Homeಮುಖಪುಟದುರ್ಬಲ ವರ್ಗಗಳಿಗೆ ಮಾರಕ ಪ್ರಾಯವಾದ ಬಜೆಟ್ : ಪ್ರೊ.ಮಹೇಶಚಂದ್ರ ಗುರು

ದುರ್ಬಲ ವರ್ಗಗಳಿಗೆ ಮಾರಕ ಪ್ರಾಯವಾದ ಬಜೆಟ್ : ಪ್ರೊ.ಮಹೇಶಚಂದ್ರ ಗುರು

ರಾಜ್ಯ ರಾಜಧಾನಿ ಬೆಂಗಳೂರು ನಗರಕ್ಕೆ ಹೆಚ್ಚು ಅನುಕೂಲತೆಗಳನ್ನು ಕಲ್ಪಿಸಿ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಯನ್ನು ರಾಜ್ಯ ಸರ್ಕಾರ ಕಡೆಗಣಿಸಿರುವುದು ಬಜೆಟ್ ಮಾನವ ಸ್ಪರ್ಶ ಹೊಂದಿಲ್ಲವೆಂದು ತಿಳಿಸುತ್ತದೆ.

- Advertisement -
- Advertisement -

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಮಂಡಿಸಿದ 2020-21ನೇ ಸಾಲಿನ ಬಜೆಟ್ ಸಮಾಜದ ದಮನಿತ ಜನವರ್ಗಗಳ ಪಾಲಿಗೆ ಒಳಿತು ಮಾಡುವಂತಹ ಗುಣಲಕ್ಷಣಗಳನ್ನು ಒಳಗೊಂಡಿಲ್ಲ. ‘ಕರ್ನಾಟಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಗುರಿ’ ಎಂದು ಮುಖ್ಯಮಂತ್ರಿಗಳು ಮಾಡಿರುವ ಘೋಷಣೆಗೆ ಪ್ರಸ್ತುತ ಬಜೆಟ್ ತದ್ವಿರುದ್ಧವಾಗಿದೆ. ಶಿಕ್ಷಣ, ಆರೋಗ್ಯ, ಆಹಾರ ಭದ್ರತೆ, ಮೂಲ ಸೌಕರ್ಯಗಳ ಅಭಿವೃದ್ಧಿ, ಕೃಷಿ ಕ್ಷೇತ್ರದ ಬೆಳವಣಿಗೆ, ಸೇವಾ ವಲಯದ ಸುಧಾರಣೆ, ಕೈಗಾರಿಕಾಭಿವೃದ್ಧಿ, ಸಾಮಾಜಿಕ ನ್ಯಾಯ ವಿತರಣೆ ಮೊದಲಾದ ಪ್ರಜಾಸತ್ತಾತ್ಮಕ ಹಾಗೂ ವಿತರಣಾತ್ಮಕ ಅಭಿವೃದ್ಧಿ ಆಶಯಗಳಿಗೆ ಪೂರಕವಾದ ಕ್ರಮಗಳನ್ನು ಬಜೆಟ್ ಹೊಂದಿಲ್ಲ.

ಕರ್ನಾಟಕದಿಂದ ಸುಮಾರು 25 ಸಂಸದರನ್ನು ಗೆಲ್ಲಿಸಿರುವ ಯಡಿಯೂರಪ್ಪನವರ ನಾಯಕತ್ವ ಹಾಗೂ ಮತದಾರರ ಆಶಯಗಳಿಗೆ ಕೇಂದ್ರ ಸರ್ಕಾರ ಸುಮಾರು 15 ಸಾವಿರ ಕೋಟಿ ರೂ. ಅನುದಾನ ನೀಡದೇ ಅನ್ಯಾಯವೆಸಗಿರುವುದು ಖಂಡನೀಯ. ರಾಜ್ಯಕ್ಕೆ ನ್ಯಾಯೋಚಿತ ಜಿಎಸ್‍ಟಿ ಪಾಲು ನೀಡದೇ ಇರುವುದು ಪ್ರಸ್ತುತ ಖೋತಾ ಬಜೆಟ್ ಮಂಡನೆಗೆ ಪ್ರಮುಖ ಕಾರಣವಾಗಿದೆ.

