Homeಕರ್ನಾಟಕಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

ಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

- Advertisement -
- Advertisement -

ಬಾಗಲಕೋಟೆ ಜಿಲ್ಲೆಯ ಭಾರೀ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಮುಧೋಳದಲ್ಲಿ ಹಳೆ ಹುರಿಯಾಳುಗಳ ಕಾದಾಟದಲ್ಲಿ ಬಿಜೆಪಿಯ ಗೋವಿಂದ ಕಾರಜೋಳ ಸೋಲು ಕಂಡಿದ್ದಾರೆ. ಕಾಂಗ್ರೆಸ್‌ನಿಂದ ಆರ್.ಬಿ ತಿಮ್ಮಾಪೂರ ಸ್ಪರ್ಧೆ ಮಾಡಿದ್ದರು.

ತಿಮ್ಮಾಪೂರ ಹಾಗೂ ಕಾರಜೋಳ ನಡುವೆ ಭಾರೀ ಪೈಪೋಟಿ ನಡೆದಿತ್ತು. ಅಂತಿಮವಾಗಿ ಆರ್‌ಬಿ ತಿಮ್ಮಾಪೂರ ಅವರು 70,478 ಮತಗಳನ್ನು ಪಡೆದು, ಗೋವಿಂದ್ ಕಾರಜೋಳ ಅವರನ್ನು 16,396ಮತಗಳ ಅಂತರದಲ್ಲಿ ಹೀನಾಯವಾಗಿ ಸೋಲಿಸಿದ್ದಾರೆ. ಗೋವಿಂದ್ ಕಾರಜೋ:ಳ ಅವರು 54,082 ಮತಗಳನ್ನು ಪಡೆದಿದ್ದಾರೆ. ಇನ್ನೂ ಪಕ್ಷೇತರರಾಗಿ ಕಣಕ್ಕಿಳಿದಿರುವ ಸತೀಶ್ ಬಂಡಿವಡ್ಡರ ಅವರು 16,747 ಮತ ಪಡೆಯುವ ಮೂಲಕ 3ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಇದೀಗ ಕಾಂಗ್ರೆಸ್ ತೊರೆದು ಪಕ್ಷೇತರರಾಗಿ ಕಣದಲ್ಲಿದ್ದಾರೆ.

2004ರ ಚುನಾವಣೆಯಲ್ಲಿ 71,814 ಮತ ಪಡೆಯುವ ಮೂಲಕ ಗೋವಿಂದ ಕಾರಜೋಳ ಅವರು ಕಾಂಗ್ರೆಸ್‌ನ ಆರ್.ಬಿ ತಿಮ್ಮಾಪೂರ ವಿರುದ್ಧ 32,942 ಮತಗಳ ಅಂತರದಿಂದ ದೊಡ್ಡ ಗೆಲುವು ಸಾಧಿಸಿದರು. 2008ರಲ್ಲೂ ಕಾಂಗ್ರೆಸ್‌ನ ತಿಮ್ಮಾಪೂರ ಹಾಗೂ ಬಿಜೆಪಿಯ ಕಾರಜೋಳ ನಡುವೆಯೇ ಫೈಟ್ ಮುಂದುವರೆಯಿತು. ಕಾರಜೋಳ ಗೆಲುವಿನ ಓಟವನ್ನು ಮುಂದುವರೆಸಿದರು.ತಿಮ್ಮಾಪೂರ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು. ಈ ಚುನಾವಣೆಯಲ್ಲಿ ಇಬ್ಬರ ನಡುವಿನ ಮತಗಳಿಕೆಯ ಅಂತರ ಕೇವಲ 7,378 ಆಗಿತ್ತು.

2013ರ ಚುನಾವಣೆಯಲ್ಲೂ ಕೈ-ಕಮಲದಿಂದ ಸಾಂಪ್ರದಾಯಿಕ ಎದುರಾಳಿಗಳಾದ ಕಾರಜೋಳ ಹಾಗೂ ತಿಮ್ಮಾಪೂರ ಸ್ಪರ್ಧೆಗಿಳಿದರು. ಈ ಬಾರಿಯ ಮತಗಳಿಕೆಯ ಅಂತರ ಕಡಿಮೆಯಾಯಿತೇ ವಿನಃ ಗೆಲುವು-ಸೋಲಿನಲ್ಲಿ ವ್ಯತ್ಯಾಸವಾಗಲಿಲ್ಲ. ಕಾರಜೋಳ ಅವರು ಕೇವಲ 5,178 ಮತಗಳಿಂದ ಗೆಲುವು ಸಾಧಿಸಿದರು.

