ದೇಶಾದ್ಯಂತ ಚುನಾವಣೆಗೆ ಮತಯಂತ್ರಗಳ ಬದಲಿಗೆ ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಬಳಕೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಯ ವಿಚಾರಣೆಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಕೊಂಡಿದೆ.
ಇವಿಎಂಗಳ ಅಳವಡಿಕೆಗೆ ಕಾರಣವಾದ ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಯನ್ನು ಪ್ರಶ್ನಿಸಿ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ವಿ ರಮಣ ನೇತೃತ್ವದ ಪೀಠವು ವಕೀಲ ಎಂಎಲ್ ಶರ್ಮಾ ಅವರ ಅರ್ಜಿಗಳನ್ನು ಸ್ವೀಕರಿಸಿದೆ. “ಐದು ರಾಜ್ಯಗಳಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯ ಅಗತ್ಯವಿದೆ. ಮಣಿಪುರ ಮತ್ತು ಉತ್ತರಾಖಂಡ್‌ನಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಬೇಕು ಎಂದು ವಕೀಲರು ಒತ್ತಾಯಿಸಿದ್ದಾರೆ.
“ನಾವು ಅದನ್ನು ನೋಡುತ್ತೇವೆ … ನಾನು ಅದನ್ನು ಬೇರೆ ಪೀಠದ ಮುಂದೆ ಪಟ್ಟಿ ಮಾಡಬಹುದು” ಎಂದು ಸಿಜೆಐ ಉಲ್ಲೇಖಿಸಿದ್ದಾರೆ.
“ಇವಿಎಂಗಳ ಬಳಕೆಯನ್ನು ಅನುಮತಿಸುವ ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 61ಎ ಅನ್ನು ಸಂಸತ್ತು ಅಂಗೀಕರಿಸಿಲ್ಲ ಮತ್ತು ಆದ್ದರಿಂದ ಹೇರಿಕೆ ಮಾಡಲು ಸಾಧ್ಯವಿಲ್ಲ” ಎಂದು ವಕೀಲ ಶರ್ಮಾ ಅವರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.
“ದಾಖಲೆಗಳಲ್ಲಿರುವ ಸಾಕ್ಷ್ಯಾಧಾರಗಳೊಂದಿಗೆ ಅರ್ಜಿಯನ್ನು ನಾನು ಸಲ್ಲಿಸಿದ್ದೇನೆ. ಪ್ರಕರಣದ ಕುರಿತು ನ್ಯಾಯಾಂಗ ಟಿಪ್ಪಣಿಯನ್ನು ತೆಗೆದುಕೊಳ್ಳಬಹುದು. ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲಿ” ಎಂದು ವಕೀಲರು ಆಗ್ರಹಿಸಿದ್ದಾರೆ.
ಕೇಂದ್ರ ಕಾನೂನು ಸಚಿವಾಲಯವನ್ನು ಪ್ರತಿವಾದಿಯಾಗಿ ಮಾಡಿ ಸಲ್ಲಿಸಲಾದ ಮನವಿಯಲ್ಲಿ, ಇವಿಎಂಗೆ ಯಾವುದೇ ನಿಬಂಧನೆ ಇಲ್ಲದ ಕಾರಣ ಅದನ್ನು ಅನೂರ್ಜಿತ, ಕಾನೂನುಬಾಹಿರ ಮತ್ತು ಅಸಂವಿಧಾನಿಕ” ಎಂದು ಘೋಷಿಸಲು ಕೋರಲಾಲಾಗಿದೆ
ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯು ಫೆಬ್ರವರಿ 10ರಿಂದ ಮಾರ್ಚ್ 10 ರ ನಡುವೆ ನಡೆಯಲಿವೆ.
ಇದನ್ನೂ ಓದಿರಿ: ವಿಶ್ಲೇಷಣೆ: ಆದಿತ್ಯನಾಥ್ ಅಯೋಧ್ಯೆಯಲ್ಲಿ ಸ್ಪರ್ಧಿಸುವ ಕನಸು ಭಗ್ನವಾಗಿದ್ದೇಕೆ?



Good decision