Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

ಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪ್ಪ-ಮಗನ (ಎಚ್‌ಡಿ ರೇವಣ್ಣ-ಪ್ರಜ್ವಲ್ ರೇವಣ್ಣ) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪತ್ನಿ ಭವಾನಿ ಅವರು ಮನೆಯಲ್ಲಿ ಇಲ್ಲದಿದ್ದಾಗ ಎಚ್‌.ಡಿ. ರೇವಣ್ಣ ಮತ್ತು ಅವರ ಪುತ್ರ ಅನುಚಿತವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ನೀಡಿದ್ದಾರೆ. ನಾನು ಮನೆಯಲ್ಲಿ ಇದ್ದಾಗ ವಿಡಿಯೋ ಕಾಲ್ ಮಾಡಿ ನನ್ನ ಜೊತೆ ಹಾಗೂ ಮಗಳ ಜೊತೆಗೆ ಪ್ರಚೋದನಕಾರಿಯಾಗಿ ಮಾತನಾಡಿದ್ದು, ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯಲ್ಲಿ ಮಾತನಾಡಿದ ನಂತರ ನನಗೆ ಜೀವಭಯವಿದೆ. ಆ ವಿಡಿಯೋ ಹೊರಗಡೆ ಬಂದರೆ ಎಂಬ ಆತಂಕವಿದ್ದು, ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮಹಿಳೆ ದೂರು ನೀಡಿದ್ದಾರೆ.

ಮಾಜಿ ಸಚಿವ ಎಚ್‌.ಡಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ) ಮತ್ತು 506, 509 ಅಡಿಯಲ್ಲಿ ದೂರು ದಾಖಲಾಗಿದ್ದು, ಅಪ್ಪ-ಮಗನಿಗೆ ಈಗ ಸಂಕಷ್ಟ ಎದುರಾಗಿದೆ.

ದೂರಿನಲ್ಲಿ ಏನಿದೆ?

‘ನನ್ನ ಪತಿ ಮಾಜಿ ಶಾಸಕರಾದ ಹೆಚ್‌ ಡಿ ರೇವಣ್ಣ ರವರ ಮಾಲೀಕತ್ವದ ನಾಗಾಶಾಪುರದ ಹಾಲಿನ ಡೈರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ರೇವಣ್ಣರವರು ನನಗೆ ಬಿಸಿಎಂ ಲೇಡಿಸ್‌ ಹಾಸ್ಟೇಲ್‌ ನಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. ಜತೆಗೆ, ನಾನು ಭಾವನಿ ರೇವಣ್ಣ ಅವರಿಗೆ ಹತ್ತಿರದ ಸಂಬಂಧಿಯೂ ಆಗಿದ್ದು, 2013ರಲ್ಲಿ ರೇವಣ್ಣ ಆಗಾಗ ಮನೆಗೆ ಬರುವಂತೆ ಹೇಳುತ್ತಿದ್ದರು; ಅವರ ಮಾತಿನಂತೆ ಹಾಸ್ಟೆಲ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದೆ’ ಎಂದು ಹೇಳಿದ್ದಾರೆ.

‘ರೇವಣ್ಣ ಪುತ್ರ ಸೂರಜ್‌ ಮದುವೆ ಸಮಯದಲ್ಲಿ ಮನೆ ಕೆಲಸ ಮಾಡಿಕೊಡುವಂತೆ ಕರೆಸಿಕೊಂಡಿದ್ದರು. ಅಲ್ಲಿ ಮೂರುವರೆ ವರ್ಷಗಳ ಕಾಲ ಕೆಲಸ ಮಾಡಿಕೊಂಡಿದ್ದೆ, ಕೆಲಸಕ್ಕೆ ಸೇರಿಕೊಂಡ 4 ತಿಂಗಳ ನಂತರ ಅವರು ತಮ್ಮ ಕೊಠಡಿಗೆ ಬರುವಂತೆ ಅಹ್ವಾನಿಸುತ್ತಿದ್ದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ 6 ಜನ ಹೆಣ್ಣು ಮಕ್ಕಳು ಪ್ರಜ್ವಲ್‌ ರೇವಣ್ಣ ಬಂದಾಗ ನಮಗೆ ಭಯವಾಗುತ್ತದೆ ಎಂದು ಹೇಳುತ್ತಿದ್ದರು. ಕೆಲಸ ಮಾಡುತ್ತಿದ್ದ ಹುಡುಗರೂ ಸಹ ಹೆಣ್ಣು ಮಕ್ಕಳಿಗೆ ಎಚ್ಚರವಾಗಿರುವಂತೆ ತಿಳಿಸುತ್ತಿದ್ದರು. ರೇವಣ್ಣ ತಮ್ಮ ಪತ್ನಿ ಭವಾನಿಯವರು ಮನೆಯಲ್ಲಿ ಇಲ್ಲದಿದ್ದ ಸಮಯದಲ್ಲಿ ಸ್ಟೋರ್‌ ರೂಮ್‌ನಲ್ಲಿ ನನ್ನ ಕೈ ಹಿಡಿದು ಎಳೆಯುತ್ತಿದ್ದರು. ಹಣ್ಣು ಕೊಡುವ ನೆಪದಲ್ಲಿ ಮೈ ಮುಟ್ಟುತ್ತಿದ್ದರು, ಸೀರೆಯ ಪಿನ್‌ ಕಿತ್ತು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು’ ಎಂದು ಹೇಳಿದ್ದಾರೆ.