ಕಾರಜೋಳ ಸೋಲಿಗೆ ಕಾರಣವೇನು?

ಹಾಲಿ ನೀರಾವರಿ ಸಚಿವರಾಗಿರುವ ಗೋವಿಂದ ಕಾರಜೋಳ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನವನ್ನೂ ಅಲಂಕರಿಸಿದ್ದರು. ಬಿಜೆಪಿಯಲ್ಲಿ ಪ್ರಬಲ ದಲಿತ ಸಮುದಾಯದ ಮುಖಂಡರಾಗಿರುವ ಅವರು 6 ಬಾರಿ ಸ್ಪರ್ಧಿಸಿ 5 ಬಾರಿ ಗೆಲುವು ಸಾಧಿಸಿದ್ದು, ಒಂದು ಬಾರಿ ಸೋಲು ಕಂಡಿದ್ದರು. ಸತತವಾಗಿ ಗೆಲುವು ಸಾಧಿಸಿದ್ದ ಕಾರಜೋಳ ಇದೀಗ ಸೋಲು ಕಂಡಿದ್ದಾರೆ.

ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮೂಲಕ ಒಳ್ಳೆಯ ಹೆಸರು ಗಳಿಸಿದ್ದ ಕಾರಜೋಳ, ಜನಸಂಪರ್ಕದಿಂದ ದೂರ ಉಳಿದಿದ್ದಾರೆ ಎನ್ನುವ ಆರೋಪಗಳನ್ನು ಎದುರಿಸುತ್ತಿದ್ದರು. ಇನ್ನು ಈ ಕ್ಷೇತ್ರದಲ್ಲಿ ರೆಡ್ಡಿ ಸಮುದಾಯದ ಮತದಾರರ ಒಲವು ಯಾರ ಕಡೆ ಇರುತ್ತದೋ ಆ ಅಭ್ಯರ್ಥಿಯ ಗೆಲುವು ನಿಶ್ಚಿತ. ಕಾರಜೋಳ ಅವರು ಈ ರೆಡ್ಡಿ ಸಮುದಾಯದೊಂದಿಗೆ ಇಷ್ಟು ವರ್ಷಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು ಎನ್ನುವ ಕಾರಣಕ್ಕೆ ಗೆಲುವು ಸಾಧ್ಯವಾಗಿತ್ತು. ಆದರೆ ಈ ಬಾರಿ ರೆಡ್ಡಿ ಸಮುದಾಯವು ಕಾರಜೋಳ ಅವರನ್ನು ಕೈ ಬಿಟ್ಟು ಪಕ್ಷೇತರ ಅಭ್ಯರ್ಥಿ ಸತೀಶ್ ಪರ ಒಲವು ತೋರಿದ್ದಾರೆ.

ಈ ಭಾಗದಲ್ಲಿ ಕಬ್ಬು ಬೆಳೆಗಾರರ ಸಂಖ್ಯೆ ಅತ್ಯಧಿಕವಾಗಿದ್ದು, ಕಾರಜೋಳ ಅವರ ರನ್ನ ಕಾರ್ಖಾನೆಯಿಂದ ರೈತರಿಗೆ ಅನ್ಯಾಯವಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದರಿಂದ ಕಾರಜೋಳಗೆ ಹೊಡೆತ ಬಿದ್ದಿದೆ ಎಂದು ಹೇಳಬಹುದು. ಇನ್ನು ಕಾರಜೋಳ ಆಪ್ತರಾಗಿದ್ದ ತಳೆವಾಡ ಬ್ರದರ್ಸ್ ಈ ಬಾರಿ ಬಿಜೆಪಿ ತೊರೆದಿರುವುದು ಕಾರಜೋಳಗೆ ದೊಡ್ಡಮಟ್ಟದ ನಷ್ಟವಾಗಿದೆ.

ಕಾರಜೋಳ ತಮ್ಮ ರಾಜಕೀಯ ಜೀವನದುದ್ದಕ್ಕೂ ಸಂಘಪರಿವಾರದಿಂದ ಅಂತರ ಕಾಯ್ದುಕೊಂಡು ಬಂದಿದ್ದಾರೆ. ಪಕ್ಷದ ಚಿಹ್ನೆಯನ್ನು ಅವಲಂಬಿಸಿಯೇ ಸಂಘಪರಿವಾರದ ಮತಗಳನ್ನು ಗಳಿಸಿದ್ದರು. ಆದರೆ ಈ ಬಾರಿ ಸಂಘ ಪರಿವಾರದ ಮತಗಳು ಬಿಜೆಪಿ ಕೈತಪ್ಪಿ, ಪಕ್ಷೇತರನ ಪಾಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...