Homeಕರ್ನಾಟಕಹೊತ್ತಿ ಉರಿದ ಹೋಂಡಾ ಶೋ ರೂಂ; ಸುಟ್ಟು ಕರಕಲಾದ ಬೈಕುಗಳು

ಹೊತ್ತಿ ಉರಿದ ಹೋಂಡಾ ಶೋ ರೂಂ; ಸುಟ್ಟು ಕರಕಲಾದ ಬೈಕುಗಳು

- Advertisement -
- Advertisement -

ತುಮಕೂರು ನಗರದ ಬಿ.ಎಚ್.ರಸ್ತೆಯಲ್ಲಿರುವ ಹೋಂಡಾ ಶೋ ರೂಂ ಹೊತ್ತಿ ಉರಿದಿದೆ. ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ನೂರಾರು ಹೀರೋ ಹೋಂಡಾಗಳು ಸುಟ್ಟು ಭಸ್ಮ ವಾಗಿವೆ. ಅಗ್ನಿ ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ.

ನವೆಂಬರ್ 14 ರಂದು ರಾತ್ರಿ ಹೋಂಡಾ ಶೋ ರೂಂ ಮಾಲಿಕರು ಮಾಮೂಲಿನಂತೆ ಬೀಗ ಹಾಕಿಕೊಂಡು ಬಂದಿದ್ದಾರೆ. ರಾತ್ರಿ ಒಂದು ಗಂಟೆಯ ವೇಳೆಗೆ ಶೋ ರೂಮಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಯಶಸ್ವಿಯಾಗಿದೆ. ಆದರೆ ಬೆಂಕಿ ದುರಂತದಲ್ಲಿ ಎಲ್ಲ ಬಗೆಯ ಬೈಕ್, ಹೋಂಡಾಗಳು ಸುಟ್ಟು ಕರಕಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊರೊನಾ ಸೋಂಕು ವ್ಯಾಪಿಸಿದ ಪರಿಣಾಮ ಮೂರ್ನಾಲ್ಕು ತಿಂಗಳು ಕಾಲ ಶೋ ರೂಂ ಬಾಗಿಲು ಮುಚ್ಚಿತ್ತು. ನಂತರ ಶೋ ರೂಂ ಬಾಗಿಲು ತೆರೆಯಲು ಅವಕಾಶ ಸಿಕ್ಕಿದರೂ ವ್ಯಾಪಾರ ಅಷ್ಟಕ್ಕಷ್ಟೇ ನಡೆಯುತ್ತಿತ್ತು. ಬೈಕುಗಳ ಮಾರಾಟ ಕಡಿಮೆಯಾಗಿತ್ತು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಟೊಯೊಟಾ: 5 ನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಪ್ರತಿಭಟನೆ- ದರ್ಪ ತೋರುತ್ತಿರುವ ಕಂಪನಿ ಆಡಳಿತ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್ ಅಡ್ಡ ಪರಿಣಾಮ: ‘ಬಿಜೆಪಿ’ ದೇಣಿಗೆಗಾಗಿ ‘ಜನರ ಜೀವ’ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

0
ಕೋವಿಶೀಲ್ಡ್ ಲಸಿಕೆಯ "ಅಡ್ಡಪರಿಣಾಮಗಳ" ವಿವಾದದ ಮಧ್ಯೆ ಲಸಿಕೆ ತಯಾರಕರಿಂದ "ರಾಜಕೀಯ ದೇಣಿಗೆಗಳನ್ನು" ಪಡೆಯಲು 'ಬಿಜೆಪಿ' ಜನರ ಜೀವನವನ್ನು ಪಣಕ್ಕಿಟ್ಟಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಈ ಕುರಿತು ಉನ್ನತ ಮಟ್ಟದ...