Homeಮುಖಪುಟಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ:...

ಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ: ನರೇಶ್ ಟಿಕಾಯತ್

- Advertisement -
- Advertisement -

’ಹಿಂದಿನ ಚುನಾವಣೆಗಳಲ್ಲಿ ಭಾರತೀಯ ಕಿಸಾನ್ ಯೂನಿಯನ್ ಬಿಜೆಪಿಯನ್ನು ಬೆಂಬಲಿಸಿತ್ತು. ಆದರೆ, ಬಿಜೆಪಿ ಪಕ್ಷವು ತನ್ನ ರಾಜಕೀಯಕ್ಕಾಗಿ ರೈತರನ್ನು ಶೋಷಣೆ ಮಾಡಿದೆ. ಯೋಗಿ ಸರ್ಕಾರದ ಧೋರಣೆಯ ಬಗ್ಗೆ ರೈತರು ಎಚ್ಚೆತ್ತುಕೊಂಡಿದ್ದಾರೆ’ ಎಂದು ಬಿಕೆಯು ಮುಖ್ಯಸ್ಥ ನರೇಶ್ ಟಿಕಾಯತ್ ಹೇಳಿದ್ದಾರೆ.

“ಒಂದು ವರ್ಷ ನಡೆದ ರೈತರ ಪ್ರತಿಭಟನೆಯು ಮುಂಬರುವ ಯುಪಿ ಚುನಾವಣೆಯಲ್ಲಿ ಬಿಜೆಪಿಗೆ ಖಂಡಿತವಾಗಿಯೂ ಪಾಠ ಕಲಿಸಲಿದೆ. ಬಿಜೆಪಿ ನಷ್ಟವನ್ನು ಅನುಭವಿಸಲಿದೆ” ಎಂದು ರೈತ ನಾಯಕ ನರೇಶ್ ಟಿಕಾಯತ್ ಹೇಳಿದ್ದಾರೆ.

ದಿ ಕ್ವಿಂಟ್‌ ವೆಬ್‌ಸೈಟ್‌ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ’ಈ ಹಿಂದೆ ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ನಮ್ಮ ಸಂಘಟನೆಯು ವಿಷಾಧಿಸುತ್ತದೆ. 2014 ರ ಲೋಕಸಭಾ ಚುನಾವಣೆ, ಬಿಜೆಪಿ ರೈತರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುತ್ತದೆ ಎಂಬ ಕಾರಣಕ್ಕೆ 2017 ರ ಯುಪಿ ವಿಧಾನಸಭಾ ಚುನಾವಣೆ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ ಬಿಜೆಪಿಯನ್ನು ಬೆಂಬಲಿಸಿತ್ತು. ಆದರೆ, ಬಿಜೆಪಿ ರೈತರ ಬೆಂಬಲವನ್ನು ತಮ್ಮ ಸ್ವಂತ ರಾಜಕೀಯಕ್ಕಾಗಿ ಬಳಸಿಕೊಂಡಿತ್ತು’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ’ಈ ಚುನಾವಣೆಯಲ್ಲಿ ನಾವು ಯಾರನ್ನೂ ಬೆಂಬಲಿಸುವುದಿಲ್ಲ’: ರಾಕೇಶ್ ಟಿಕಾಯತ್

“13 ತಿಂಗಳು ನಡೆದ ರೈತರ ಸುದೀರ್ಘ ಹೋರಾಟದಲ್ಲಿ ನಾವು 700 ಕ್ಕಿಂತ ಹೆಚ್ಚು ರೈತರನ್ನು ಕಳೆದುಕೊಂಡಿದ್ದೇವೆ. ರೈತ ಸಮುದಾಯವು ಈ ಸಾವುಗಳನ್ನು ಅಷ್ಟು ಸುಲಭವಾಗಿ ಮರೆಯುವುದಿಲ್ಲ. ರೈತರ ಹೃದಯದಲ್ಲಿ ಇನ್ನೂ ಸಾಕಷ್ಟು ಕೋಪವಿದೆ ಮತ್ತು ಬಿಜೆಪಿ ಖಂಡಿತವಾಗಿಯೂ ಇದರಿಂದ ನಷ್ಟ ಅನುಭವಿಸಲಿದೆ. ಬಿಜೆಪಿ ಸರ್ಕಾರವು ಕಾನೂನನ್ನು ಹಿಂತೆಗೆದುಕೊಂಡಿತು. ಆದರೆ ರೈತರ ಹೃದಯಗಳನ್ನು ಗೆಲ್ಲವಲ್ಲಿ ಯಶಸ್ವಿ ಆಗಲಿಲ್ಲ” ಎಂದು ಟಿಕಾಯತ್ ಹೇಳಿದ್ದಾರೆ.

