ನಾಡಿನ ಪ್ರಸಿದ್ದ ಸಾಹಿತಿ, ಹೋರಾಟಗಾರ, ದಲಿತ ಕವಿ ಎಂದೇ ಖ್ಯಾತರಾಗಿದ್ದ ಸಿದ್ದಲಿಂಗಯ್ಯನವರು (67) ಇಂದು ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ತಿಂಗಳ ಹಿಂದೆಯೇ ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಶ್ವಾಸಕೋಶದಲ್ಲಿ ಸೋಂಕು‌ ತೀವ್ರವಾಗಿ ಹರಡಿದ್ದ ಕಾರಣದಿಂದ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಅವರು ಕೊನೆಗೂ ಚೇತರಿಸಿಕೊಳ್ಳದೆ ಇಹಲೋಕ ತ್ಯಜಿಸಿದ್ದಾರೆ.

“ದಲಿತ ಕವಿ ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ ವಿಧಿವಶರಾದ ಸುದ್ದಿ ತಿಳಿದು ಅತೀವ ನೋವುಂಟಾಗಿದೆ. ಕನ್ನಡ ಸಾಹಿತ್ಯದ ಶ್ರೇಷ್ಠ ಸಾಧಕರೊಬ್ಬರು ನಮ್ಮನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ದೇವರು ಅವರ ಕುಟುಂಬ, ಅಪಾರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ದಲಿತ ಸಂಘರ್ಷ ಸಮಿತಿಯ ಮೂಲಕ ಹಲವಾರು ಹೋರಾಟಗಳನ್ನ ನಡೆಸಿದ್ದ ಅವರು ನೂರಾರು ಹೋರಾಟದ ಹಾಡುಗಳನ್ನು ಬರೆದು ದನಿಯಾಗಿದ್ದರು. ಪ್ರಾಧ್ಯಾಪಕರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಬೆಂಗಳೂರು ವಿವಿ ಅಂಬೇಡ್ಕರ್ ಅಧ್ಯಯನ ಪೀಠದ ನಿರ್ದೇಶಕರಾಗಿ ಮತ್ತು ಎರಡು ಬಾರಿ ವಿಧಾನ ಪರಿಷತ್ ಸದ್ಯಸ್ಯರಾಗಿ ಸೇವೆ ಸಲ್ಲಿಸಿದ್ದರು.

“ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ‌‌ ಸಮಾನತೆಯ ಹೋರಾಟವನ್ನು‌ ಮುನ್ನಡೆಸಿದ್ದ ದಲಿತ ಕವಿ, ವಿಧಾನಪರಿಷತ್‌ನ ಮಾಜಿ ಸದಸ್ಯ ಮತ್ತು ನನ್ನ ಆತ್ಮೀಯ ಮಿತ್ರ ಸಿದ್ದಲಿಂಗಯ್ಯನವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಸಾವನ್ನು ಮೀರಿದ ಸಾಹಿತ್ಯದ ಮೂಲಕ ಅವರು ಅಜರಾಮರ. ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ: ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ ತುರ್ತು ಬಳಕೆಗೆ ಅನುಮತಿ ನಿರಾಕರಿಸಿದ ಅಮೆರಿಕಾ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here