Homeಮುಖಪುಟಮಹಿಳೆ ಪ್ರಚೋದನಕಾರಿ ಉಡುಗೆ ತೊಟ್ಟರೆ ಪುರುಷರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ: ಕೇರಳ ಕೋರ್ಟ್

ಮಹಿಳೆ ಪ್ರಚೋದನಕಾರಿ ಉಡುಗೆ ತೊಟ್ಟರೆ ಪುರುಷರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ: ಕೇರಳ ಕೋರ್ಟ್

- Advertisement -
- Advertisement -

ಮಹಿಳೆಯ ಉಡುಗೆ ಪ್ರಚೋದನಕಾರಿ ಮತ್ತು ಅಂಗಾಂಗಗಳು ಕಾಣುವಂತಿದ್ದರೆ ಪುರುಷನ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣವು ನಿಲ್ಲುವುದಿಲ್ಲ ಎಂದು ಕೇರಳದ ಕೋಝಿಕ್ಕೋಡ್‌ನ ಸೆಷನ್ಸ್ ನ್ಯಾಯಾಲಯವು ಹೇಳಿದೆ ಎಂದು ಸುದ್ದಿ ಮಾಧ್ಯಮ ‘ಮಾಧ್ಯಮಂ.ಕಾಂ’ ವರದಿ ಮಾಡಿದೆ. ಲೇಖಕ ಮತ್ತು ಸಾಮಾಜಿಕ ಕಾರ್ಯಕರ್ತ ಸಿವಿಕ್ ಚಂದ್ರನ್‌ಗೆ ನಿರೀಕ್ಷಣಾ ಜಾಮೀನು ನೀಡುವಾಗ ಕೋರ್ಟ್ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಲೇಖಕ, ನಿರೀಕ್ಷಣಾ ಜಾಮೀನು ಪಡೆಯಲು ಮಹಿಳಾ ದೂರುದಾರರ ಛಾಯಾಚಿತ್ರಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಛಾಯಾಚಿತ್ರಗಳನ್ನು ಪರಿಶೀಲಿಸಿದ ನಂತರ, ನ್ಯಾಯಮೂರ್ತಿ ಎಸ್. ಕೃಷ್ಣ ಕುಮಾರ್ ಅವರು, ದೂರುದಾರರು ಲೈಂಗಿಕ ಪ್ರಚೋದನಕಾರಿ ಉಡುಗೆಯನ್ನು ಧರಿಸಿರುವುದರಿಂದ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅನ್ನು ಅನ್ವಯಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

IPC ಯ ಸೆಕ್ಷನ್ 354A ಅನ್ನು ಓದುವಾಗ ಸೆಷನ್ಸ್ ನ್ಯಾಯಾಲಯವು ತನ್ನ ಮೌಖಿಕ ಅವಲೋಕನ ಮಾಡುತ್ತಾ, “ಈ ಸೆಕ್ಷಣ್ ಅಡಿಯಲ್ಲಿ ಪ್ರಕರಣ ದಾಖಲಾಗಲು, ದೈಹಿಕ ಸಂಪರ್ಕ ಮತ್ತು ಇಷ್ಟವಿಲ್ಲದ ಮತ್ತು ಸ್ಪಷ್ಟವಾದ ಲೈಂಗಿಕ ಪ್ರಚೋದನೆಗಳಳು ಇರಬೇಕು. ಲೈಂಗಿಕ ಬೇಡಿಕೆ ಅಥವಾ ವಿನಂತಿಯನ್ನು ಹೊಂದಿರಬೇಕು. ಅಲ್ಲಿ ಲೈಂಗಿಕ ಹಿನ್ನಲೆಯ ಟೀಕೆಗಳಿರಬೇಕು” ಎಂದು ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೊ ಅತ್ಯಾಚಾರ ಅಪರಾಧಿಗಳಿಗೆ ಹಾರ ಹಾಕಿ ಸ್ವಾಗತಿಸಿದ BJP ಬೆಂಬಲಿತ ಸಂಘಟನೆ VHP

ಅದೇ ಸೆಕ್ಷನ್ ಅನ್ನು ಓದುತ್ತಾ, ಆರೋಪಿಯ ಕಡೆಯಿಂದ ಮಹಿಳೆಯ ಘನತೆಗೆ ಕುಂದುಂಟು ಮಾಡುವ ಉದ್ದೇಶವು ಇರಲಿಲ್ಲ ಎಂದು ನ್ಯಾಯಾಲಯವು ಕಂಡುಕೊಂಡಿದೆ.

ದೂರುದಾರರ ಮಹಿಳೆಯ ಗೆಳೆಯರು ಸೇರಿದಂತೆ ಇತರ ಜನರು ಇದ್ದಾಗ ಈ ಘಟನೆ ಸಂಭವಿಸಿದೆ. ಆದರೆ ಅವರ ವಿರುದ್ಧ ಯಾರೂ ಅಂತಹ ದೂರುಗಳನ್ನು ಮಾಡಲಿಲ್ಲ ಎಂದು ಆರೋಪಿ ಬರಹಗಾರ ತನ್ನ ಸಮರ್ಥನೆಯಲ್ಲಿ ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...