Homeಕರ್ನಾಟಕಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ...

ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪವರ್ ಟಿವಿಯ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಅವರನ್ನು ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆದು ಕಿರುಕುಳ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪವರ್‌ ಟಿವಿ ಆರೋಪಿಸಿದೆ.

- Advertisement -
- Advertisement -

ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಕಳೆದ ಹಲವು ದಿನಗಳಿಂದ ಸತತ ದಾಖಲೆ ಸಹಿತ ವರದಿ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ ಪವರ್‌ ಟಿವಿ ಮುಖ್ಯಸ್ಥರ ಮನೆ ಮೇಲೆ ಇಂದು ಪೊಲೀಸರು ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಕುಟುಂಬ ಭಾರಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸಾಕ್ಷಿ ಸಮೇತ ನಿರಂತರ ಸುದ್ದಿ ಪ್ರಸಾರ ಮಾಡಿದ್ದಕ್ಕೆ ಪೊಲೀಸರಿಂದ ದಾಳಿ ಮಾಡಿಸಿ ಬೆದರಿಸುವ ಹುನ್ನಾರವಿದು ಎಂದು ಪವರ್ ಟಿವಿ ಪ್ರತಿಕ್ರಿಯಿಸಿದೆ.

“ಪವರ್‌ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ಎಂದು ಹೇಳಿಕೊಂಡು ಕೆ.ಪಿ ಅಗ್ರಹಾರದ ಪೊಲೀಸರು ದಾಳಿ ಮಾಡಿದ್ದಾರೆ. ಮೊದಲು ಕೊರಿಯರ್‌ ಬಾಯ್ ಎಂದುಕೊಂಡು ಒಬ್ಬರು ಮನೆಗೆ ಬರುತ್ತಾರೆ. ನಂತರ ಉಳಿದ ಪೊಲೀಸರು ಬಂದು ದಾಳಿ ನಡೆಸುತ್ತಾರೆ. ಯಾವುದೇ ವಾರೆಂಟ್ ಇಲ್ಲದೇ ದಾಳಿ ನಡೆಸಿದ್ದಾರೆ. ಮನೆಯವರು ವಾರೆಂಟ್ ಕೇಳಿದ ಮೇಲೆ ಕೈಬರಹದ ನೋಟಿಸ್ ನೀಡುತ್ತಾರೆ. ಮೊದಲು ಬಂದ 8 ಮಂದಿ ಪೊಲಿಸರು ಮನೆಯವರ ಮತ್ತು ಅಪಾರ್ಟ್‌ಮೆಂಟ್ ಬಳಿಯಿದ್ದವರ ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡಿದ್ದಾರೆ. ಒಟ್ಟು 15 ಮಂದಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಪವರ್‌ ಟಿವಿ ತಿಳಿಸಿದೆ.

ಅಲ್ಲದೇ ಪವರ್ ಟಿವಿಯ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಅವರನ್ನು ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ವಿಚಾರಣೆ ನೆಪದಲ್ಲಿ ನಮ್ಮ ಸಿಬ್ಬಂದಿಗೆ ಕಿರುಕುಳ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪವರ್‌ ಟಿವಿ ಆರೋಪಿಸಿದೆ.

ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸುದ್ದಿ ಮಾಡಿದರೆ, ಭ್ರಷ್ಟಾಚಾರ ಪ್ರಕರಣಗಳನ್ನು ಬಯಲಿಗೆಳೆದರೆ ಸರ್ಕಾರ ಈ ರೀತಿ ಪೊಲೀಸರಿಂದ ದಾಳಿ ಸೇಡು ತೀರಿಸಿಕೊಳ್ಳುವ ಮಟ್ಟಕ್ಕೆ ಇಳಿದಿದೆ. ಪವರ್ ಟಿವಿ ತಾನು ಮಾಡಿದ ಆರೋಪಗಳಿಗೆ ದಾಖಲೆ ಒದಗಿಸಿದೆ. ಇದು ಪ್ರಜಾಪ್ರಭುತ್ವವೇ? ಮಾಧ್ಯಮ ಸಂಸ್ಥೆಯ ಮೇಲಿನ ಈ ದಾಳಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹಲವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇತ್ತ ಪೊಲೀಸರು ಕಂಟ್ರಾಕ್ಟರ್‌ ಚಂದ್ರಕಾಂತ್ ಎಂಬುವರು ರಾಕೇಶ್ ಶೆಟ್ಟಿ ಮೇಲೆ ಬೆದರಿಕೆ ಆರೋಪ ಹೊರಿಸಿ ‍ನೀಡಿದ್ದ ದೂರಿನ ಹಿನ್ನೆಲೆ ದಾಳಿ ಮಾಡಲಾಗಿದೆ ಎಂದಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಪವರ್ ಟಿವಿಯ ವರದಿಯ ಆಧಾರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಾಖಲೆಗಳನ್ನು ಇಟ್ಟುಕೊಂಡು ಸದನದಲ್ಲಿ “ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ ನೀಡಬೇಕು. ಈ ಇಡೀ ಹಗರಣದ ಬಗ್ಗೆ ನ್ಯಾಯಾಲಯದ ನಿಗಾದಲ್ಲಿ ತನಿಖೆಗೆ ವಿಶೇಷ ತನಿಖಾದಳವನ್ನು ರಚಿಸಬೇಕು” ಎಂದು ಆಗ್ರಹಿಸಿದ್ದರು.

ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ…

Posted by Siddaramaiah on Wednesday, September 23, 2020

ಇನ್ನೂ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ದೂರು ಕೂಡ ದಾಖಲಿಸಲಾಗಿದೆ.

ಜನಾಧಿಕಾರ ಸಂಘರ್ಷ ಪರಿಷತ್‌ನ ಪದಾಧಿಕಾರಿಗಳಾದ ಆದರ್ಶ್ ಆರ್ ಅಯ್ಯರ್, ಪ್ರಕಾಶ್ ಬಾಬು ಬಿ.ಕೆ, ವಿಶ್ವನಾಥ್‌ ಬಿ.ವಿಯವರು ದೂರು ನೀಡಿದ್ದು, ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸಹ ದೂರು ನೀಡಲಾಗಿದೆ.


ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...