ಮುಖ್ಯಮಂತ್ರಿಗಳು ರಾಜ್ಯದ ಆರ್ಥಿಕತೆಗೆ ಮಾರಕಪ್ರಾಯವಾದ ಬಜೆಟ್ ಮಂಡಿಸಿರುವುದು ಪ್ರಜ್ಞಾವಂತರ ಕೆಂಗಣ್ಣಿಗೆ ಗುರಿಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ನಗರಕ್ಕೆ ಹೆಚ್ಚು ಅನುಕೂಲತೆಗಳನ್ನು ಕಲ್ಪಿಸಿ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಯನ್ನು ರಾಜ್ಯ ಸರ್ಕಾರ ಕಡೆಗಣಿಸಿರುವುದು ಬಜೆಟ್ ಮಾನವ ಸ್ಪರ್ಶ ಹೊಂದಿಲ್ಲವೆಂದು ತಿಳಿಸುತ್ತದೆ.

ಹಿಂದಿನ ಬಜೆಟ್‍ಗಳಿಗೆ ಹೋಲಿಸಿದಾಗ ಈ ಬಾರಿ ಮಂಡನೆಯಾಗಿರುವ ಬಜೆಟ್‍ನಲ್ಲಿ ವಿಶೇಷವಾಗಿ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಅನ್ಯಾಯವುಂಟಾಗಿದೆ. ಆಹಾರ ಸಬ್ಸಿಡಿಗೆ ಹಿಂದಿನ ಬಜೆಟ್‍ನಲ್ಲಿ 3555 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈ ಬಾರಿ 2556 ಕೋಟಿ ರೂ.ಗಳನ್ನು ನೀಡಿರುವುದು ಅನ್ನಭಾಗ್ಯ ಯೋಜನೆಯ ಪರಿಣಾಮಕಾರಿ ಅನುಷ್ಟಾನಕ್ಕೆ ಬಹುದೊಡ್ಡ ಪೆಟ್ಟು ನೀಡಲಿದೆ. ಹಿಂದಿನ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಹಸಿವಿನಿಂದ ಸಾಯುವ ಲಕ್ಷಾಂತರ ಜನರ ಅಮೂಲ್ಯ ಜೀವಗಳನ್ನು ಉಳಿಸಲು ಅನ್ನಭಾಗ್ಯ ಯೋಜನೆಯನ್ನು ಘೋಷಿಸಿ ತಮ್ಮ ಅಧಿಕಾರಾವಧಿಯಲ್ಲಿ ಅಲಕ್ಷಿತ ಜನರ ಹಸಿವನ್ನು ನೀಗಿಸಿ ನಿಜವಾದ ಅರ್ಥದಲ್ಲಿ ‘ಅನ್ನಭಾಗ್ಯವಿಧಾತ’ ಎಂಬ ಗೌರವಕ್ಕೆ ಭಾಜನರಾದರು. ಆದರೆ ಯಡಿಯೂರಪ್ಪನವರು ಆರ್ಥಿಕ ಸಂಪನ್ಮೂಲಗಳ ಕೊರತೆಯ ನೆಪದಲ್ಲಿ ಪ್ರಜೆಗಳ ಆಹಾರ ಭದ್ರತೆಗೆ ವಿರುದ್ಧವಾಗಿ ಬಜೆಟ್ ಮಂಡಿಸಿ ಅಸಂಖ್ಯಾತ ಬಡವರ ಬದುಕುವ ಮೂಲಭೂತ ಹಕ್ಕನ್ನು ಕಸಿದುಕೊಂಡಿದ್ದಾರೆ.

