Homeಮುಖಪುಟ5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ನೇಣಿಗೆ ಶರಣಾದ 60ರ ವ್ಯಕ್ತಿ

5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ನೇಣಿಗೆ ಶರಣಾದ 60ರ ವ್ಯಕ್ತಿ

- Advertisement -
- Advertisement -

ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಬಳಿಕ 60 ವರ್ಷದ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಈ ಘಟನೆ ಫರೀದ್ ಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣ ಮತ್ತು ಫೋಕ್ಸೋ ಕಾಯ್ದೆಯ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ರಕ್ತಸಿಕ್ತ ಸ್ಥಿತಿಯಲ್ಲಿದ್ದ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬಾಲಕಿಯ ಕುಟುಂಬದವರು ಈ ಘಟನೆ ಕುರಿತು ಮಾತನಾಡಿದ್ದು, ”ಮನೆಯ ಹೊರಗೆ ಬಾಲಕಿ ಆಟವಾಡುತ್ತಿದ್ದಳು. ಬಹಳಷ್ಟು ಸಮಯ ಕಳೆದರೂ ಆಕೆ ಮನೆಗೆ ಬಾರದಿದ್ದಾಗ ಹುಡುಕಲು ಅರಂಭಿಸಿದೆವು. ಆ ವೇಳೆ ಮನೆಯೊಂದರಲ್ಲಿ ಬಾಲಕಿಯ ಮೇಲೆ ಬಲಾತ್ಕಾರ ಮಾಡುತ್ತಿರುವುದು ಕಂಡುಬಂದಿದೆ” ಎಂದು ಹೇಳಿದ್ದಾರೆ.

ಈ ವೇಳೆ ಬಾಲಕಿಯ ಕುಟುಂಬದವರನ್ನು ನೋಡಿದ ತಕ್ಷಣ ಆರೋಪಿ ಪಲಾಯನ ಮಾಡಿದ್ದಾನೆ. ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದಾಗ, ಆತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಕ್ರಮ ಕೈಗೊಳ್ಳುವ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿರಬೇಕು ಎನ್ನುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉ.ಪ್ರದೇಶ: ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ತಂದೆಯಿಂದಲೇ ನಿರಂತರವಾಗಿ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...