Homeಮುಖಪುಟಕೊಳಕಾಗಿದ್ದ ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ; ನಾಟಕ ಎಂದ ಜನರು

ಕೊಳಕಾಗಿದ್ದ ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ; ನಾಟಕ ಎಂದ ಜನರು

- Advertisement -
- Advertisement -

ಬಿಜೆಪಿ ಸಂಸದ ಜನಾರ್ದನ್‌ ಮಿಶ್ರಾ ಅವರು ಮಧ್ಯಪ್ರದೇಶದ ಖಟ್ಖಾರಿಯ ಬಾಲಕಿಯರ ಶಾಲೆಯ ಶೌಚಾಲಯವನ್ನು ತಮ್ಮ ಬರಿ ಕೈಗಳಿಂದ ಸ್ವಚ್ಛಗೊಳಿಸಿದ್ದಾರೆ. ರೇವಾ ಕ್ಷೇತ್ರದ ಸಂಸದರಾಗಿರುವ ಅವರು ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ಮಿಶ್ರಾ ಅವರು ಯಾವುದೇ ಇತರ ಉಪಕರಣಗಳು ಅಥವಾ ನೈರ್ಮಲ್ಯ ಉತ್ಪನ್ನಗಳನ್ನು ಬಳಸದೆ ತನ್ನ ಬರಿ ಕೈಗಳಿಂದ ಸ್ವಚ್ಛಗೊಳಿಸುತ್ತಿರುವುದನ್ನು ಕಾಣಬಹುದು. ಇಷ್ಟೆ ಅಲ್ಲದೆ ಈ ವಿಡಿಯೊವನ್ನು ತಮ್ಮ ಟ್ವಿಟರ್‌ ಹ್ಯಾಂಡಲ್‌ನಲ್ಲೂ ಹಂಚಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಕ್ಷದಿಂದ ನಡೆಸುತ್ತಿರುವ ಸೇವಾ ಪಖ್ವಾಡದ ಅಡಿಯಲ್ಲಿ, ಯುವ ಮೋರ್ಚಾ ಖಟ್ಖಾರಿಯ ಬಾಲಕಿಯರ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮದ ನಂತರ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದೆ” ಎಂದು ಅವರು ಟ್ವಿಟರ್‌ನಲ್ಲಿ ಬರೆದು ಕೊಂಡಿದ್ದಾರೆ. ಈ ಟ್ವೀಟನ್ನು ಅವರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಇತರರಿಗೂ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಟೀಕೆ: ‘ಜಯ್ ಶಾ ಎಷ್ಟು ಶತಕಗಳನ್ನು ಬಾರಿಸಿದ್ದಾರೆ?’ ಎಂದ DMK

ಪಕ್ಷದ ವತಿಯಿಂದ ನಡೆಯುತ್ತಿರುವ ಸೇವಾ ಪಖವಾಡದ ಅಡಿಯಲ್ಲಿ ಯುವ ಮೋರ್ಚಾ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಿಶ್ರಾ ಬಾಲಕಿಯರ ಶಾಲೆಗೆ ತೆರಳಿದ್ದರು. ಅಲ್ಲಿ ಗಿಡ ನೆಟ್ಟ ನಂತರ ಶಾಲೆಯಲ್ಲಿ ಶೌಚಾಲಯ ತುಂಬಾ ಕೊಳಕಾಗಿದ್ದು, ಅದನ್ನು ಬಳಸಲು ತುಂಬಾ ಕಷ್ಟವಾಗಿದೆ ಎಂದು ತಿಳಿದ ಅವರು ಬಕೆಟ್‌ನಲ್ಲಿದ್ದ ನೀರನ್ನು ತೆಗೆದು ಕೈಯಿಂದ ಉಜ್ಜಿ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಧಾನಿ ಮೋದಿಯವರ ‘ಸ್ವಚ್ಛ ಭಾರತ್ ಅಭಿಯಾನ’ದ ಕಟ್ಟಾ ಬೆಂಬಲಿಗರಾದ ಅವರು ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದು ಇದೇ ಮೊದಲ ಬಾರಿಯಲ್ಲ. ಫೆಬ್ರವರಿ 2018 ರಲ್ಲಿ, ಅವರು ತಮ್ಮ ಕ್ಷೇತ್ರದ ಪ್ರಾಥಮಿಕ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಅಲ್ಲದೆ 2021 ರಲ್ಲೂ ಅವರು ಕೊರೊನಾ ಸೆಂಟರ್‌‌ನ ಶೌಚಾಲಯವನ್ನು ಕೈಯಿಗಳಿಂದ ಸ್ವಚ್ಛಗೊಳಿಸಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ – ಪೊಲೀಸ್ ವಾಹನಕ್ಕೆ ಬೆಂಕಿ

ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಆಕ್ರೋಶ ಕೂಡಾ ವ್ಯಕ್ತವಾಗಿದ್ದು, ಸಾಮಾಜಿಕ ಕಾರ್ಯಕರ್ತರೊಬ್ಬರು ಇದನ್ನು ‘ನಾಟಕ’ ಎಂದು ಕರೆದಿದ್ದಾರೆ. “ಇದು ತುಂಬಾ ಕೊಳಕು ನಡೆಯಾಗಿದೆ. ತಮ್ಮ ನಾಯಕರನ್ನು ಸೆಳೆಯಲು ಬೇಕಾಗಿ ಹೀಗೆ ಮಾಡುತ್ತಿದ್ದಾರೆ. ಶೌಚಾಲಯ ತೊಳೆಯಲು ಕನಿಷ್ಠ ಪಕ್ಷ ಸ್ವಚ್ಛತಾ ಉಪಕರಣಗಳನ್ನು ಬಳಸಿಕೊಳ್ಳಬಹುದಿತ್ತು” ಎಂದು ಅವರು ಹೇಳಿದ್ದಾರೆ.

“ಸಂಸದರ ಕೆಲಸವೇನು? ಶೌಚಾಲಯ ಸ್ವಚ್ಛ ಮಾಡುವುದೆ? ಅವರು ತಮ್ಮ ಕ್ಷೇತ್ರದಲ್ಲಿ ಇರುವ ಎಲ್ಲಾ ಶಾಲೆಗಳ ಶೌಚಾಲಯವನ್ನೂ ಹೀಗೆ ಸ್ವಚ್ಛ ಮಾಡುತ್ತಾರೆಯೆ? ಶಾಲೆಗಳಿಗೆ ಬೇಕಾದ ಮೂಲಭೂತ ಸೌಲಭ್ಯ ಕೊಟ್ಟು ಅದರ ನಿರ್ವಹಣೆಗೆ ವ್ಯವಸ್ಥೆ ಮಾಡಿದರೆ ಸಾಕಿತ್ತು. ಇಷ್ಟು ನಾಟಕ ಮಾಡುವ ಸಂದಂರ್ಭ ಇರುತ್ತಿರಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...