HomeUncategorizedಚಾಕೊಲೇಟ್ ಕಳ್ಳತನದ ಆರೋಪ; ಬುಡಕಟ್ಟು ವಿದ್ಯಾರ್ಥಿಯನ್ನು ಹೊಡೆದುಕೊಂದ ಭದ್ರತಾ ಸಿಬ್ಬಂದಿ!

ಚಾಕೊಲೇಟ್ ಕಳ್ಳತನದ ಆರೋಪ; ಬುಡಕಟ್ಟು ವಿದ್ಯಾರ್ಥಿಯನ್ನು ಹೊಡೆದುಕೊಂದ ಭದ್ರತಾ ಸಿಬ್ಬಂದಿ!

- Advertisement -
- Advertisement -

17 ವರ್ಷದ ಬುಡಕಟ್ಟು ವಿದ್ಯಾರ್ಥಿಯೊಬ್ಬ ಹೈದರಾಬಾದ್‌ನ ಶಾಪಿಂಗ್ ಮಾಲ್‌ವೊಂದರಲ್ಲಿ ಅನುಮಾನಾಸ್ಪದ ಪರಿಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ಜರುಗಿದೆ.

ಭಾನುವಾರ ರಾತ್ರಿ ಸಂಭವಿಸಿದ ಘಟನೆಯಲ್ಲಿ ತಮ್ಮ ಮಗನನ್ನು ಭದ್ರತಾ ಸಿಬ್ಬಂದಿಗಳು ಥಳಿಸಿ ಕೊಂದಿದ್ದಾರೆ ಎಂದು ಬಾಲಕನ ಪೋಷಕರು ಆರೋಪಿಸಿದ್ದಾರೆ.

ಬಾಲಕನನ್ನು ಭದ್ರತಾ ಸಿಬ್ಬಂದಿಯು ಹೊಡೆಯುತ್ತಿದ್ದಾಗ ಆತ ಕುಸಿದು ಬಿದ್ದಿದ್ದು ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ಸಮಯದಲ್ಲಿ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಕ್ಕೆ ತಿಳಿಸಿದ್ದಾರೆ.

ಪೊಲೀಸ್ ಇನ್ಸ್‌ಪೆಕ್ಟರ್ ಎ ವೆಂಕಟಯ್ಯ ಪ್ರಕಾರ ಮೃತನು ಖಾಸಗಿ ಜೂನಿಯರ್‌ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದಾನೆ. ಈಗನ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದು, ತನ್ನ ಸ್ನೇಹಿತರೊಂದಿಗೆ ಮಾಲ್‌ಗೆ ಹೋಗಿದ್ದ. ಅವರು ಕೆಲವು ಚಾಕೊಲೇಟ್‌ಗಳನ್ನು ತೆಗೆದುಕೊಂಡು ಜೇಬಿನಲ್ಲಿ ಇಟ್ಟುಕೊಂಡಿದ್ದರು. ಅದನ್ನು ಭದ್ರತಾ ಸಿಬ್ಬಂದಿಯನ್ನು ನೋಡಿದ ಕೂಡಲೇ ಹುಡುಗ ಚಾಕಲೇಟ್‌ಗಳನ್ನು ಎಸೆದಿದ್ದಾನೆ. ಆದರೆ ಸೆಕ್ಯುರಿಟಿ ಗಾರ್ಡ್‌ಗಳು ಅವನನ್ನು ಹೊಡೆಯುತ್ತಿದ್ದಾಗ ಕುಸಿದುಬಿದ್ದನು. ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದೇವೆ, ಅದು ಹುಡುಗನನ್ನು ಭದ್ರತೆಯಿಂದ ನಿರ್ವಹಿಸಿಲ್ಲ ಎಂದು ಸ್ಪಷ್ಟವಾಗಿ ತೋರಿಸುತ್ತದೆ. ಈ ಕುರಿತು ವಿಚಾರಣೆ ನಡೆಯುತ್ತಿದೆ ಎಂದಿದ್ದಾರೆ.

ಅಲ್ಲದೇ ಹೃದಯಘಾತವೂ ಕೂಡ ಸಾವಿಗೆ ಕಾರಣವಾಗಬಹುದು ಎಂದು ಅವರು ಶಂಕಿಸಿದ್ದು, ಆದರೆ ಮರಣೋತ್ತರ ಪರೀಕ್ಷೆ ಮಾತ್ರ ನಿಖರವಾದ ಕಾರಣವನ್ನು ಬಹಿರಂಗಪಡಿಸುತ್ತದೆ ಎಂದು ಅವರು ಹೇಳಿದ್ದಾರೆ. ಬಾಲಕನ ಪೋಷಕರು ಮಾಲ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read