ಹಿಂದಿನ ಸರ್ಕಾರಗಳು ಹಲವಾರು ಇತಿಮಿತಿಗಳ ನಡುವೆಯೂ ಅಸಂಖ್ಯಾತ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಬಡವರಿಗೆ ವಸತಿ ಸೌಲಭ್ಯ ನೀಡುವ ಬದ್ಧತೆ ಹೊಂದಿದ್ದವು. ಹಿಂದಿನ ಬಜೆಟ್‍ನಲ್ಲಿ ವಸತಿ ವಲಯಕ್ಕೆ 2057 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈ ಬಾರಿ 1250 ಕೋಟಿ ರೂ.ಗಳನ್ನು ನೀಡಿರುವುದು ಸರ್ಕಾರದ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. ಹಿಂದಿನ ಸರ್ಕಾರಗಳು ದೀನ ದುರ್ಬಲರಿಗೆ ವಿವಿಧ ಕ್ಷೇತ್ರಗಳಲ್ಲಿ ಅನುಕೂಲ ಮಾಡಿಕೊಡಲು 25,688 ಕೋಟಿ ರೂ.ಗಳನ್ನು ಸಬ್ಸಿಡಿಗಾಗಿ ಒದಗಿಸಿದ್ದರೆ ಈ ಬಾರಿ 23,475 ಕೋಟಿ ರೂ. ಗಳನ್ನಷ್ಟೇ ಒದಗಿಸಿರುವುದು ಬಹುಜನರ ಬದುಕನ್ನು ಅತಂತ್ರಗೊಳಿಸಲು ಕಾರಣವಾಗಿದೆ.

ವಿಶೇಷವಾಗಿ ಶಿಕ್ಷಣ ಕ್ಷೇತ್ರಕ್ಕೆ ಹಿಂದಿನ ಸರ್ಕಾರ 538.11 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈ ಸರ್ಕಾರ ಈ ಬಾರಿ 390.46 ಕೋಟಿ ರೂ.ಗಳನ್ನು ಒದಗಿಸಿರುವುದು ಸರಿಯಲ್ಲ. ಅದೇ ರೀತಿ ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗೆ ಹಿಂದಿನ ಸರ್ಕಾರ 538.11 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈ ಸರ್ಕಾರ 390.46 ಕೋಟಿ ರೂ.ಗಳನ್ನು ಒದಗಿಸಿರುವುದು ಬಹುಸಂಖ್ಯಾತ ಮಹಿಳೆಯರು ಮತ್ತು ಮಕ್ಕಳನ್ನು ನಿರ್ಲಕ್ಷಿಸಿರುವುದಕ್ಕೆ ಪುರಾವೆಯಾಗಿದೆ.

ಅಸಂಖ್ಯಾತ ರೈತರ ಬದುಕನ್ನು ಹಸನುಗೊಳಿಸುವ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಿಗೆ ಹಿಂದಿನ ಸರ್ಕಾರ 2865.59 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈ ಬಾರಿ ಸರ್ಕಾರ 2661.32 ಕೋಟಿ ರೂ.ಗಳನ್ನು ಒದಗಿಸಿರುವುದು ತರವಲ್ಲ. ವಿಶೇಷವಾಗಿ ಅತ್ಯಂತ ದುರ್ಬಲ ವರ್ಗಗಳಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಹಿಂದಿನ ಸರ್ಕಾರ 26,930 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈಗಿನ ಸರ್ಕಾರ 26,131 ಕೋಟಿ ರೂ.ಗಳನ್ನು ಒದಗಿಸಿ ಸುಮಾರು 3250 ಕೋಟಿ ರೂ.ಗಳನ್ನು ಕಡಿತಗೊಳಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತಿರುವ ಧಾರ್ಮಿಕ ಅಲ್ಪಸಂಖ್ಯಾತರ ಅಭಿವೃದ್ಧಿಯನ್ನು ಈಗಿನ ಸರ್ಕಾರ ಅಮಾನುಷವಾಗಿ ಕಡೆಗಣಿಸಿದೆ. ಕಳಸಾ ಬಂಡೂರಿ ಯೋಜನೆಗೆ 500 ಕೋಟಿ ರೂ.ಗಳು ಮತ್ತು ಮಹದಾಯಿ ಕುಡಿಯುವ ನೀರಿನ ಯೋಜನೆಗೆ 1500 ಕೋಟಿ ರೂ.ಗಳನ್ನು ಸರ್ಕಾರ ಬಜೆಟ್‍ನಲ್ಲಿ ನಿಗಧಿಗೊಳಿಸಿರುವುದು ಯೋಜನೆಗೆ ತಗಲುವ ಒಟ್ಟು ವೆಚ್ಚಕ್ಕೆ ಅನುಗುಣವಾಗಿಲ್ಲ.

