Homeಕರ್ನಾಟಕನಗ್ನ ಮಹಿಳೆ ವಿಡಿಯೋ ಕಾಲ್ ಮಾಡಿದ್ದಾರೆಂದು ದೂರು ದಾಖಲಿಸಿದ ಚಿತ್ರದುರ್ಗದ ಬಿಜೆಪಿ ಶಾಸಕ

ನಗ್ನ ಮಹಿಳೆ ವಿಡಿಯೋ ಕಾಲ್ ಮಾಡಿದ್ದಾರೆಂದು ದೂರು ದಾಖಲಿಸಿದ ಚಿತ್ರದುರ್ಗದ ಬಿಜೆಪಿ ಶಾಸಕ

- Advertisement -
- Advertisement -

ನಗ್ನ ಮಹಿಳೆಯೊಬ್ಬರು ತನಗೆ ವಾಟ್ಸಾಪ್‌ನಲ್ಲಿ ವಿಡಿಯೋ ಕರೆ ಮಾಡಿದ್ದಾರೆ ಎಂದು ಆರೋಪಿಸಿ ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಅಕ್ಟೋಬರ್ 31 ರಂದು ತನಗೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿತ್ತು ಎಂದು ಶಾಸಕರು ದೂರಿದ್ದಾರೆ.

“ಮೊದಲಿಗೆ ಸಾಮಾನ್ಯ ಕರೆಯ ಮೂಲಕ ಕರೆ ಪ್ರಾರಂಭವಾಯಿತು. ನಂತರ ಮಹಿಳೆಯು ವಾಟ್ಸಾಪ್‌ನಲ್ಲಿ ವೀಡಿಯೊ ಕರೆ ಮಾಡಲು ಶುರುಮಾಡಿದ್ದಾರೆ. ವಿಡಿಯೊದಲ್ಲಿ ಮಹಿಳೆ ತನ್ನ ಖಾಸಗಿ ಅಂಗಗಳನ್ನು ತೋರಿಸಲು ಪ್ರಾರಂಭಿಸಿದ್ದು, ಇದರ ನಂತರ ಶಾಸಕರು ತಕ್ಷಣವೇ ಕರೆಯನ್ನು ಕೊನೆಗೊಳಿಸಿದ್ದಾರೆ” ಎಂದು ದೂರಿನಲ್ಲಿ ಹೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದರ ನಂತರ ಅದೇ ನಂಬರ್‌ನಿಂದ ಹಲವು ಪೋರ್ನ್ ವಿಡಿಯೋಗಳು ಶಾಸಕರಿಗೆ ಬಂದಿವೆ ಎಂದು ಚಿತ್ರದುರ್ಗ ಸೈಬರ್ ಪೊಲೀಸರಿಗೆ ದೂರು ನೀಡಲಾಗಿದೆ. ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ತಮ್ಮ ದೂರಿನಲ್ಲಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

‘ಸೆಕ್ಸ್‌ಟಾರ್ಶನ್‌‌’

ಇಂತಹ ಅಪರಾಧಗಳನ್ನು ‘ಸೆಕ್ಸ್‌ಟಾರ್ಶನ್‌‌’ ಎಂದು ಕರೆಯಲಾಗುತ್ತದೆ. ಸೆಕ್ಸ್‌ಟಾರ್ಶನ್‌‌ ಅಪರಾಧದಲ್ಲಿ ಬಲಿಪಶುವನ್ನು ಖಾಸಗಿ ಮತ್ತು ಎಡಿಟ್‌ ಮಾಡಲಾಗಿರುವ ಫಿಲ್ಮ್‌ಗಳು ಅಥವಾ ಚಿತ್ರಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತದೆ.

ಅಪರಿಚಿತರು ಅಥವಾ ಹೊಸದಾಗಿ ಪರಿಚಯವಾದವರು ಬಲಿಪಶುವಿಗೆ ವೀಡಿಯೊ ಕರೆ ಮಾಡುತ್ತಾರೆ. ಕರೆ ಸ್ವೀಕರಿಸುತ್ತಿದ್ದಂತೆ ತಕ್ಷಣ ತಮ್ಮ ಉಡುಪುಗಳನ್ನು ತೆಗೆದುಹಾಕುತ್ತಾರೆ. ನಂತರ ಈ ಕರೆಯ ಸ್ಕ್ರೀನ್ ರೆಕಾರ್ಡ್‌ ಅನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತದೆ. ಇದೇ ರೀತಿಯ ‘ಸೆಕ್ಸ್‌ಟಾರ್ಶನ್‌‌’ನ ಸಾಮಾನ್ಯ ವಿಧಾನಗಳನ್ನು ಅನೇಕ ರಾಜ್ಯಗಳ ಪೊಲೀಸರು ಗಮನಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದ ಶಿವಮೂರ್ತಿ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯದ ದೂರು | ಕ್ರಮ ಕೈಗೊಳ್ಳದ ಜಿಲ್ಲಾಡಳಿತ

ಇಂತಹ ಪ್ರಕರಣದಲ್ಲಿ ಬಹುತೇಕ ಸಂತ್ರಸ್ತರು ಭಯ, ಮುಜುಗರ ಹಾಗೂ ಸ್ನೇಹಿತರು ಅಥವಾ ಕುಟುಂಬದವರಿಂದ ಅವಮಾನವಾಗುತ್ತದೆ ಎಂಬ ಭಾವನೆಯಿಂದ ದೂರು ದಾಖಲಿಸುವುದಿಲ್ಲ ಎಂದು ಪೊಲೀಸರು ಹೇಳಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...