Homeಮುಖಪುಟ‘ಪ್ರಜಾಪ್ರಭುತ್ವ ನಾಶ ಮಾಡುವ ಮಸೂದೆ’: ದೆಹಲಿ ಮಸೂದೆ ವಿರುದ್ಧ ಖರ್ಗೆ ವಾಗ್ದಾಳಿ

‘ಪ್ರಜಾಪ್ರಭುತ್ವ ನಾಶ ಮಾಡುವ ಮಸೂದೆ’: ದೆಹಲಿ ಮಸೂದೆ ವಿರುದ್ಧ ಖರ್ಗೆ ವಾಗ್ದಾಳಿ

- Advertisement -
- Advertisement -

ಸೋಮವಾರ ಲೋಕಸಭೆಯಲ್ಲಿ ಅಂಗೀಕರಿಸಿದ ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುವ ಮಸೂದೆ ಮಂಗಳವಾರ ರಾಜ್ಯಸಭೆಯಲ್ಲಿ ಪದೇ ಪದೇ ಅಡೆತಡೆಗಳನ್ನು ಉಂಟುಮಾಡಿತು, ಪ್ರತಿಪಕ್ಷಗಳು ಇದನ್ನು “ಅಪಾಯಕಾರಿ” ಶಾಸನ ಎಂದು ಕರೆದವು.

‘ಚುನಾಯಿತ ಸರ್ಕಾರದ ಅಧಿಕಾರವನ್ನು ಕಸಿದುಕೊಳ್ಳುವ ಉದ್ದೇಶದಿಂದ ಈ ಮಸೂದೆ ತರಲಾಗಿದೆ’ ಎಂದು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

“ಇದು ತುಂಬಾ ಅಪಾಯಕಾರಿ ಮಸೂದೆ. ಇದು ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತದೆ. ನೀವು ಲೆಫ್ಟಿನೆಂಟ್ ಗವರ್ನರ್ ಅವರನ್ನು ‘ಸರ್ಕಾರ’ವನ್ನಾಗಿ ಮಾಡಿ, ಚುನಾಯಿತ ಜನಪ್ರತಿನಿಧಿಗಳನ್ನು ಅವರ ಸೇವಕರನ್ನಾಗಿ ಮಾಡಲು ಬಯಸುತ್ತೀರಿ” ಎಂದು ಅವರು ಕಿಡಿಕಾರಿದರು.

ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ, 2021 ಅನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದು, ಇದೀಗ ರಾಜ್ಯಸಭೆಯಲ್ಲಿ ಕೈಗೆತ್ತಿಕೊಳ್ಳಲಾಗುವುದು.
ಚುನಾಯಿತ ಸರ್ಕಾರಕ್ಕೆ ಹೋಲಿಸಿದರೆ ಈ ಮಸೂದೆಯು ದೆಹಲಿಯ ಕೇಂದ್ರದ ಪ್ರತಿನಿಧಿಯಾದ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರವನ್ನು ನೀಡುತ್ತದೆ. ಇದು ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. 2013ರಲ್ಲಿ ಆಮ್ ಆದ್ಮಿ ಪಕ್ಷ ಮೊದಲ ಬಾರಿ ಅಧಿಕಾರಕ್ಕೆ ಬಂದಾಗಿನಿಂದ ಅದು ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವೆ ಸಂಘರ್ಷ, ಜಗಳ ನಡೆದೇ ಇದೆ.

ಮಸೂದೆಯನ್ನು ಮಂಡಿಸಲು ಉಪ ಸಭಾಪತಿ ಹರಿವನಶ್ ನಾರಾಯಣ್ ಸಿಂಗ್ ಅವರು ಗೃಹ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ಕೇಳಿದ ಕೂಡಲೇ ಅವ್ಯವಸ್ಥೆ ಭುಗಿಲೆದ್ದಿತು. ಎಎಪಿ ಸದಸ್ಯ ಸಂಜಯ್ ಸಿಂಗ್ ಅವರು ಮಂಡನೆಗೆ ಅವಕಾಶ ನೀಡುವುದನ್ನು ವಿರೋಧಿಸಿದರು, ತನ್ನ ನೋಟಿಸ್ ಸದನದಲ್ಲಿ ಬಾಕಿ ಇದೆ, ಅದರ ಬಗ್ಗೆ ಚರ್ಚೆ ಆಗಬೇಕು ಎಂದು ಹೇಳಿದರು.

ಮಸೂದೆಯ ಮೇಲಿನ ‘ಮೋಷನ್’ ಮಂಡಿಸಿದ ನಂತರ ಅವರ ನೋಟಿಸ್ ಅನ್ನು ಪರಿಗಣಿಸಲಾಗುವುದು ಎಂದು ಉಪಾಧ್ಯಕ್ಷರು ಎಎಪಿ ಸದಸ್ಯರಿಗೆ ಭರವಸೆ ನೀಡಿದರು, ಆದರೆ ಸಂಜಯ್ ಸಿಂಗ್ ಇದನ್ನು “ಅಸಂವಿಧಾನಿಕ” ಎಂದು ಕರೆದರು.

ಶಾಸಕಾಂಗವು ರಚಿಸುವ ಯಾವುದೇ ಕಾನೂನಿನಲ್ಲಿ “ಸರ್ಕಾರ” ಎಂಬ ಪದವು ಲೆಫ್ಟಿನೆಂಟ್ ಗವರ್ನರ್ ಅನ್ನು ಅರ್ಥೈಸುತ್ತದೆ ಮತ್ತು ದೆಹಲಿ ಸರ್ಕಾರವು ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ಅವರ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೊಸ ಮಸೂದೆ ಸ್ಪಷ್ಟಪಡಿಸುತ್ತದೆ.

ಅರವಿಂದ್ ಕೇಜ್ರಿವಾಲ್ ಅವರು ಲೋಕಸಭೆಯಲ್ಲಿ ಮಸೂದೆ ಅಂಗೀಕಾರವನ್ನು ದೆಹಲಿ ಜನರಿಗೆ “ಅವಮಾನ” ಎಂದು ಕರೆದಿದ್ದಾರೆ. “ಮಸೂದೆ ಜನರಿಂದ, ಮತ ಚಲಾಯಿಸಿದವರಿಂದ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ ಮತ್ತು ಸೋಲಿಸಲ್ಪಟ್ಟವರಿಗೆ ದೆಹಲಿಯನ್ನು ನಡೆಸುವ ಅಧಿಕಾರವನ್ನು ನೀಡುತ್ತದೆ. ಬಿಜೆಪಿ ಜನರಿಗೆ ಮೋಸ ಮಾಡಿದೆ” ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಕೇಂದ್ರದ ಇಂಟರ್ನೆಟ್ ನಿಯಂತ್ರಣ: ಮಾಧ್ಯಮ ಸ್ವಾತಂತ್ಯ್ರ & ಮಾಹಿತಿ ಹಕ್ಕಿಗೆ ಧಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...