Homeಮುಖಪುಟಯೋಗಿ ವಿರುದ್ಧ ಗೋರಕ್‌ಪುರ ಕ್ಷೇತ್ರದಿಂದ ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಸ್ಪರ್ಧೆ

ಯೋಗಿ ವಿರುದ್ಧ ಗೋರಕ್‌ಪುರ ಕ್ಷೇತ್ರದಿಂದ ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಸ್ಪರ್ಧೆ

- Advertisement -
- Advertisement -

ಉತ್ತರ ಪ್ರದೇಶದ ಗೋರಖ್‌ಪುರದಿಂದ ಕಣಕ್ಕಿಳಿದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಭೀಮ್ ಆರ್ಮಿಯ ಚಂದ್ರಶೇಖರ್ ಆಜಾದ್ ರಾವಣ್‌ ಕಣಕ್ಕಿಳಿಯಲಿದ್ದಾರೆ.

ಚಂದ್ರಶೇಖರ್‌ ಆಜಾದ್‌ ಸ್ಪರ್ಧೆಯಿಂದಾಗಿ ಗೋರಕ್‌ಪುರ ವಿಧಾನಸಭಾ ಕ್ಷೇತ್ರ ಉತ್ತರ ಪ್ರದೇಶದ ಚುನಾವಣೆಯಲ್ಲಿ ಗಮನ ಸೆಳೆಯುವ ಎಲ್ಲ ಸಾಧ್ಯತೆಗಳು ದಟ್ಟವಾಗಿವೆ. ದಲಿತ ನಾಯಕ ಚಂದ್ರಶೇಖರ್‌ ಅವರ ‘ಆಜಾದ್‌ ಸಮಾಜ್‌ ಪಾರ್ಟಿ’ ಈ ಕುರಿತು ಟ್ವೀಟ್‌ ಮಾಡಿದೆ.

ಉತ್ತರ ಪ್ರದೇಶದ ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರು ಸ್ಪರ್ಧಿಸುತ್ತಾರೆಂಬ ಸುದ್ದಿ ಹರಡಿತ್ತು. ಆದರೆ ಗೋರಖ್‌ಪುರದಿಂದ ಸ್ಪರ್ಧಿಸುವುದು ಅಂತಿಮವಾಯಿತು.

ಆದಿತ್ಯನಾಥ್ ಅವರು ಐದು ಬಾರಿ ಸಂಸದರಾಗಿ ಆಯ್ಕೆಯಾದ ಗೋರಖ್‌ಪುರದ ತವರು ನೆಲಕ್ಕೆ ಕಳುಹಿಸುವ ಮೂಲಕ ಕೇಂದ್ರದ ನಾಯಕರು ಯೋಗಿ ಆದಿತ್ಯನಾಥ್‌ ಓಟಕ್ಕೆ ಬ್ರೇಕ್‌ ಹಾಕಿದ್ದರು. ಒಂದು ವೇಳೆ ಯೋಗಿಯವರು ಆಯೋಧ್ಯೆಯಿಂದ ಸ್ಪರ್ಧಿಸಿದ್ದರೆ ಹಿಂದುತ್ವದ ಪ್ರಬಲ ನಾಯಕರಾಗಲು ಹೆಚ್ಚಿನ ಅನುಕೂಲವಾಗುತ್ತಿತ್ತು ಎಂದು ವಿಶ್ಲೇಷಣೆಗಳು ಬಂದಿವೆ.

ಆದಿತ್ಯನಾಥ್ ಅವರು ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ದಲಿತ ನಾಯಕರಾಗಿ ಬೆಳೆದಿರುವ ಭೀಮ್‌ ಆರ್ಮಿಯ ಆಜಾದ್‌ ಚಂದ್ರಶೇಖರ್‌ ಸ್ಪರ್ಧೆ ಗೋರಕ್‌ಪುರ ವಿಧಾನಸಭಾ ಕ್ಷೇತ್ರದತ್ತ ಎಲ್ಲರ ದೃಷ್ಟಿ ನಡೆಯುವುದಕ್ಕೆ ಕಾರಣವಾಗುವುದು ಸುಳ್ಳಲ್ಲ. ಚಂದ್ರಶೇಖರ್ ಆಜಾದ್ ಅವರೂ ಮೊದಲ ಭಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ ನಂತರ ಹಿಂದೆ ಸರಿದಿದ್ದರು. ಆ ಸಮಯದಲ್ಲಿ “ತನಗೆ ಯಾವುದೇ ಪಕ್ಷವಿಲ್ಲದ ಕಾರಣ ಮಾಯಾವತಿ ಅವರ ಪಕ್ಷ ಮತ್ತು ಕಾಂಗ್ರೆಸ್‌ಗೆ ಬೆಂಬಲ ನೀಡುವುದು ಉತ್ತಮ” ಎಂದು ಅವರು ಹೇಳಿಕೆ ನೀಡಿದ್ದರು.

ಉತ್ತರ ಪ್ರದೇಶ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಹೇಳಿದ್ದಾರೆ. ಆದರೆ, ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಬಗ್ಗೆ ಚಂದ್ರಶೇಖರ್ ಆಜಾದ್ ಸೂಚನೆ ನೀಡಿದ್ದರು.