ದೀನ ದುರ್ಬಲ ವರ್ಗಗಳ ಶಿಕ್ಷಣ, ಆರೋಗ್ಯ, ಅಭಿವೃದ್ಧಿ, ಸುರಕ್ಷತೆ ಮೊದಲಾದ ವಿಷಯಗಳಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಮಲತಾಯಿ ಧೋರಣೆ ಅನುಸರಿಸಿರುವುದು ಕೇಂದ್ರ ಬಜೆಟ್ ಮತ್ತು ರಾಜ್ಯ ಬಜೆಟ್‍ಗಳಲ್ಲಿ ಸ್ಪಷ್ಟವಾಗಿ ಕಂಡುಬರುತ್ತದೆ. ವಾಸ್ತವವಾಗಿ ಕರ್ನಾಟಕ ರಾಜ್ಯ ಸರ್ಕಾರದ ಧೋರಣೆ, ಆಯವ್ಯಯ ಮತ್ತು ನಡವಳಿಕೆಗಳು ಎಲ್ಲ ಜನವರ್ಗಗಳ ಒಳಗೊಳ್ಳುವ ಅಭಿವೃದ್ಧಿಗೆ ಪೂರಕವಾಗಿಲ್ಲ. ಇವರನ್ನು ನಂಬಿ ಮತ ನೀಡಿದ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ಸಮುದಾಯಗಳಿಗೆ ಭಾರಿ ನಿರಾಶೆ ಉಂಟಾಗಿದೆ.

ಪ್ರಸ್ತುತ ಬಜೆಟ್‍ನಲ್ಲಿ ನಗರಾಭಿವೃದ್ಧಿ ಮತ್ತು ಕೈಗಾರಿಕಾಭಿವೃದ್ಧಿ ವಲಯಗಳಿಗೆ 55732 ಕೋಟಿ ರೂ.ಗಳನ್ನು ಒದಗಿಸಿರುವುದು ಪ್ರಸ್ತುತ ಸರ್ಕಾರ ಕೈಗಾರಿಕೋದ್ಯಮಿಗಳು, ವ್ಯಾಪಾರಿಗಳು ಮತ್ತಿತರ ಶ್ರೀಮಂತ ಜನವರ್ಗಗಳ ಪರವಾಗಿರುವುದನ್ನು ಸ್ಪಷ್ಟಪಡಿಸುತ್ತದೆ. ಹೊಸ ಕೃಷಿ ನೀತಿಯೊಂದನ್ನು ರೂಪಿಸಲು ಮುಂದಾಗಿದ್ದರೂ ಸಹ ಬಹುಸಂಖ್ಯಾತ ಕೃಷಿಕರ ಸಬಲೀಕರಣಕ್ಕೆ ಹೆಚ್ಚಿನ ಆರ್ಥಿಕ ಸಂಪನ್ಮೂಲಗಳನ್ನು ಒದಗಿಸಿ ಅನ್ನದಾತರ ಬದುಕನ್ನು ಹಸನಾಗಿಸಲು ಪ್ರಸ್ತುತ ಸರ್ಕಾರ ಮುಂದೆ ಬಂದಿಲ್ಲ.

