Homeಕರ್ನಾಟಕಮೂಕ-ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿ ಅಪಹರಿಸಿ ಕೊಲೆ; ಪೋಷಕರಿಂದ ಅತ್ಯಾಚಾರ ಆರೋಪ

ಮೂಕ-ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿ ಅಪಹರಿಸಿ ಕೊಲೆ; ಪೋಷಕರಿಂದ ಅತ್ಯಾಚಾರ ಆರೋಪ

- Advertisement -
- Advertisement -

ಬೆಂಗಳೂರಿನ ಕೆಂಗೇರಿ ಸಮೀಪದ, ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾತು ಬಾರದ ಮತ್ತು ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲ್ಲಲಾಗಿದೆ ಎಂದು ಪೋಷಕರು ಆರೋಪಿಸಿದ್ದು, ಅಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ಅಂತ್ಯಸಂಸ್ಕಾರ ನಡೆಯಿತು.

“ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಹಂತಕರನ್ನು ಪೊಲೀಸರು ಬಂಧಿಸುವವರೆಗೆ ಆಕೆಯ ಶವಸಂಸ್ಕಾರ ಮಾಡುವುದಿಲ್ಲ” ಎರಡು ದಿನಗಳಿಂದ ಪೋಷಕರು ಹಠ ಹಿಡಿದ್ದರು. ಕೊನೆಗೆ ಅಧಿಕಾರಿಗಳು ಪಾಲಕರ ಮನವೊಲಿಸಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಥಳಕ್ಕೆ ಧಾವಿಸಿದ ಮೇಲೆ ಸ್ಥಳೀಯ ಸ್ಮಶಾನದಲ್ಲಿ ಬಾಲಕಿಯ ಅಂತ್ಯಸಂಸ್ಕಾರ ನಡೆದಿದೆ.

ಕಳೆದ ಭಾನುವಾರ, 14 ವರ್ಷದ ಕಿವುಡ-ಮೂಕ ಬಾಲಕಿಯನ್ನು ಅಪಹರಿಸಲಾಗಿತ್ತು; ಬಳಿಕ ಆಲೆಯ ಕತ್ತು ನುಲುಚಿ, ಬೆನ್ನು ಮೂಳೆ ಮುರಿದು ಕೊಲೆ ಮಾಡಲಾಗಿದೆ. ಬಿಡದಿ ಹೋಬಳಿ ಬಳಿಯ ಭದ್ರಾಪುರ ಹತ್ತಿರದ ರೈಲ್ವೆ ಟ್ರಾಕ್‌ ಬಳಿ ಶವ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳಿಗಾಗಿ ಬಿಡದಿ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಮೂರು ದಿನಗಳ ಹಿಂದೆ ಅರೆ ನಗ್ನಾವಸ್ಥೆಯಲ್ಲಿ ಶವವಾಗಿ ಪತ್ತೆಯಾದ ಮಾತು ಬಾರದ ಮತ್ತು ಕಿವಿ ಕೇಳಿಸದ ಬಾಲಕಿ ಹಕ್ಕಿಪಿಕ್ಕಿ ಸಮುದಾಯಕ್ಕೆ ಸೇರಿದ್ದಾಳೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರು, ಗ್ರಾಮಕ್ಕೆ ಬುಧವಾರ ಭೇಟಿ ನೀಡಿದಾಗ ಕುಟುಂಬದವರು ಮತ್ತು ಗ್ರಾಮಸ್ಥರು ತಮ್ಮ ನೋವು ತೋಡಿಕೊಂಡರು.

“ಮಗಳ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿದರೂ ಪೊಲೀಸರು ನಂಬುತ್ತಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದರೆ ಗೊತ್ತಾಗುತ್ತದೆ ಎನ್ನುತ್ತಿದ್ದಾರೆ. ಆದರೆ, ನಿನ್ನೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದರೂ, ಇನ್ನೂ ವರದಿ ಸಿಕ್ಕಿಲ್ಲ ಎನ್ನುತ್ತಿದ್ದಾರೆ. ವರದಿ ಬಂದು ಯಾವ ರೀತಿ ಕೊಲೆ ಮಾಡಿದ್ದಾರೆ? ಅತ್ಯಾಚಾರ ಆಗಿದೆಯೇ ಇಲ್ಲವೊ ಎಂದು ಖಚಿತವಾಗಿ ಹೇಳುವವರೆಗೆ ನಾವು ಮಗಳನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ” ಎಂದು ಬೆಳಿಗ್ಗೆಯಿಂದ ಪಾಲಕರು ಪಟ್ಟು ಹಿಡಿದಿದ್ದರು.

ಘಟನೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಿವರಿಸುತ್ತಿರುವ ಮೃತ ಬಾಲಕಿ ಪೋಷಕರು.

ಪರಿಹಾರ ವಿತರಣೆ: ಹತ್ಯೆ ಆಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿ ಖುಷಿ ಅವರ ಪೋಷಕರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಸಾಂತ್ವನ ಹೇಳಿ ಜಿಲ್ಲಾಡಳಿತದ ವತಿಯಿಂದ 4,12,500 ರೂ. ಹಾಗೂ ಪಂಚಾಯಿತಿ ವತಿಯಿಂದ 50 ಸಾವಿರ ಪರಿಹಾರದ ಚೆಕ್ ನೀಡಿದರು.

ಕುಣಿಗಲ್ ಶಾಸಕ ಡಾ. ರಂಗನಾಥ್, ಜಿಲ್ಲಾಧಿಕಾರಿ ಯಶವಂತ್ ಗುರುಕರ್, ಎಸ್‌ಪಿ ಶ್ರೀನಿವಾಸಗೌಡ, ಕಾಂಗ್ರೆಸ್ ಮುಖಂಡ ಗಾಣಕಲ್ ನಟರಾಜ್ ಮತ್ತಿತರರು ಉಪಸ್ಥಿತರಿದ್ದರು.

ಬೆಳಗಾವಿ| ಕುರಾನ್-ಹದೀಸ್‌ ಪುಸ್ತಕಗಳನ್ನು ಸುಟ್ಟ ಕಿಡಿಗೇಡಿಗಳು; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...