“ಯುಪಿ ವಿಧಾನಸಭೆಯಲ್ಲಿ ಸ್ಥಾನ ಗೆಲ್ಲುವುದು ನನಗೆ ಮುಖ್ಯವಲ್ಲ. ಯೋಗಿ ಆದಿತ್ಯನಾಥ್ ಅವರು ವಿಧಾನಸಭೆಗೆ ಬರಬಾರದು ಎಂಬುದು ನನಗೆ ಮುಖ್ಯವಾಗಿದೆ. ಹಾಗಾಗಿ ಅವರು ಎಲ್ಲಿ ಸ್ಪರ್ಧಿಸಿದರೂ ನಾನು ಸ್ಪರ್ಧಿಸುತ್ತೇನೆ” ಎಂದು ಅವರು ಕಳೆದ ವರ್ಷ ಹೇಳಿದ್ದರು.

ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಚಂದ್ರಶೇಖರ್ ಆಜಾದ್, “ನಾವು ಯುಪಿಯಲ್ಲಿ ಇತರ ರಾಜಕೀಯ ಪಕ್ಷಗಳಿಗೆ ಪರ್ಯಾಯವಾಗುತ್ತೇವೆ. ನಾನು ಶಾಸಕ ಮತ್ತು ಮಂತ್ರಿಯಾಗುವ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ” ಎಂದು ಹೇಳಿದ್ದರು.

ಚಂದ್ರಶೇಖರ್‌ ಅವರ ಪಕ್ಷಕ್ಕೆ ಗೋರಕ್‌ಪುರ ಅಥವಾ ಪೂರ್ವ ಉತ್ತರ ಪ್ರದೇಶದಲ್ಲಿ ಯಾವುದೇ ನೆಲೆ ಇಲ್ಲ. ಗೋರಖ್‌ಪುರ್ ಸದರ್ ಅಸೆಂಬ್ಲಿ ಸ್ಥಾನವು 1989ರಿಂದ ನಿರಂತರವಾಗಿ ಬಿಜೆಪಿ ಹಿಡಿತದಲ್ಲಿದೆ. ಒಮ್ಮೆ ಅಖಿಲ ಭಾರತೀಯ ಹಿಂದೂ ಮಹಾಸಭಾ ಮಾತ್ರ ಗೆದ್ದಿತ್ತು. 2017ರಲ್ಲಿ, ಬಿಜೆಪಿಯ ರಾಧಾ ಮೋಹನ್ ದಾಸ್ ಅಗರ್ವಾಲ್ 60,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದರು.

ಸಮಾಜವಾದಿ ಪಕ್ಷವು ನಮಗೆ 100 ಸೀಟು ನೀಡಿದರೂ ನಾನು ಅವರೊಂದಿಗೆ ಹೋಗುವುದಿಲ್ಲ. ಚುನಾವಣೆಯ ನಂತರ ಬಿಜೆಪಿಯನ್ನು ತಡೆಯಲು ನಾವು ಇತರ ಪಕ್ಷಗಳಿಗೆ ಸಹಾಯ ಮಾಡುತ್ತೇವೆ ಎಂದಿದ್ದರು. “ನಾನು ಮಾಯಾವತಿ ಜತೆ ಕೂಡಾ ಮೈತ್ರಿಗೆ ಯತ್ನಿಸಿದ್ದೆ, ಆದರೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ” ಎಂದು ಆಜಾದ್ ತಿಳಿಸಿದ್ದರು.

“ನಾನು ವೈಯಕ್ತಿಕ ಸಂತೋಷದ ಬಗ್ಗೆ ಎಂದಿಗೂ ತಲೆಕೆಡಿಸಿಕೊಂಡಿಲ್ಲ. ಕಳೆದ ಐದು ವರ್ಷಗಳಲ್ಲಿ ನಾನು ಬಹಳಷ್ಟು ಕಳೆದುಕೊಂಡಿದ್ದೇನೆ. ಹತ್ರಾಸ್, ಪ್ರಯಾಗ್ರಾಜ್ ಮತ್ತು ಉನ್ನಾವೋದಂತಹ ಪ್ರತಿಭಟನೆಯ ಘಟನೆಗಳಿಗಾಗಿ ನಾನು ಜೈಲಿಗೆ ಹೋಗಿದ್ದೆ” ಎಂದು ಹೇಳಿಕೆ ನೀಡಿದ್ದರು.

‘‘ಪ್ರತಿಪಕ್ಷಗಳ ವಿಭಜನೆಯಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ನಷ್ಟ” ಎಂದು ಹೇಳಿರುವ ಚಂದ್ರಶೇಖರ್‌ ಆಜಾದ್, ಭೀಮ್ ಆರ್ಮಿಯ ಕಾರ್ಯಕರ್ತರು ನಮ್ಮ ಶಕ್ತಿ ಎಂದು ತಿಳಿಸಿದ್ದರು.

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವಾದ ಆಜಾದ್ ಸಮಾಜ ಪಕ್ಷ ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ)ದ ನಡುವೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಜನವರಿ 15 ರಂದು ತಳ್ಳಿಹಾಕಿದ್ದರು.


ಇದನ್ನೂ ಓದಿರಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...