Homeಕರ್ನಾಟಕದೇವಾಲಯ ಪ್ರವೇಶಿಸಿದ ದಲಿತ ಮಹಿಳೆಗೆ ಥಳಿತ, ತಲೆಗೂದಲು ಹಿಡಿದು ಹೊರಗೆಳೆದುಹಾಕಿದ ಧರ್ಮದರ್ಶಿ - ವಿಡಿಯೋ ವೈರಲ್

ದೇವಾಲಯ ಪ್ರವೇಶಿಸಿದ ದಲಿತ ಮಹಿಳೆಗೆ ಥಳಿತ, ತಲೆಗೂದಲು ಹಿಡಿದು ಹೊರಗೆಳೆದುಹಾಕಿದ ಧರ್ಮದರ್ಶಿ – ವಿಡಿಯೋ ವೈರಲ್

- Advertisement -
- Advertisement -

ಧರ್ಮದರ್ಶಿಯೊಬ್ಬ ದೇವಾಲಯ ಪ್ರವೇಶಿಸಿದ ದಲಿತ ಮಹಿಳೆಗೆ ಕಾಲಿನಿಂದ ಒದ್ದು, ಮನಬಂದಂತೆ ಥಳಿಸಿ, ತಲೆಗೂದಲು ಹಿಡಿದು ಹೊರಗೆಳೆದುಹಾಕಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಅಮಾನುಷ ಘಟನೆಯು ಡಿಸೆಂಬರ್ 21 ರಂದು ನಡೆದಿದ್ದು, ಇಂದು ಶುಕ್ರವಾರ ಬೆಳಕಿಗೆ ಬಂದಿದೆ. ಸಂತ್ರಸ್ತೆ ಹೇಮಾವತಿ ಎಂಬುವವರು ಆರೋಪಿ ಮುನಿಕೃಷ್ಣ ಎಂಬ ಲಕ್ಷ್ಮಿ ನಾರಾಯಣಸ್ವಾಮಿ ದೇವಾಲಯದ ಧರ್ಮದರ್ಶಿಯ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಮಹಿಳೆಗೆ ಮನಬಂದಂತೆ ಥಳಿಸಲಾಗಿದೆ. ಕಾಲಿನಿಂದ ಒದೆಯಲಾಗಿದೆ. ಕೂದಲು ಹಿಡಿದು ಹೊರಗೆಳೆದುಹಾಕಲಾಗಿದೆ. ಅಲ್ಲದೆ ಕಟ್ಟಿಗೆ ತೆಗೆದುಕೊಂಡು ಹೊಡೆದಿರುವ ಸಿಸಿಕ್ಯಾಮರ ದೃಶ್ಯಗಳನ್ನು ನೋಡಬಹುದಾಗಿದೆ.

ಈ ವಿಡಿಯೋ ಆಧರಿಸಿ ಧರ್ಮದರ್ಶಿ ಮುನಿಕೃಷ್ಣ ವಿರುದ್ಧ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದಲಿತ ದೌರ್ಜನ್ಯ ತಡೆ ಕಾಯ್ದೆಯನ್ನು ಹೇರಿಲ್ಲ ಎಂದು ವರದಿಯಾಗಿದೆ.

ಆದರೆ ಆರೋಪಿ ತಾನು ಜಾತಿ ದೌರ್ಜನ್ಯ ನಡೆಸಿಲ್ಲ ಎಂದು ಪೊಲೀಸರ ಬಳಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಆ ಮಹಿಳೆಯು ತಾನು ವೆಂಕಟೇಶ್ವರ ಸ್ವಾಮಿಯು ನನ್ನ ಪತಿಯಾಗಿದ್ದಾರೆ. ಹಾಗಾಗಿ ನಾನು ಆ ಮೂರ್ತಿಯ ಪಕ್ಕದಲ್ಲಿ ಕುಳಿತುಕೊಳ್ಳಲು ಬಿಡಿ ಎಂದು ಹಠ ಮಾಡಿದರು. ಅದಕ್ಕೆ ಅವಕಾಶ ಕೊಡದಿದ್ದಾಗ ಆಕೆ ಅರ್ಚಕರಿಗೆ ಉಗಿದರು. ಅಲ್ಲಿಂದ ಹೊರಹೋಗಲು ನಿರಾಕರಿಸಿದಾಗ ಬಲವಂತವಾಗಿ ಥಳಿಸಿ ಹೊರಗೆಳೆದು ಹಾಕಲಾಯಿತು ಎಂದು ಆರೋಪಿ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...