’ನಾವು ಯಾವ ಪಕ್ಷವನ್ನು ಬೆಂಬಲಿಸುತ್ತೆವೆ ಎಂದು ಇನ್ನು ನಿರ್ಧರಿಸಿಲ್ಲ. ಭಾರತಿಯ ಕಿಸಾನ್ ಮೋರ್ಚಾದ ಇತರ ಸದಸ್ಯರು ಈ ಬಗ್ಗೆ ಜಂಟಿ ಚರ್ಚೆ ನಡೆಸಬೇಕು. ನಂತರವೇ ನಾವು ಯಾವ ಪಕ್ಷವನ್ನು ಬೆಂಬಲಿಸುತ್ತೇವೆ ಎಂದು ನಿರ್ಧರಿಸಲು ಸಾಧ್ಯ. ಮುಸ್ಲಿಮರು ಮತ್ತು ಜಾಟ್‌ಗಳ ನಡುವೆ 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯು ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ತೀವ್ರವಾಗಿ ಹಾಳುಮಾಡಿದೆ, ಇದರಿಂದ ಮುಸ್ಲಿಮರು ಮತ್ತು ಜಾಟ್‌ಗಳ ನಡುವಿನ ಸಂಬಂಧವು ಘಾಸಿಗೊಂಡಿದೆ. ಇದನ್ನು ಬಿಜೆಪಿ ಸರ್ಕಾರ ಬಳಸಿಕೊಳ್ಳುವುದರ ಮೂಲಕ ಎರಡು ಸಮುದಾಯಗಳ ನಡುವೆ ತಡೆ ಗೋಡೆಯನ್ನೇ ನಿರ್ಮಿಸಿಬಿಟ್ಟಿದೆ” ಎಂದಿದ್ದಾರೆ.

’ಕೆಲವು ವರ್ಷಗಳಿಂದ ಆ ಗೋಡೆಯನ್ನು ಒಡೆದು ಬಾಂಧವ್ಯವನ್ನು ಬೆಸೆಯುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಅಂದು ನಡೆದ ಗಲಭೆಯ ನಂತರ ಜಾಟ್ ಸಮುದಾಯದ ಯುವಕರು ಬಿಜೆಪಿಯ ಹುಸಿ ದೇಶ ಪ್ರೇಮದ ರಾಜಕೀಯದಿಂದ ಪ್ರಭಾವಿತರಾಗಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಯಾವುದೇ ಹಿಂದೂ-ಮುಸ್ಲಿಂ ಘರ್ಷಣೆಗೆ ಮತ್ತೆ ಅವಕಾಶ ನೀಡಬಾರದು ಮತ್ತು ಶಾಂತಿಯನ್ನು ಕಾಪಾಡಬೇಕಿದೆ ಎಂದು ಟಿಕಾಯತ್ ಹೇಳಿದ್ದಾರೆ’ ಎಂದು ಟಿಕಾಯತ್ ತಿಳಿಸಿದ್ದಾರೆ.

’ನಾವು ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಮಾತನಾಡಿದ್ದೇವೆ. ಯುವ ಹಿಂದೂಗಳಿಗೆ ಅವರ ಬಗೆಗಿನ ಆತಂಕಗಳನ್ನು ಸಹ ತಿಳಿಸಿದ್ದೇವೆ. ಅವರು ತಮ್ಮ ಗಮನವನ್ನ ಓದು ಮತ್ತು ಅಧ್ಯಯನದ ಮೇಲೆ ಕೇಂದ್ರೀಕರಿಸಬೇಕೆಂದು ಅವರಿಗೆ ಅರ್ಥಮಾಡಿಸುವ ಪ್ರಯತ್ನ ಮಾಡುತ್ತೆವೆ’ ಎಂದು ಸಂದರ್ಶನದಲ್ಲಿ ನರೇಶ್ ಟಿಕಾಯತ್ ತಿಳಿಸಿದ್ದಾರೆ.


ಇದನ್ನೂ ಓದಿ: ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ರೈತ ನಾಯಕ ರಾಕೇಶ್ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...