ಮೊಟ್ಟಮೊದಲ ಬಾರಿಗೆ ಮಕ್ಕಳ ಬಜೆಟ್ ಮಂಡಿಸಿದ್ದರೂ ಸಹ ತಾಯಂದಿರು ಮತ್ತು ಮಕ್ಕಳ ಆಹಾರ, ಪೌಷ್ಟಿಕತೆ, ಶಿಕ್ಷಣ, ಆರೋಗ್ಯ, ಸುರಕ್ಷತೆ ಮೊದಲಾದವುಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಆರ್ಥಿಕ ನೆರವು ನೀಡದಿರುವುದು ನಿಜಕ್ಕೂ ದುರಂತದ ವಿಷಯವಾಗಿದೆ. ವಿಶೇಷವಾಗಿ ಮಹಿಳೆಯರು ಮತ್ತು ಯುವಜನರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಅಭಿವೃದ್ಧಿ ಮತ್ತು ಆರ್ಥಿಕಾಭಿವೃದ್ಧಿಗಳ ವಿಷಯಗಳಲ್ಲಿ ಸರ್ಕಾರ ದಿವ್ಯ ಮೌನ ವಹಿಸಿರುವುದು ಪ್ರಸ್ತುತ ಬಜೆಟ್ ಮಾನವ ಸ್ಪರ್ಶರಹಿತವಾಗಿದೆ ಎಂಬುದನ್ನು ಪ್ರಸ್ತುತಪಡಿಸುತ್ತದೆ. ರಾಜ್ಯದ ಅಭಿವೃದ್ಧಿಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವಕ್ಕೆ ಸರ್ಕಾರ ವಿಶೇಷ ಮಹತ್ವ ನೀಡಿದೆಯಾದರೂ ಜನವಿರೋಧಿ ಪ್ರಭುತ್ವ ಮತ್ತು ಬಂಡವಾಳಶಾಹಿಗಳ ಕೂಟದಿಂದ ರಾಜ್ಯದ ಮಹಿಳೆಯರು ಮತ್ತು ದುರ್ಬಲ ವರ್ಗಗಳ ಉದ್ಧಾರ ಸಾಧ್ಯವಿಲ್ಲವೆಂಬ ಅರಿವು ಜನರಲ್ಲಿದೆ.

ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪನವರ ಮನೆಯನ್ನು ಸ್ಮಾರಕವನ್ನಾಗಿ ರೂಪಿಸಲು ಸರ್ಕಾರ ಬಜೆಟ್‍ನಲ್ಲಿ 5 ಕೋಟಿ ರೂ.ಗಳನ್ನು ಮೀಸಲಿಟ್ಟಿರುವುದು ಒಂದು ರಾಜಕೀಯ ಗಿಮಿಕ್ ಆಗಿದೆಯೇ ಹೊರತಾಗಿ ಇಂತಹ ಕ್ರಮದಿಂದ ನಿಜಲಿಂಗಪ್ಪನವರ ಆತ್ಮಕ್ಕೆ ನಿಜಕ್ಕೂ ಶಾಂತಿ ಲಭಿಸುವುದಿಲ್ಲ. ಸರ್ಕಾರಕ್ಕೆ ನಿಜಲಿಂಗಪ್ಪನವರ ಬಗ್ಗೆ ಕಳಕಳಿಯಿದ್ದಲ್ಲಿ ಅವರ ಹುಟ್ಟೂರು ಚಿತ್ರದುರ್ಗ ಜಿಲ್ಲೆಯ ದೊಡ್ಡ ಸಿದ್ದವನ ಹಳ್ಳಿಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಅಲ್ಲಿನ ಸಮಸ್ತ ನಾಗರೀಕರ ಬದುಕನ್ನು ಹಸನುಗೊಳಿಸಿ ಅದನ್ನು ಮಾದರಿ ಗ್ರಾಮವನ್ನಾಗಿ ರೂಪಿಸಬಹುದಿತ್ತು. ಸರ್ದಾರ್ ಪಟೇಲರು ಕೊಳೆಗೇರಿಗಳ ನಡುವೆ ಬಡವರ ಗೋರಿಗಳ ಮೇಲೆ ಅವರ ಭವ್ಯ ಪ್ರತಿಮೆಯನ್ನು ಕೇಂದ್ರ ಸರ್ಕಾರ ಸ್ಥಾಪಿಸಿರುವುದನ್ನು ಕಂಡು ಮೌನವಾಗಿ ರೋಧಿಸುತ್ತಿದ್ದಾರೆ. ಬಸವಣ್ಣ, ಕೆಂಪೇಗೌಡ ಮೊದಲಾದ ಮಹಾಪುರುಷರಿಗೆ ಪ್ರತಿಮೆಗಳು ಮತ್ತು ಸ್ಮಾರಕಗಳನ್ನು ನಿರ್ಮಿಸಲು ಸಾವಿರಾರು ಕೋಟಿ ರೂ.ಗಳನ್ನು ಅನವಶ್ಯಕವಾಗಿ ಖರ್ಚು ಮಾಡುವುದಕ್ಕಿಂತ ಅವರ ಹೆಸರಿನಲ್ಲಿ ಲೋಕಕಲ್ಯಾಣಕ್ಕಾಗಿ ಅಭಿವೃದ್ಧಿ ಯೋಜನೆಗಳನ್ನು ಅನುಷ್ಟಾನಗೊಳಿಸಿದರೆ ನಿಜಕ್ಕೂ ಸಮಾಜಕ್ಕೆ ಲಾಭವುಂಟಾಗುತ್ತದೆ.