“ಪ್ರಜ್ವಲ್‌ ರೇವಣ್ಣ ಅಡುಗೆ ಮನೆಯಲ್ಲಿ ಇದ್ದಾಗ ಹಿಂದಿನಿಂದ ಬಂದು ಮೈ ಮುಟ್ಟತ್ತಾ ಹೊಟ್ಟೆ ಭಾಗದಲ್ಲಿ ಜಿಗುಟುತ್ತಿದ್ದರು. ಎಣ್ಣೆ ಹಚ್ಚಲು ಶೋಭಾ ರವರನ್ನು ಕಳಿಸು ಎಂದು ಕೆಲಸ ಮಾಡುವ ಹುಡುಗನ ಬಳಿ ಹೇಳಿ ಕಳುಹಿಸುತ್ತಿದ್ದರು. ಹೀಗೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಮನೆಯಲ್ಲಿದ್ದಾಗ ಪೋನ್‌ ಮಾಡಿ, ಸುಮಾರು ಸಲ ವಿಡಿಯೋ ಕಾಲ್ ಮಾಡುತ್ತಿದ್ದರು. ನನ್ನ ಮಗಳ ಜೊತೆ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದಿಸಲು ಯತ್ನಿಸುತ್ತಿದ್ದು, ಮಗಳು ಹೆದರಿಕೊಂಡು ನಂಬರ್‌ ಬ್ಲಾಕ್‌ ಮಾಡಿದ್ದಳು. ಆ ನಂತರ, ಹೆದರಿಕೊಂಡು ಕೆಲಸ ಬಿಟ್ಟು ಹೊರ ಬಂದಿದ್ದೆವು” ಎಂದು ತಿಳಿಸಿದ್ದಾರೆ.

“ಇತ್ತೀಚೆಗೆ ಜಿಲ್ಲೆಯಾದಂತ್ಯ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾಗುವ ಲೈಂಗಿಕ ದೌರ್ಜನ್ಯದ ವಿಡಿಯೋ ವಾಟ್ಸಾಪ್‌ ನಲ್ಲಿ ಹರಿದಾಡುತ್ತಿರುವ ಕೆಲವು ವಿಡಿಯೋಗಳು ನನಗೂ ಬಂದಿದ್ದು, ಚನ್ನರಾಯಪಟ್ಟಣ ರಸ್ತೆಯಲ್ಲಿ ಇರುವ ಗನ್ನಿಕಡ ಗ್ರಾಮದ ತೋಟದಲ್ಲಿ ಇರುವ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಮಹಿಳೆಯೊಂದಿಗೆ ಪ್ರಜ್ವಲ್‌ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯ ವಿಡಿಯೋ ನೋಡಿ ನನಗೆ ಭಯವಾಗಿದೆ. ಪತಿ ಈಗ ನನ್ನ ಶೀಲವನ್ನು ಶಂಕಿಸುತ್ತಿದ್ದು, ನನ್ನ ವಿಡಿಯೋ ಬಂದರೆ ನಮ್ಮ ಗತಿ ಏನು ಎಂಬ ಬಗ್ಗೆ ಆತಂಕವಾಗಿದೆ. ಇದರಿಂದ ಮಾನಸಿಕವಾಗಿ ಹಿಂಸೆ ಅಗಿದ್ದು, ಮಹಿಳೆಯ ಮೇಲೆ ನಡೆದ ಲೈಂಗಿಕ ದೌಜನ್ಯಗಳ ಬಗ್ಗೆ ಖಾಸಗಿ ಸುದ್ದಿವಾಹಿನಿಯಲ್ಲಿ ನಾನು ಮಾತನಾಡಿದ ನಂತರ ನನಗೆ ಜೀವ ಭಯ ಇದೆ. ಆದ್ದರಿಂದ, ನನಗೆ ಹಾಗೂ ಮಗಳ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಎಚ್‌.ಡಿ. ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ವಿರುದ್ಧ ಕಾನೂನು ರೀತಿ ಕ್ರಮ ತಗೆದುಕೊಳ್ಳಬೇಕು” ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ; ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....