲಿ, ನಡವಳಿಕೆ ಮತ್ತು ಪ್ರಚಾರದ ಸಾಹಸಗಳನ್ನು ಅನುಕರಿಸಲು ಬಯಸಿದ್ದರು.

ಆದಿತ್ಯನಾಥ್ ಅವರು ಸಂಘದ ಸಂತೋಷಕ್ಕಾಗಿ ಹೆಚ್ಚು ಸ್ಟಾರ್ ಇಮೇಜ್ ಬೆಳೆಸಿಕೊಂಡರು. ಯುಪಿಯ ಹೊರಗಿದ್ದರೂ ಅವರು ಬ್ರ್ಯಾಂಡ್ ಆದರು; ಜನಪ್ರಿಯತೆಯನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಕ್ಕದಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡರು. ಬಿಜೆಪಿ ನಾಯಕರು ಆದಿತ್ಯನಾಥ್ ಅವರನ್ನು 2024ರಲ್ಲಿ ಮೋದಿಯನ್ನು ಬದಲಿಸುವ ನಿರೀಕ್ಷಿತ ಪ್ರಧಾನಿ ಎಂದು ಶ್ಲಾಘಿಸಲು ಪ್ರಾರಂಭಿಸಿದರು.

ಆದಿತ್ಯನಾಥ್ ಅವರ ಆಡಂಬರವು ಅಲ್ಪಕಾಲಿಕವಾಗಿತ್ತು: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ (ತಿದ್ದುಪಡಿ) ಕಾಯಿದೆ-2019 (ಸಿಎಎ) ವಿರುದ್ಧ ನಡೆದ ಪ್ರತಿಭಟನೆಗಳು ಅವರ ಸರ್ಕಾರದ ಅಮಾನವೀಯತೆಯನ್ನು ಬಹಿರಂಗಪಡಿಸಿದವು. ಯುಪಿ ಸರ್ಕಾರವು ಮುಸ್ಲಿಮರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಪ್ರಯೋಗಿಸಿತು. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದುತ್ವದ ಕಾರ್ಯಸೂಚಿಯನ್ನು ಪೂರೈಸಲು ತಮ್ಮ ದ್ವೇಷದ ಯಂತ್ರವನ್ನು ಸಕ್ರಿಯಗೊಳಿಸಿದರು.

NRC ಮತ್ತು NRCಯ ಫ್ಯಾಂಟಮ್ ಅನ್ನು COVID-19 ಮತ್ತು ಲಾಕ್‌ಡೌನ್‌ಗಳಿಂದ ಮರೆಮಾಡಲಾಗಿದೆ. ಕೊರೊನಾ ಎರಡನೇ ಅಲೆಯ ಸಮಯದಲ್ಲಿ, ಹಾಸಿಗೆಗಳು ಮತ್ತು ಆಮ್ಲಜನಕದ ಕೊರತೆಯಿಂದ ರಾಜ್ಯದಲ್ಲಿ ಜನರು ಸಾಯುತ್ತಿರುವಾಗ, ಹಲವಾರು ಬಿಜೆಪಿ ಶಾಸಕರು ಆದಿತ್ಯನಾಥ್ ಅವರನ್ನು ಟೀಕಿಸಿದರು. ಅವರು ದಂತಗೋಪುರದಲ್ಲಿ ಕುಳಿತು ಸಾಮಾನ್ಯರ ನೋವನ್ನು ಆಲಿಸುತ್ತಿಲ್ಲ, ಸ್ಪಂದಿಸುತ್ತಿಲ್ಲ ಎಂದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್-19 ಸಂತ್ರಸ್ತರ ಶವಗಳನ್ನು ಗಂಗಾನದಿಯಲ್ಲಿ ತೇಲಿಬಿಡಲಾಯಿತು, ಮೃತ ದೇಹಗಳ ಗೌರವಯುವ ಶವಸಂಸ್ಕಾರವನ್ನು ನಿರಾಕರಿಸಲಾಯಿತು. ಪಂಚಾಯತ್ ಚುನಾವಣಾ ಕರ್ತವ್ಯದ ವೇಳೆ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ಸರ್ಕಾರಿ ಶಾಲಾ ಶಿಕ್ಷಕರ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರವೂ ದೊರೆಯಲಿಲ್ಲ ಎಂಬುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿಯಿತು. ಇದು ಅವರ ಇಮೇಜ್‌ ಮತ್ತಷ್ಟು ಕುಗ್ಗಲು ಕಾರಣವಾಯಿತು.

ನಂತರ ಯುಪಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯ ಎನ್‌ಕೌಂಟರ್, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಹಾಗೂ ಪತ್ರಕರ್ತರ ವಿರುದ್ಧದ ಯುಎಪಿಎ ಅಡಿಯಲ್ಲಿ ದಾಖಲಾದ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ಸಮಸ್ಯೆಯನ್ನು ಬಿಚ್ಚಿಟ್ಟವು.