ನಿರೀಕ್ಷಿತ ಆದಾಯಕ್ಕೂ ವೆಚ್ಚಕ್ಕೂ ಪ್ರಸ್ತುತ ಬಜೆಟ್‍ನಲ್ಲಿ 4759 ಕೋಟಿ ರೂ.ಗಳ ಅಂತರವಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮಂಡಿಸಿರುವ ಪ್ರಸ್ತುತ ಖೋತಾ ಬಜೆಟ್ ರಾಜ್ಯದ ಎಲ್ಲ ಜಿಲ್ಲೆಗಳು ಮತ್ತು ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಸಂಖ್ಯಾತ ಪ್ರವಾಹ ಪೀಡಿತ ಜನರು ಇಂದಿಗೂ ಕೂಡ ಸೂಕ್ತ ಪ್ರಮಾಣದಲ್ಲಿ ಪರಿಹಾರ ಪಡೆಯದೇ ಬೀದಿಯಲ್ಲಿ ನರಳುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಬರದಿಲ್ಲದಿರುವುದು ಮತ್ತು ವಿತ್ತೀಯ ಕೊರತೆಗಳ ಕಾರಣದಿಂದ ಅನ್ನಭಾಗ್ಯ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಕಡಿಮೆಯಾಗಿರುವುದು ರಾಜ್ಯದ ಮುಂದಿನ ಅಭಿವೃದ್ಧಿ ದೃಷ್ಟಿಯಿಂದ ಆಶಾದಾಯಕ ಬೆಳವಣಿಗೆಯಾಗಿಲ್ಲ.

ಹಿಂದಿನ ಸರ್ಕಾರದ ಹಲವು ಯೋಜನೆಗಳನ್ನು ಯಥಾವತ್ತಾಗಿ ಇಂದಿನ ಸರ್ಕಾರ ಮುಂದುವರೆಸಿದೆಯಾದರೂ ಹೊಸ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲಗಳ ಕೊರತೆ ಎದ್ದು ಕಾಣುತ್ತಿದೆ. ಕರ್ನಾಟಕವೆಂದರೆ ಪ್ರಭಾವಶಾಲಿಗಳು ಐಷಾರಾಮಿ ಜೀವನ ನಡೆಸುವ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲ ಎಂಬ ಸತ್ಯವನ್ನು ಸರ್ಕಾರ ಮನಗಾಣಬೇಕು. ಪ್ರವಾಸೋದ್ಯಮದ ಹೆಸರಿನಲ್ಲಿ ಕ್ಯಾಸಿನೊ ಕ್ಲಬ್‍ಗಳನ್ನು ಸ್ಥಾಪಿಸಿ ಜೂಜುಗಾರಿಕೆ ಮತ್ತು ವೇಶ್ಯಾವಾಟಿಕೆಗಳನ್ನು ಪ್ರೋತ್ಸಾಹಿಸುವುದು ನಾಡಿನ ಘನತೆಯನ್ನು ಕುಗ್ಗಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...