ಹೆಚ್ಚುತ್ತಿರುವ ನಿರುದ್ಯೋಗ, ಅಪೌಷ್ಟಿಕತೆ, ಶಾಲೆ ತೊರೆಯುವಿಕೆ ಮತ್ತು ಅಪರಾಧ, ಗೋಧಿ ಮತ್ತು ಭತ್ತ ಸಂಗ್ರಹಣೆಯಲ್ಲಿ ಗುರಿಗಳನ್ನು ತಲುಪದ ಅಂಕಿಅಂಶಗಳು, ದೇವಸ್ಥಾನಗಳಿಗೆ ಸಾರ್ವಜನಿಕ ಹಣವನ್ನು ಖರ್ಚು ಮಾಡುವ ಆದ್ಯತೆ, ರಾಜಕೀಯ ಉದ್ದೇಶಗಳಿಗಾಗಿ ಮುಸ್ಲಿಮರನ್ನು ಗುರಿಯಾಗಿಸುವುದು, ಭ್ರಷ್ಟಾಚಾರ, ಅತಿರೇಕದ ಜಾತೀಯತೆ, ಅಕ್ರಮ ಗಣಿಗಾರಿಕೆ ಮತ್ತು ಈಡೇರದ ಭರವಸೆಗಳ ಪಟ್ಟಿಗಳು ರಾಜ್ಯದಲ್ಲಿ ಯೋಗಿ ಮತ್ತು ಬಿಜೆಪಿ ವಿರೋಧಿ ಅಲೆಯನ್ನು ಹೆಚ್ಚಿಸಿದೆ.

ದಲಿತರು ಮತ್ತು ಇತರ ಹಿಂದುಳಿದ ವರ್ಗ (ಒಬಿಸಿ)ಗಳ ನಿರ್ಲಕ್ಷ್ಯದಿಂದಾಗಿ ಸ್ವಾಮಿ ಪ್ರಸಾದ್ ಮೌರ್ಯ, ದಾರಾ ಸಿಂಗ್ ಚೌಹಾಣ್ ಮತ್ತು ಧರಮ್ ಸಿಂಗ್ ಸೈನಿ ಅವರಂತಹ ಮಂತ್ರಿಗಳು ಮತ್ತು ನಾಯಕರು ಬಿಜೆಪಿಯನ್ನು ತೊರೆದು ಉತ್ತರ ಪ್ರದೇಶದಲ್ಲಿ ಬಿಜೆಪಿಯ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಕ್ಕೆ (SP) ಸೇರಿದರು.

ಇದೆಲ್ಲದರ ಮಧ್ಯೆ, ಮುಂಬರುವ ವಿಧಾನಸಭಾ ಚುನಾವಣೆಯು “80% ವರ್ಸಸ್ 20% (ಮುಸ್ಲಿಮರ)” ನಡುವಿನ ಹೋರಾಟವಾಗಿದೆ ಎಂದು ಆದಿತ್ಯನಾಥ್ ಹೇಳಿಕೆ ನೀಡುವ ಮೂಲಕ ಕೋಮು ಭಾವನೆಗಳನ್ನು ಪ್ರಚೋದಿಸುತ್ತಿದ್ದಾರೆ

ಯುಪಿಯಲ್ಲಿ, ವಿಶೇಷವಾಗಿ ಎಸ್‌ಪಿ ಮತ್ತೆ ತನ್ನ ವರ್ಚಸ್ಸನ್ನು ವೃದ್ದಿಸಿಕೊಂಡು ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಯಾವುದೇ ಚಾನ್ಸ್‌ ತೆಗೆದುಕೊಳ್ಳಲು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಪಕ್ಷವು ಯೋಗಿ ಅವರನ್ನು ಅವರ ತವರು ಗೋರಖ್‌ಪುರದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದು, ಅವರು ಮಥುರಾ ಅಥವಾ ಅಯೋಧ್ಯೆಯಿಂದ ಸ್ಪರ್ಧಿಸುತ್ತಾರೆ ಎಂಬಊಹಾಪೋಹಕ್ಕೆ ತೆರೆ ಎಳೆದಿದೆ. ಆದಿತ್ಯನಾಥ್ ಅವರು ಯುಪಿಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ವಿಶ್ವಾಸವನ್ನು ಹೊಂದಿದ್ದರೂ, ಒಬ್ಬ ಮುಖ್ಯಮಂತ್ರಿಯ ಹುದ್ದೆಯನ್ನು ಉಳಿಸಿಕೊಳ್ಳುವ ಅವರ ಸಾಮರ್ಥ್ಯವು ಪ್ರಶ್ನಾರ್ಥವಾಗಿದೆ.


ಇದನ್ನೂ ಓದಿರಿ: ವಿಶ್ಲೇಷಣೆ: ಯುಪಿಯಲ್ಲಿ ಒಬಿಸಿ ನಾಯಕರು ಬಿಜೆಪಿ ತೊರೆಯುತ್ತಿರುವುದು ಏತಕ್ಕೆ? ಎಸ್‌ಪಿಗೆ ಗೆಲುವು ಸುಲಭವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....